Home ದಾವಣಗೆರೆ 2028ರ ಚುನಾವಣೆ ಹೇಗೆ ಎದುರಿಸಬೇಕು ಎನ್ನೋದು ನನಗೆ ಗೊತ್ತಿದೆ, ನಾನು ಫುಟ್ಬಾಲ್ ಆಡುವವನಲ್ಲ, ಚೆಸ್ ಆಡುವವನು: ಡಿಕೆ ಶಿವಕುಮಾರ್
ದಾವಣಗೆರೆನವದೆಹಲಿಬೆಂಗಳೂರು

2028ರ ಚುನಾವಣೆ ಹೇಗೆ ಎದುರಿಸಬೇಕು ಎನ್ನೋದು ನನಗೆ ಗೊತ್ತಿದೆ, ನಾನು ಫುಟ್ಬಾಲ್ ಆಡುವವನಲ್ಲ, ಚೆಸ್ ಆಡುವವನು: ಡಿಕೆ ಶಿವಕುಮಾರ್

Share
ಡಿಕೆ ಶಿವಕುಮಾರ್
Share

ಬೆಂಗಳೂರು: 2028ರ ಚುನಾವಣೆ ಎದುರಿಸುವುದು ನನಗೆ ಗೊತ್ತಿದೆ, ನಾನು ಫುಟ್ಬಾಲ್ ಆಡುವವನಲ್ಲ, ಚೆಸ್ ಆಡುವವನು ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಸಚಿವ ಸಂಪುಟ ಸಹೋದ್ಯೋಗಿಗಳನ್ನು ಸದನಕ್ಕೆ ಪರಿಚಯಿಸಿ ಶಿವಕುಮಾರ್ ಅವರು ಶುಕ್ರವಾರ ಮಾತನಾಡಿದರು.

“2028ರ ಚುನಾವಣೆ ಹೇಗೆ ಎದುರಿಸಬೇಕು ನನಗೆ ಗೊತ್ತಿದೆ. ನಾನು ಫುಟ್ಬಾಲ್ ಆಡುವವನಲ್ಲ, ಚೆಸ್ ಆಡುವವನು. ಜನರ ಸೇವೆ ಮಾಡುವಾಗ ಎಲ್ಲರೂ ಒಂದಾಗಿ ಕೆಲಸ ಮಾಡಬೇಕು. ಇಲ್ಲಿ ಯಾರೂ ಶಾಶ್ವತವಲ್ಲ. ನಾವು ವಿರೋಧ ಪಕ್ಷಕ್ಕೆ ಹೋಗಬಹುದು, ವಿರೋಧ ಪಕ್ಷದವರು ಇಲ್ಲಿಗೆ ಬರಬಹುದು. ಜನರು ನಮ್ಮೆಲ್ಲರನ್ನು ಆಯ್ಕೆ ಮಾಡಿರುವುದು ರಾಜ್ಯದ ಹಿತ ಕಾಪಾಡಲು. ಸಭಾಧ್ಯಕ್ಷರ, ಸ್ಥಾನದಲ್ಲಿ ಕುಳಿತಿರುವ ಟಿ ಬಿ ಜಯಚಂದ್ರ ಅವರು ಹಿರಿಯರು. ಆ ಸ್ಥಾನದ ಮಹಿಮೆ ದೊಡ್ಡದು. ಅದನ್ನು ಅಲಂಕರಿಸಿದ ಕೃಷ್ಣ ಅವರು ಸಿಎಂ ಆದರು, ಅಲ್ಲಿ ಕುಳಿತಿದ್ದ ಜಗದೀಶ್ ಶೆಟ್ಟರ್ ಅವರು ಸಿಎಂ ಆದರು. ಖಾದರ್ ಅವರು ಅಲ್ಲಿ ಕೂತು ಈಗ ಡಬಲ್ ಇಲಾಖೆ ಧಮಾಕದೊಂದಿಗೆ ಇಲ್ಲಿ ಕೂತಿದ್ದಾರೆ. ಎಲ್ಲರೂ ಭರವಸೆಯಿಂದ ಇರೋಣ” ಎಂದರು.

“ಈ ಸದನಕ್ಕೆ ನಮ್ಮ ಸಚಿವರನ್ನು ವಿರೋಧ ಪಕ್ಷದವರಿಗೆ ಪರಿಚಯಿಸಬೇಕು ಎಂಬುದು ನಮ್ಮ ಆಸೆ. ಆದರೆ ಅವರು ಇಲ್ಲಿ ಇಲ್ಲ. ಟಿವಿ ಮೂಲಕ ಇದನ್ನು ನೋಡುತ್ತಿರಬಹುದು” ಎಂದು ತಮ್ಮ ಸಚಿವರನ್ನು ಸದನಕ್ಕೆ ಪರಿಚಯಿಸಿದರು.

Share

Leave a comment

Leave a Reply

Your email address will not be published. Required fields are marked *

Related Articles