ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದಾವಣಗೆರೆ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ

On: April 3, 2025 5:52 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:03-04-2025

ದಾವಣಗೆರೆ: ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏಪ್ರಿಲ್ 7 ಮತ್ತು 8 ರಂದು ಬೆಳಿಗ್ಗೆ 10.30ಕ್ಕೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಜಿಲ್ಲಾ ಶಾಖೆ ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮವನ್ನು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಉದ್ಘಾಟಿಸುವರು. ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ, ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ, ಹರಿಹರ ಶಾಸಕ ಬಿ.ಪಿ ಹರೀಶ್, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಭೋಜೇಗೌಡ, ಚಿದಾನಂದ ಎಂ.ಗೌಡ, ಡಿ.ಎಸ್ ಅರುಣ್, ಕೆ.ಎಸ್.ನವೀನ್, ಕೆ.ಅಬ್ದುಲ್ ಜಬ್ಬಾರ್, ಡಾ.ಧನಂಜಯ್ ಸರ್ಜಿ, ಡಿ.ಟಿ.ಶ್ರೀನಿವಾಸ್, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಬಂಜಾರ ಅಭಿವೃದ್ದಿ ನಿಗಮದ ಅಧ್ಯಕ್ಷ ಜಯದೇವನಾಯ್ಕ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಾಮನೂರು ಬಸವರಾಜ್, ದೂಡಾ ಅಧ್ಯಕ್ಷ ದಿನೇಶ್.ಕೆ.ಶೆಟ್ಟಿ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ ಬಿ. ಇಟ್ನಾಳ್. ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್, ಪಾಲಿಕೆ ಆಯುಕ್ತರಾದ ರೇಣುಕಾ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜಾಧ್ಯಕ್ಷರಾದ ಸಿ.ಎಸ್ ಷಡಾಕ್ಷರಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರು ಹಾಗೂ ಉಪಾಧ್ಯಕ್ಷರಾಧ ವೀರೇಶ.ಎಸ್.ಒಡೇನಪುರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರೇಣುಕಾದೇವಿ ಭಾಗವಹಿಸುವರು.

ಏಪ್ರಿಲ್ 8 ರಂದು ಸಂಜೆ 5 ಗಂಟೆಯಿಂದ ನಗರದ ನಿಜಲಿಂಗಪ್ಪ ಬಡಾವಣೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment