ದಾವಣಗೆರೆ: “ಭಾನುವಾರ ರಾತ್ರಿ ಬಿಜೆಪಿಯ ಕಾರ್ಯಕರ್ತರು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷ ಸೇರ್ಪಡೆಯಾಗಲು ಇನ್ನು ಹಲವರು ಮುಂದಾಗಿದ್ದು, ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಆಯ್ಕೆ ಗೊಂದಲದಿಂದ ಕಾಂಗ್ರೆಸ್ ಸೇರುತ್ತಿರುವವರನ್ನು ನಾವು ಪಕ್ಷಕ್ಕೆ ಸ್ವಾಗತಿಸುತ್ತಿದ್ದೇವೆ. ಇದರ ಜವಾಬ್ದಾರಿಯನ್ನು ಸ್ಥಳೀಯ ಬ್ಲಾಕ್ ಅಧ್ಯಕ್ಷರು, ಜಿಲ್ಲಾ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಲ್ಲಿಕಾರ್ಜುನ್ ಅವರಿಗೆ ವಹಿಸಿದ್ದೇನೆ. ಇಲ್ಲಿ ಯಾರೂ ಆಂತಕಕ್ಕೆ ಒಳಗಾಗುವುದು ಬೇಡ. ಪಕ್ಷ ಸಿದ್ಧಾಂತದ, ನಾಯಕತ್ವದ ಮೇಲೆ ನಂಬಿಕೆ ಇಟ್ಟು ಬರುವಂತಹ ಜನರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ” ಎಂದರು.
“ನಾವು ದಾವಣಗೆರೆ ಜಿಲ್ಲೆ ಬೆಂಗಳೂರಿಗಿಂತ ಬಹಳ ಉತ್ತಮವಾಗಿ ಯೋಜಿತವಾಗಿ ರೂಪುಗೊಂಡಿರುವ ನಗರವಾಗಿದೆ. ಇದರ ಅಭಿವೃದ್ಧಿಗೆ ನೂರಾರು ಕೋಟಿ ರೂ. ಮೊತ್ತದ ಪ್ಯಾಕೇಜ್ ಗಳನ್ನು ನೀಡಲಾಗಿದೆ. ಈ ಭಾಗಕ್ಕೆ ಶಾಮನೂರು ಶಿವಶಂಕರಪ್ಪ ಅವರು ಕೊಟ್ಟಿರುವ ಕೊಡುಗೆ, ಶಿಕ್ಷಣ ಸಂಸ್ಥೆ ಆ ಮೂಲಕ ಈ ಜಿಲ್ಲೆ ಶಿಕ್ಷಣ ಕೇಂದ್ರವಾಗಿ ರೂಪುಗೊಂಡಿದೆ. ಈ ಜಿಲ್ಲೆಯ ಈ ಪ್ರಗತಿಗೆ ಕೊಡುಗೆ ನೀಡಿದ್ದು ಶಾಮನೂರು ಶಿವಶಂಕರಪ್ಪ ಅವರ ಕುಟುಂಬ ಹಾಗೂ ಅವರ ಸಂಸ್ಥೆ. ಇದೆಲ್ಲವನ್ನು ಜನ ಸ್ಮರಿಸುತ್ತಿದ್ದಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
“ಎಲ್ಲರಿಗೂ ಗ್ಯಾರಂಟಿ ಯೋಜನೆಗಳು ತಲುಪುತ್ತಿವೆ. ಎಲ್ಲಾ ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಲು ನೀಡಿರುವ ಕೊಡುಗೆಯನ್ನು ಜನ ಸ್ಮರಿಸುತ್ತಿದ್ದಾರೆ. ಈ ಎಲ್ಲಾ ಹಿನ್ನೆಲೆಯಲ್ಲಿ ನಮ್ಮ ಅಭ್ಯರ್ಥಿ ಸಮರ್ಥ್ ಅವರು ಉಪಚುನಾವಣೆಯಲ್ಲಿ ಗೆಲುವು ಸಾಧಿಸಲಿದ್ದಾರೆ. ಸ್ಥಳೀಯ ಮಾಧ್ಯಮಗಳು ನಮಗೆ ತಮ್ಮ ಮನವಿ ಸಲ್ಲಿಸಿದ್ದು, ನಾವು ಬೆಂಗಳೂರಿಗೆ ಹೋದ ಬಳಿಕ ಕೂತು ಚರ್ಚೆ ಮಾಡಿ ಈ ವಿಚಾರವಾಗಿ ಯಾವ ರೀತಿ ನೀತಿ ರೂಪಿಸಬೇಕು ಎಂದು ಚರ್ಚೆ ಮಾಡಿ ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ” ಎಂದು ಹೇಳಿದರು.
- BJP to Congress Migration
- Davanagere Politics
- DK Shivakumar
- Guarantee Schemes
- Karnataka By-elections
- KPCC President
- Mallikarjun
- Operation Hastha
- Political Shift Karnataka.
- Shamanur Shivashankarappa
- ಆಪರೇಷನ್ ಹಸ್ತ.
- ಉಪಚುನಾವಣೆ
- ಕರ್ನಾಟಕ ರಾಜಕೀಯ
- ಕಾಂಗ್ರೆಸ್ ಸೇರ್ಪಡೆ
- ಗ್ಯಾರಂಟಿ ಯೋಜನೆಗಳು
- ಡಿ. ಕೆ. ಶಿವಕುಮಾರ್
- ದಾವಣಗೆರೆ ರಾಜಕೀಯ
- ಬಿಜೆಪಿ ವಲಸೆ
- ಮಲ್ಲಿಕಾರ್ಜುನ್
- ಶಾಮನೂರು ಶಿವಶಂಕರಪ್ಪ





Leave a comment