ದಾವಣಗೆರೆ: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಏಳೂವರೆ ವರ್ಷ ಅಧಿಕಾರ ಅನುಭವಿಸಿದ್ದಾರೆ. ಉಪಮುಖ್ಯಮಂತ್ರಿಯೂ ಆದ ಡಿಸಿಎಂ ಡಿ. ಕೆ. ಶಿವಕುಮಾರ್ ಎರಡು ವರ್ಷವಾದರೂ ಮುಖ್ಯಮಂತ್ರಿ ಆಗಲೇಬೇಕು ಎಂದು ಚನ್ನಗಿರಿ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಹೇಳಿದ್ದಾರೆ.
READ ALSO THIS STORY: ಅಪ್ರಾಪ್ತರಿಗೆ ಬೈಕ್ ಕೊಡ್ತೀರಾ ಪೋಷಕರೇ ಹುಷಾರ್: 2 ದಿನಗಳಲ್ಲೇ 60ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳ ಜಫ್ತಿ!
ಮಾಧ್ಯಮದವರೊದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯಾಗಿ ಡಿ. ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಳ್ಳಬೇಕು. ಹೈಕಮಾಂಡ್ ದೆಹಲಿಗೆ ಬರುವಂತೆ ಡಿ. ಕೆ. ಶಿವಕುಮಾರ್ ಅವರಿಗೆ ಹೇಳಿರುವುದು ಉತ್ತಮ ಬೆಳವಣಿಗೆ ಎಂದು ಹೇಳಿದರು.
ಮಕರ ಸಂಕ್ರಾಂತಿ ಹಬ್ಬ ಮುಗಿದಿದೆ. ಸೂರ್ಯ ಪಥ ಬದಲಿಸಿದ್ದಾನೆ. ಈ ಹಿಂದೆ ನಾನು ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಹೇಳಿದ್ದೆ. ಅದು ನಿಜವಾಗುವ ಕಾಲ ಹತ್ತಿರವಾಗುತ್ತಿದೆ. ಡಿ. ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ ಎಂಬ ವಿಶ್ವಾಸ ಇದೆ. ಹೈಕಮಾಂಡ್ ತೀರ್ಮಾನದ ಬಗ್ಗೆ ನಾವೂ ಕಾಯುತ್ತಿದ್ದೇವೆ. ಒಳ್ಳೆಯ ಸುದ್ದಿ ಬರುತ್ತದೆ ಎಂಬ ವಿಶ್ವಾಸ ನಮ್ಮದು ಎಂದು ಹೇಳಿದರು.
ಮುಖ್ಯಮಂತ್ರಿ ಬದಲಾವಣೆ ಆದರೆ ಸಚಿವ ಸಂಪುಟವೂ ಬದಲಾಗುತ್ತದೆ. ಹೊಸಬರಿಗೆ ಅವಕಾಶ ಸಿಗಬೇಕು. ನಾನು ಸಚಿವ ಸ್ಥಾನ ಆಕಾಂಕ್ಷಿ ಎಂದು ಹೇಳುವುದಿಲ್ಲ. ಯಾವ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ. ಕಸ ಗುಡಿಸುವ ಕೆಲಸ ಕೊಟ್ಟರೂ ಮಾಡುತ್ತೇನೆ. ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಿದ್ದೇವೆ ಎಂದು ಶಿವಗಂಗಾ ಬಸವರಾಜ್ ಹೇಳಿದ್ದಾರೆ.
- Basavaraju V. Shivaganga
- Basavaraju V. Shivaganga Congress Mla
- Basavaraju V. Shivaganga News
- Basavaraju V. Shivaganga Talk
- Mla
- ಚನ್ನಗಿರಿ ಕಾಂಗ್ರೆಸ್ ಶಾಸಕ
- ಬಸವರಾಜ್ ವಿ. ಶಿವಗಂಗಾ
- ಬಸವರಾಜ್ ವಿ. ಶಿವಗಂಗಾ ಗರಂ
- ಬಸವರಾಜ್ ವಿ. ಶಿವಗಂಗಾ ನ್ಯೂಸ್
- ಬಸವರಾಜ್ ವಿ. ಶಿವಗಂಗಾ ಮಾತು
- ಬಸವರಾಜ್ ವಿ. ಶಿವಗಂಗಾ ಸಿಟ್ಟು
- ಬಸವರಾಜ್ ವಿ. ಶಿವಗಂಗಾ- ಚನ್ನಗಿರಿ ಕಾಂಗ್ರೆಸ್ ಶಾಸಕ





Leave a comment