Home ದಾವಣಗೆರೆ ಚುನಾವಣೆ ಹತ್ತಿರ ಬರಲಿ ಅಶೋಕ್, ವಿಜಯೇಂದ್ರಗೆ ಅಧಿಕಾರ ಇರಲ್ಲ, ಪ್ಯಾರಚೂಟ್ ಮೂಲಕ ಹೆಚ್. ಡಿ. ಕುಮಾರಸ್ವಾಮಿ ಇಳೀತಾರೆ: ಸಿಎಂ ಡಿ ಕೆ ಶಿವಕುಮಾರ್ ವ್ಯಂಗ್ಯ!
ದಾವಣಗೆರೆನವದೆಹಲಿಬೆಂಗಳೂರು

ಚುನಾವಣೆ ಹತ್ತಿರ ಬರಲಿ ಅಶೋಕ್, ವಿಜಯೇಂದ್ರಗೆ ಅಧಿಕಾರ ಇರಲ್ಲ, ಪ್ಯಾರಚೂಟ್ ಮೂಲಕ ಹೆಚ್. ಡಿ. ಕುಮಾರಸ್ವಾಮಿ ಇಳೀತಾರೆ: ಸಿಎಂ ಡಿ ಕೆ ಶಿವಕುಮಾರ್ ವ್ಯಂಗ್ಯ!

Share
ಅಶೋಕ್
Share

ಬೆಂಗಳೂರು: “ಚುನಾವಣೆ ಹತ್ತಿರ ಬರಲಿ ಅಶೋಕ್ ಹಾಗು ವಿಜಯೇಂದ್ರ ಅವರಿಗೆ ಯಾವ ಅಧಿಕಾರವೂ ಇರೋದಿಲ್ಲ. ಬೇರೆಯವರು (ಕುಮಾರಸ್ವಾಮಿ)ಪ್ಯಾರಾಚೂಟ್ ಮೂಲಕ ಇಳಿಯುತ್ತಾರೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ವ್ಯಂಗ್ಯವಾಡಿದ್ದಾರೆ.

“ಅಶೋಕ್, ವಿಜಯೇಂದ್ರ ಅವರ ಕತೆ ಏನಿದ್ದರೂ, ಬರೀ ಬುಟ್ಟಿ ಬೇವಿನ ಸೊಪ್ಪು, ನಂದೇ ಬೆಳಗು ಪೂಜಾರಿ ಅನ್ನೋ ತರಹ. ಕುಮಾರಸ್ವಾಮಿ ಇವರಿಬ್ಬರನ್ನು ಇಳಿಸಿ‌ ನನಗೇನಾದರೂ ಸಿಗಬಹುದಾ ಅಂತಾ ನೋಡುತ್ತಿದ್ದಾರೆ. ಹೀಗಾಗಿ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಬಾಂಬ್ ಹಾಕುತ್ತೇನೆ ಎನ್ನುತ್ತಿದ್ದಾರೆ” ಎಂದೂ ಸಿಎಂ ಅವರು ಛೇಡಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಬಿಜೆಪಿ ಮಾಜಿ‌ ಶಾಸಕ ನೆ.ಲ. ನರೇಂದ್ರಬಾಬು ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಕುಮಾರಸ್ವಾಮಿ ಅವರಿಗೆ ಕೇಂದ್ರದಲ್ಲಿ ದೊಡ್ಡ ಮಂತ್ರಿ ಸ್ಥಾನ ಸಿಕ್ಕಿದೆ. ಅದರ ಮೂಲಕ ಕರ್ನಾಟಕದ 50 ಸಾವಿರ ಜನರಿಗೆ ಉದ್ಯೋಗ ಸಿಗುವಂತೆ ಮಾಡಲಿ. ಅವರಿಗೆ ಎಲ್ಲಿ ಬೇಕೋ ಅಲ್ಲಿ, ಮಂಡ್ಯದಲ್ಲೇ ಬೇಕಾದರೂ ಭೂಸ್ವಾಧೀನ ಮಾಡಿ ಕೊಡೋಣ. ಆದರೆ ಅವರು ನನ್ನನ್ನು ಅಧಿಕಾರದಿಂದ ಇಳಿಸಿ ಬಿಡ್ತೇನೆ, ದೆಹಲಿಯಿಂದ ಬಾಂಬ್ ಹಾಕಿ ಬಿಡ್ತೇನೆ, ಅಲ್ಲೋಲ‌ ಕಲ್ಲೋಲ ಮಾಡಿ ಬಿಡ್ತೇನೆ ಅಂತ ಮಾತಾಡುತ್ತಿದ್ದಾರೆ” ಎಂದು ತಿರುಗೇಟು ನೀಡಿದರು.

Share

Leave a comment

Leave a Reply

Your email address will not be published. Required fields are marked *

Recent Comments

No comments to show.
Related Articles