Home ದಾವಣಗೆರೆ ನಾಟಕ, ಡ್ರಾಮಾ, ಫಿಲಾಸಫಿ, ಬ್ಲಾಕ್ ಮೇಲ್ ಸೇರಿ ಬೇಕಾದಷ್ಟು ನೋಡಿದ್ದೀನಿ, ಗೊಡ್ಡು ಬೆದರಿಕೆಗೆಲ್ಲ ಹೆದರಲ್ಲ: ಹೆಚ್ ಡಿಕೆಗೆ ಡಿಕೆ ಶಿವಕುಮಾರ್ ಸವಾಲ್!
ದಾವಣಗೆರೆಬೆಂಗಳೂರು

ನಾಟಕ, ಡ್ರಾಮಾ, ಫಿಲಾಸಫಿ, ಬ್ಲಾಕ್ ಮೇಲ್ ಸೇರಿ ಬೇಕಾದಷ್ಟು ನೋಡಿದ್ದೀನಿ, ಗೊಡ್ಡು ಬೆದರಿಕೆಗೆಲ್ಲ ಹೆದರಲ್ಲ: ಹೆಚ್ ಡಿಕೆಗೆ ಡಿಕೆ ಶಿವಕುಮಾರ್ ಸವಾಲ್!

Share
ಶಿವಕುಮಾರ್
Share

ನವದೆಹಲಿ: “2007 ರಲ್ಲಿ ಅವರಿಗೆ ಅಧಿಕಾರವಿತ್ತಲ್ಲ. ಇವರೇ ಹರಾಜಿನಲ್ಲಿ ನಿಖಿಲ್ ಗಾಂಧಿ ಕೊಟ್ಟಿದ್ದರಲ್ಲ. ಯಾಕೆ ಮಾಡಲು ಆಗಿಲ್ಲ? ಅಧಿಕಾರದಲ್ಲಿದ್ದಾಗ ಟೋಲ್ ರದ್ದು ಮಾಡದವರು ಈಗ ದೇಶಾದ್ಯಂತ ಟೋಲ್ ಬಂದ್ ಮಾಡಿಸಲು ಪ್ರಧಾನಿ ಮೋದಿಯವರಿಗೆ ಹೇಳಲಿ. ಈ ಗೊಡ್ಡು ಬೆದರಿಕೆಗೆಲ್ಲಾ ಡಿ ಕೆ ಶಿವಕುಮಾರ್ ಹೆದರುವುದಿಲ್ಲ. ಈ ನಾಟಕ, ಡ್ರಾಮಾ, ಫಿಲಾಸಫಿ, ಬ್ಲಾಕ್ ಮೇಲ್ ಎಲ್ಲಾ ಬೇಕಾದಷ್ಟು ನೋಡಿದ್ದೀನಿ. ಇವಕ್ಕೆಲ್ಲಾ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಸಿಎಂ ಡಿ. ಕೆ. ಶಿವಕುಮಾರ್ ಸವಾಲು ಹಾಕಿದ್ದಾರೆ.

ನವದೆಹಲಿಯಲ್ಲಿ ಮಾತನಾಡಿದ ಅವರು ನೈಸ್ ಯೋಜನೆ ಜಾರಿಗೆ ತಮಗೆ ಬೆಂಬಲ ಇರಲಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದರು.

ನಮ್ಮ ಸರ್ಕಾರದ ಜನಪ್ರಿಯತೆಯನ್ನು ಅವರಿಗೆ ತಡೆದುಕೊಳ್ಳಲಾಗುತ್ತಿಲ್ಲ. ಅಸೂಯೆಗೆ ಮದ್ದಿಲ್ಲ ಎಂದು ಹಿಂದೆಯೂ ಹೇಳಿದ್ದೇನೆ, ಈಗಲೂ ಹೇಳುತ್ತಿದ್ದೇನೆ, ನಾಳೆಯೂ ಹೇಳುತ್ತೇನೆ” ಎಂದರು.

ಬ್ಲ್ಯಾಕ್‌ಮೇಲ್ ಹಾಗೂ ಫೋನ್ ಟ್ಯಾಪಿಂಗ್ ತಂತ್ರಕ್ಕೆ ಹೆದರುವುದಿಲ್ಲ

ಕುಮಾರಸ್ವಾಮಿ ಅವರು ಇದು ಭಾಗ 1 ಎಂದು ಹೇಳಿದ್ದಾರೆ ಎಂದು ಕೇಳಿದಾಗ, “ಪಾರ್ಟ್ 1, 2, 3,4 ಸ್ಟಿಂಗ್, ಆರ್ಟಿಫಿಷಿಯಲ್ ಇಂಟೆಲಿಜೆನ್ಸ್, ಅವರ ಹತ್ರ ಇರೋದೆಲ್ಲಾ ಗೊತ್ತಿದೆ. ಚೆನ್ನಿಗಪ್ಪನ ಕಾಲದಿಂದಲೂ ಗೊತ್ತಿದೆ. ಬಾಲ ಗಂಗಾಧರನಾಥ ಸ್ವಾಮೀಜಿ, ನಿರ್ಮಲಾನಂದನಾಥ ಸ್ವಾಮೀಜಿ ಫೋನ್ ನನ್ನೇ ಟ್ಯಾಪ್ ಮಾಡಿಸಿದವರು, ಅವರನ್ನೇ ಬಿಟ್ಟಿಲ್ಲಾ, ನನ್ನನ್ನು ಬಿಡುತ್ತಾರೆಯೇ? ಹಾಗೆಂದು ಭಾವಿಸಿದರೆ ನಮ್ಮಂಥ ಮುಠ್ಠಾಳರು ಯಾರೂ ಇಲ್ಲ. ಅವರು ಮುಖ್ಯಮಂತ್ರಿಯಾಗಿದ್ದಾಗ ನಾನು ಹೆದರಲಿಲ್ಲ, ಈಗ ಹೆದರುತ್ತೇನೆಯೇ? ನನ್ನನ್ನು ದೊಡ್ಡ ಬೆದರಿಕೆ ಹಾಕಿ ಹೆದರಿಸುವ ಅಥವಾ ಬ್ಲ್ಯಾಕ್‌ಮೇಲ್ ಮಾಡುವ ಜಾಯಮಾನ ನನ್ನದಲ್ಲ” ಎಂದರು.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles