Home ದಾವಣಗೆರೆ “ಇದು ಕೇವಲ ಜವಾಬ್ದಾರಿಯಲ್ಲ, ಕನ್ನಡಿಗರ ಕನಸು ನನಸು ಮಾಡುವ ಪವಿತ್ರ ಕರ್ತವ್ಯ”: ಸಿಎಂ ಡಿ.ಕೆ. ಶಿವಕುಮಾರ್
ದಾವಣಗೆರೆನವದೆಹಲಿಬೆಂಗಳೂರು

“ಇದು ಕೇವಲ ಜವಾಬ್ದಾರಿಯಲ್ಲ, ಕನ್ನಡಿಗರ ಕನಸು ನನಸು ಮಾಡುವ ಪವಿತ್ರ ಕರ್ತವ್ಯ”: ಸಿಎಂ ಡಿ.ಕೆ. ಶಿವಕುಮಾರ್

Share
ಡಿ.ಕೆ. ಶಿವಕುಮಾರ್
Share

ಬೆಂಗಳೂರು: “ಜನರಿಂದ, ಜನರಿಗಾಗಿ, ಜನರಿಗೋಸ್ಕರ” ಎಂಬ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುವುದಾಗಿ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದ್ದಾರೆ.

ಲೋಕಭವನದಲ್ಲಿ ಇಂದು ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಅವರು, ತಮಗೆ ಈ ಜವಾಬ್ದಾರಿ ನೀಡಿದ ಕೋಟ್ಯಂತರ ಕನ್ನಡಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಗೆ ತಲೆಬಾಗಿ ಕೃತಜ್ಞತೆ ಸಲ್ಲಿಸಿದರು.

ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಭಾವನಾತ್ಮಕ ಸಂದೇಶ ಹಂಚಿಕೊಂಡಿರುವ ಸಿಎಂ, “ಇಂದು ನನ್ನ ಹೆಗಲ ಮೇಲಿರುವುದು ಕೇವಲ ಮುಖ್ಯಮಂತ್ರಿಯ ಜವಾಬ್ದಾರಿಯಲ್ಲ, ಬದಲಿಗೆ ಕೋಟ್ಯಂತರ ಕನ್ನಡಿಗರ ಕನಸುಗಳನ್ನು ನನಸು ಮಾಡುವ ಪವಿತ್ರ ಕರ್ತವ್ಯ” ಎಂದು ತಿಳಿಸಿದ್ದಾರೆ. ತಂತ್ರಜ್ಞಾನದ ಇಂದಿನ ವೇಗದ ಯುಗದಲ್ಲಿ ರೈತರು, ಶ್ರಮಿಕರು, ಮಹಿಳೆಯರು, ವಿದ್ಯಾರ್ಥಿಗಳು ಹಾಗೂ ಯುವಜನರ ಒಟ್ಟಾರೆ ಸಹಭಾಗಿತ್ವದೊಂದಿಗೆ ಒಗ್ಗಟ್ಟಿನಿಂದ ನವ ಕರ್ನಾಟಕವನ್ನು ಅಭಿವೃದ್ಧಿಯ ಅತ್ಯುನ್ನತ ಶಿಖರಕ್ಕೆ ಕೊಂಡೊಯ್ಯುವುದಾಗಿ ಅವರು ಸಂಕಲ್ಪ ಮಾಡಿದ್ದಾರೆ.

ಇಂದು ನನ್ನ ಹೆಗಲ ಮೇಲಿರುವುದು ಕೇವಲ ಮುಖ್ಯಮಂತ್ರಿಯ ಜವಾಬ್ದಾರಿಯಲ್ಲ, ಬದಲಿಗೆ ಕೋಟ್ಯಂತರ ಕನ್ನಡಿಗರ ಕನಸುಗಳನ್ನು ನನಸು ಮಾಡುವ ಪವಿತ್ರ ಕರ್ತವ್ಯ. ಈ ಅವಕಾಶವನ್ನು ನನಗೆ ಕರುಣಿಸಿದ ಹಿರಿಯರಿಗೆ, ಮಾರ್ಗದರ್ಶಕರಿಗೆ ಹಾಗೂ ನನ್ನ ಶಕ್ತಿಯಾಗಿ ನಿಂತ ಪ್ರತಿಯೊಬ್ಬರಿಗೂ ನನ್ನ ಹೃದಯಪೂರ್ವಕ ಕೃತಜ್ಞತೆಗಳು.
ವೇಗವಾಗಿ ಬದಲಾಗುತ್ತಿರುವ ಇಂದಿನ ತಂತ್ರಜ್ಞಾನದ ಯುಗದಲ್ಲಿ, ಹೊಸ ಆಲೋಚನೆಗಳೊಂದಿಗೆ ನಮ್ಮ ಹೆಮ್ಮೆಯ ಕರ್ನಾಟಕವನ್ನು ಅಭಿವೃದ್ಧಿಯ ಅತ್ಯುನ್ನತ ಶಿಖರಕ್ಕೆ ಕೊಂಡೊಯ್ಯಬೇಕಿದೆ. ಈ ಸರ್ವತೋಮುಖ ಪ್ರಗತಿಯ ದಾರಿಯಲ್ಲಿ ರೈತರು, ಶ್ರಮಿಕರು, ಮಹಿಳೆಯರು, ವಿದ್ಯಾರ್ಥಿಗಳು, ಯುವಜನರು ಹಾಗೂ ಪ್ರತಿಯೊಬ್ಬ ನಾಗರಿಕರ ಸಹಭಾಗಿತ್ವ ನಮಗೆ ಮುಖ್ಯ. ಯಾವುದೇ ಒಬ್ಬ ವ್ಯಕ್ತಿಯಿಂದ ಬದಲಾವಣೆ ಸಾಧ್ಯವಿಲ್ಲ, ಆದರೆ ನಾವೆಲ್ಲರೂ ಕೈಜೋಡಿಸಿದರೆ ಅಸಾಧ್ಯವಾದುದು ಯಾವುದೂ ಇಲ್ಲ. ಬನ್ನಿ, ನಮ್ಮ ಭವಿಷ್ಯದ ಪೀಳಿಗೆ ಹೆಮ್ಮೆ ಪಡುವಂತಹ ಸುಂದರ, ಸಮೃದ್ಧ ಮತ್ತು ಪ್ರಗತಿಪರ ಕರ್ನಾಟಕವನ್ನು ಕಟ್ಟೋಣ ಎಂದು ಡಿ. ಕೆ. ಶಿವಕುಮಾರ್ ಕರೆ ಕೊಟ್ಟಿದ್ದಾರೆ.
Share

Leave a comment

Leave a Reply

Your email address will not be published. Required fields are marked *