Home ದಾವಣಗೆರೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೆಸರಲ್ಲಿ ಪ್ರಧಾನಿಗೆ ಪತ್ರ? ವೈರಲ್ ಪತ್ರದ ಅಸಲಿಯತ್ತು ಇಲ್ಲಿದೆ!
ದಾವಣಗೆರೆಕ್ರೈಂ ನ್ಯೂಸ್ಬೆಂಗಳೂರು

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೆಸರಲ್ಲಿ ಪ್ರಧಾನಿಗೆ ಪತ್ರ? ವೈರಲ್ ಪತ್ರದ ಅಸಲಿಯತ್ತು ಇಲ್ಲಿದೆ!

Share
ಮುಖ್ಯಮಂತ್ರಿ
Share

ಬೆಂಗಳೂರು: ರಾಜ್ಯದಲ್ಲಿ ತೀವ್ರಗೊಂಡಿರುವ ಬರ ಪರಿಸ್ಥಿತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದಿದ್ದಾರೆ ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಸಾರ್ವಜನಿಕರಲ್ಲಿ ತೀವ್ರ ಗೊಂದಲ ಮೂಡಿಸಿದೆ.

ವೈರಲ್ ಆಗಿರುವ ಈ ಪತ್ರದ ಲೆಟರ್‌ಹೆಡ್‌ನಲ್ಲಿ “ಡಿ.ಕೆ. ಶಿವಕುಮಾರ್ – ಮುಖ್ಯಮಂತ್ರಿ” (D K SHIVAKUMAR CHIEF MINISTER) ಎಂದು ನಮೂದಿಸಲಾಗಿದ್ದು, ಇದು ಸಂಪೂರ್ಣ ನಕಲಿ ಹಾಗೂ ಫೇಕ್ ಪತ್ರ ಎಂಬುದು ಸ್ಪಷ್ಟವಾಗಿದೆ.

ಪತ್ರದಲ್ಲೇನಿದೆ? ಪತ್ರದಲ್ಲಿ ರಾಜ್ಯದ ಬರ ಪರಿಸ್ಥಿತಿಯನ್ನು ವಿವರಿಸಿ, ಕೇಂದ್ರ ಸರ್ಕಾರದಿಂದ ಮಧ್ಯಂತರ ಪರಿಹಾರವಾಗಿ ಶೇ. 50 ರಷ್ಟು ಹಣ ಹಾಗೂ SDRF ನ ಎರಡನೇ ಕಂತಿನ ಮೊತ್ತವನ್ನು ತಕ್ಷಣ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ. ಅಲ್ಲದೆ, ರಾಜ್ಯದಲ್ಲಿ ಹೆಚ್ಚುವರಿಯಾಗಿ 76 ತಾಲೂಕುಗಳನ್ನು ಸೇರಿಸಿ ಒಟ್ಟು 177 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಸುಮಾರು 40 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಬೆಳೆ ಹಾನಿಯಾಗಿದೆ ಎಂದು ಉಲ್ಲೇಖಿಸಲಾಗಿದೆ.

ಅಸಲಿಯತ್ತು ಏನು? ಕರ್ನಾಟಕ ರಾಜ್ಯದ ಪ್ರಸ್ತುತ ಮುಖ್ಯಮಂತ್ರಿಗಳಾಗಿ ಸಿದ್ದರಾಮಯ್ಯ ಕಾರ್ಯನಿರ್ವಹಿಸುತ್ತಿದ್ದು, ಡಿ.ಕೆ. ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿದ್ದಾರೆ. ಆದರೆ ವೈರಲ್ ಆಗಿರುವ ಈ ಪತ್ರದಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಎಂದು ತಪ್ಪಾಗಿ ಬಿಂಬಿಸಲಾಗಿದ್ದು, ವಿಳಾಸದಲ್ಲೂ ವ್ಯತ್ಯಾಸಗಳಿವೆ. ಆದ್ದರಿಂದ ಸಾರ್ವಜನಿಕರು ಹಾಗೂ ನೆಟ್ಟಿಗರು ಇಂತಹ ನಕಲಿ ಪತ್ರಗಳು ಹಾಗೂ ಸುಳ್ಳು ಸುದ್ದಿಗಳನ್ನು ನಂಬಬಾರದು ಎಂದು ವಿನಂತಿಸಲಾಗಿದೆ.

Share

Leave a comment

Leave a Reply

Your email address will not be published. Required fields are marked *