SUDDIKSHANA KANNADA NEWS/ DAVANAGERE/ DATE:29-06-2024
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಡಿಸಿಎಂ ದಂಗಲ್ ತಲೆನೋವು ತಂದದೆ. ಈ ಬೆಳವಣಿಗೆ ನಡುವೆ ಈ ಕಾವು ತಣ್ಣಗಾಗಿಸುವ ಪ್ರಯತ್ನ ನಡೆಯುತ್ತಿದೆ. ಈ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕಮಾರ್ ಅಖಾಡಕ್ಕೆ ಇಳಿದಿದ್ದಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿರುವ ಡಿ. ಕೆ. ಶಿವಕುಮಾರ್ ಅವರು, ಬಹಿರಂಗವಾಗಿ ಡಿಸಿಎ ವಿಚಾರ ಸಂಬಂಧ ಹೇಳಿಕೆ ನೀಡಿದರೆ ನೊಟೀಸ್ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಹೆಚ್ಚುವರಿ ಡಿಸಿಎಂ ದಂಗಲ್ ವಿಚಾರ ಕುರಿತಂತೆ ಕಾಂಗ್ರೆಸ್ ಸರ್ಕಾರಕ್ಕೆ ಮುಜುಗರ ತಂದಿದೆ. ಬಹಿರಂಗವಾಗಿ ಚರ್ಚೆ ಮಾಡಿದ್ರೆ ನೊಟೀಸ್. ನೊಟೀಸ್ ನೀಡುವ ಎಚ್ಚರಿಕೆ ನೀಡಿರುವ ಡಿ. ಕೆ. ಶಿವಕುಮಾರ್ ಅವರು ಯಾವುದೇ ಕಾರಣಕ್ಕೂ ಮಾಧ್ಯಮ ಹಾಗೂ ಬಹಿರಂಗವಾಗಿ ಚರ್ಚೆ ಮಾಡಬಾರದು ಎಂದು ತಾಕೀತು ಮಾಡಿದ್ದಾರೆ.
ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ. ನಾನೂ ಡಿಸಿಎಂ ಆಗಿ ಕೆಲಸ ಮಾಡುತ್ತಿದ್ದೇನೆ. ಕೆಪಿಸಿಸಿ ಅಧ್ಯಕ್ಷನೂ ಆಗಿದ್ದೇನೆ. ಯಾರೂ ಸಹ ಉಪಮುಖ್ಯಮಂತ್ರಿ ಮಾಡಬೇಕು. ಸಮುದಾಯಕ್ಕೆ
ತಕ್ಕಂತೆ ಡಿಸಿಎಂ ಸ್ಥಾನ ನೀಡಬೇಕೆಂಬ ಚರ್ಚೆ ಬೇಡ. ಈ ವಿಚಾರ ಸಂಬಂಧ ಪಕ್ಷದ ಹೈಕಮಾಂಡ್, ವರಿಷ್ಠರು ನಿರ್ಧಾರ ತೆಗೆದುಕೊಳ್ಳುತ್ತಾರೆ. ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿರಬೇಕು. ಈ ನಿಟ್ಟಿನಲ್ಲಿ ಬೇಕಾಬಿಟ್ಟಿ ಹೇಳಿಕೆ ಕೊಡುವುದನ್ನು ನಿಲ್ಲಿಸಿ ಎಂದು ವಾರ್ನಿಂಗ್ ನೀಡಿದ್ದಾರೆ.