ಬೆಂಗಳೂರು: “ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಂದ ಮತಕ್ಕಿಂತ ಈ ಬಾರಿಯ ಉಪಚುನಾವಣೆಯಲ್ಲಿ ಹೆಚ್ಚು ಮತ ಬೀಳಲಿದ್ದು, ನಮ್ಮ ಅಭ್ಯರ್ಥಿಗಳು ಹೆಚ್ಚು ಮತಗಳ ಅಂತರದಲ್ಲಿ ಗೆಲ್ಲಲಿದ್ದಾರೆ” ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.
ಉಪಚುನಾವಣೆ ಪ್ರಚಾರದ ಬಗ್ಗೆ ಕೇಳಿದಾಗ, “ದಾವಣಗೆರೆ ಹಾಗೂ ಬಾಗಲಕೋಟೆಯ ಉಪಚುನಾವಣೆ ಪ್ರಚಾರ ಮಾಡಿ ಬಂದಿದ್ದೇನೆ. ನಮ್ಮ ಕಾರ್ಯಕರ್ತರು ಬಹಳ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರತಿ ಮನೆ ಮನೆಗೆ ಹೋಗಿ ಗ್ಯಾರಂಟಿ ಯೋಜನೆಗಳ ಬಗ್ಗೆ ಮನವರಿಕೆ ಮಾಡುತ್ತಿದ್ದಾರೆ. ಗ್ಯಾರಂಟಿ ಫಲಾನುಭವಿಗಳಲ್ಲಿ ಕಳೆದ ಬಾರಿ ಬಿಜೆಪಿಗೆ ಮತ ಹಾಕಿರುವವರೂ ಕೂಡ ಈ ಬಾರಿ ಕಾಂಗ್ರೆಸ್ ಗೆ ಮತ ಹಾಕುವುದಾಗಿ ತಿಳಿಸಿದ್ದಾರೆ. ಬೆಲೆ ಏರಿಕೆಯಾಗುತ್ತಿರುವ ಪರಿಸ್ಥಿತಿಯಲ್ಲಿ ಗ್ಯಾರಂಟಿ ಯೋಜನೆ ಎಷ್ಟು ನೆರವಾಗುತ್ತಿವೆ ಎಂದು ಸ್ಮರಿಸುತ್ತಿದ್ದಾರೆ. ಇವುಗಳನ್ನು ಉಳಿಸಿಕೊಳ್ಳಲು ಜನ ತೀರ್ಮಾನಿಸಿದ್ದಾರೆ” ಎಂದು ತಿಳಿಸಿದರು.
ಕೇರಳ ಚುನಾವಣಾ ಪ್ರಚಾರಕ್ಕೆ ತೆರಳುತ್ತಿರುವ ಬಗ್ಗೆ ಕೇಳಿದಾಗ, “ಕೇರಳ ಚುನಾವಣೆ ಪ್ರಚಾರಕ್ಕೆ ಎರಡು ದಿನ ಪ್ರವಾಸ ಮಾಡಬೇಕಾಗಿದ್ದು, ಅಲ್ಲಿ ಪ್ರವಾಸ ಮಾಡಿ ಬಂದ ಬಳಿಕ, ಇಲ್ಲಿ ದಾವಣಗೆರೆ ಅಥವಾ ಬಾಗಲಕೋಟೆಗೆ ತೆರಳುತ್ತೇನೆ” ಎಂದು
ತಿಳಿಸಿದರು.





Leave a comment