Home ದಾವಣಗೆರೆ ಬಿಡದಿ ಟೌನ್‌ಶಿಪ್ ಬಗ್ಗೆ “ಧೈರ್ಯವಿದ್ದರೆ ಅಧಿವೇಶನದಲ್ಲಿ ಚರ್ಚಿಸಿ”: ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಸಿಎಂ ಡಿ ಕೆ ಶಿವಕುಮಾರ್ ನೇರ ಸವಾಲು!
ದಾವಣಗೆರೆನವದೆಹಲಿಬೆಂಗಳೂರು

ಬಿಡದಿ ಟೌನ್‌ಶಿಪ್ ಬಗ್ಗೆ “ಧೈರ್ಯವಿದ್ದರೆ ಅಧಿವೇಶನದಲ್ಲಿ ಚರ್ಚಿಸಿ”: ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಸಿಎಂ ಡಿ ಕೆ ಶಿವಕುಮಾರ್ ನೇರ ಸವಾಲು!

Share
ಡಿ ಕೆ ಶಿವಕುಮಾರ್
Share

ಬೆಂಗಳೂರು: “ಬಿಡದಿ ಟೌನ್ ಶಿಪ್ ವಿಚಾರದಲ್ಲಿ ಸತ್ಯವನ್ನು ಮುಚ್ಚಿಡಲು ಯಾರಿಂದಲೂ ಸಾಧ್ಯವಿಲ್ಲ. ಅಧಿವೇಶನದಲ್ಲಿ ಬಂದು ಚರ್ಚೆ ಮಾಡಲಿ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಕೆಪಿಸಿಸಿ ಭಾರತ ಜೋಡೋ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು.

ಬಿಡದಿ ಟೌನ್ ಶಿಪ್ ವಿರೋಧಿಸಿ ಜೆಡಿಎಸ್ ಹಾಗೂ ಬಿಜೆಪಿ ಪಾದಯಾತ್ರೆ ವಿತಾರವಾಗಿ ಕೇಳಿದಾಗ “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಪ್ರತಿಭಟನೆ, ಪಾದಯಾತ್ರೆ ಮಾಡುವ ಹಕ್ಕಿದೆ. ಅವರು ಏನುಬೇಕಾದರೂ ಮಾಡಲಿ. ಅಧಿವೇಶನದಲ್ಲಿ ಬಂದು ಮಾತನಾಡಲಿ. ಎಲ್ಲೆಲ್ಲಿ ದೂರು ನೀಡುತ್ತಾರೋ ನೀಡಲಿ, ನಾವು ಯಾರಿಗೂ ಬಲವಂತ ಮಾಡುತ್ತಿಲ್ಲ. ಯಾವ ಸಂದರ್ಭದಲ್ಲಿ ಯಾವ ಉತ್ತರ ಕೊಡಬೇಕೋ ಕೊಡುತ್ತೇವೆ” ಎಂದು ತಿಳಿಸಿದರು.

Share

Leave a comment

Leave a Reply

Your email address will not be published. Required fields are marked *