SUDDIKSHANA KANNADA NEWS/ DAVANAGERE/ DATE:16_07_2025
ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಲೆಂದು ಪ್ರಾರ್ಥಿಸಿ ಕಾಂಗ್ರೆಸ್ ಯುವ ಮುಖಂಡ ಜಯಪ್ರಕಾಶ್ ಸಾರಥಿ ನೇತೃತ್ವದಲ್ಲಿ ದಾವಣಗೆರೆಯ ದುರ್ಗಾಂಬಿಕೆ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
READ ALSO THIS STORY: ಜುಲೈ 17ರ ನಾಳೆ ದಾವಣಗೆರೆಯ ಬಹುತೇಕ ಕಡೆ ಬೆಳಿಗ್ಗೆ 10ರಿಂದ ಸಂಜೆ 5ಗಂಟೆಯವರೆಗೆ ವಿದ್ಯುತ್ ವ್ಯತ್ಯಯ
ಈ ವೇಳೆ ಮುಖ್ಯಮಂತ್ರಿಯಾಗಿ ಡಿ. ಕೆ. ಶಿವಕುಮಾರ್ ಸಿಎಂ ಆಗಲೆಂದು ವರ ಕೊಡು ತಾಯಿ ಎಂದು ಪ್ರಾರ್ಥಿಸಲಾಯಿತು. ಈ ವೇಳೆ ಕಾಯಿಗಳನ್ನು ಒಡೆದು ವಿಶೇಷವಾಗಿ ಪ್ರಾರ್ಥನೆ ಸಲ್ಲಿಸಿದರಲ್ಲದೇ, ಡಿ. ಕೆ. ಶಿವಕುಮಾರ್ ಪರ ಜೈಕಾರ ಹಾಕಿದರು.
ಪೂಜೆ ನೆರವೇರಿಸಿದ ಬಳಿಕ ಮಾತನಾಡಿದ ಜಯಪ್ರಕಾಶ್ ಸಾರಥಿ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಡಿ. ಕೆ. ಶಿವಕುಮಾರ್ ಅವರ ಭಾರೀ ಪರಿಶ್ರಮವಿದೆ. 2023ರಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ನಾಡಿನಾದ್ಯಂತ ಸುತ್ತಿದ್ದಾರೆ. ಹಗಲು ರಾತ್ರಿ ಎನ್ನದೇ ದುಡಿದಿದ್ದಾರೆ. ಪಕ್ಷ ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಕಾರಣಕರ್ತರು. ಪಕ್ಷದ ಶಿಸ್ತಿನ ಸಿಪಾಯಿಯಾಗಿ ಇಂದೂ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದಾರೆ. ಮುಂಬರುವ ನವೆಂಬರ್ 28ರ ನಂತರ ಡಿ. ಕೆ. ಶಿವಕುಮಾರ್ ಅವರು ಸಿಎಂ ಆಗುತ್ತಾರೆಂಬ ವಿಶ್ವಾಸ ನಮಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 135 ಸ್ಥಾನಗಳ ಗೆಲುವಿಗೆ ರಣತಂತ್ರ ರೂಪಿಸಿದವರು ಡಿ. ಕೆ. ಶಿವಕುಮಾರ್. ಪಕ್ಷಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡಿದ್ದಾರೆ. ಒಡಂಬಡಿಕೆ ಆಗಿದ್ದರೆ ಸಿದ್ದರಾಮಯ್ಯ ಅವರು ಸಿಎಂ ಸ್ಥಾನ ಬಿಟ್ಟುಕೊಡಬೇಕು. ಈ ಬಗ್ಗೆ ನಮಗೆ ಗೊತ್ತಿಲ್ಲ. ಪಕ್ಷ ಸಂಘಟಿಸಿ, ಅಧಿಕಾರಕ್ಕೆ ತಂದಿರುವ ಡಿ. ಕೆ. ಶಿವಕುಮಾರ್ ಅವರು ನಮ್ಮ ನಾಯಕರು. ಅವರು ಮುಖ್ಯಮಂತ್ರಿಯಾಗಲೆಂದು ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಿದ್ದೇವೆ. ಸಿಎಂ ಆಗಿಯೇ ಆಗುತ್ತಾರೆ ಎಂಬ ಬಲವಾದ ವಿಶ್ವಾಸ ನಮ್ಮೆಲ್ಲರಿಗೂ ಇದೆ ಎಂದು ಹೇಳಿದರು.
ಪೂಜೆ ಸಲ್ಲಿಸುವ ವೇಳೆ ಕಾಂಗ್ರೆಸ್ ಯುವ ಮುಖಂಡರಾದ ಮೆಹಬೂಬ್ ಬಾಷಾ, ದರ್ಶನ್, ಪ್ರಮೋದ್, ಪ್ರಜ್ವಲ್, ಹಾಗೂ ಇನ್ನು ಅನೇಕ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.