Site icon Kannada News-suddikshana

ಬಗರ್ ಹುಕುಂ ಅರ್ಜಿ ವಿಲೇವಾರಿಯಾಗದೇ ಬೆಳೆ ನಾಶ, ಒಕ್ಕಲೆಬ್ಬಿಸಬೇಡಿ: ಕಂದಾಯ ಸಚಿವರ ಖಡಕ್ ಸೂಚನೆ

SUDDIKSHANA KANNADA NEWS/ DAVANAGERE/ DATE:11-03-2025

ಬೆಂಗಳೂರು: ಬಗರ್‌ಹುಕುಂ ಅಡಿ ಸಲ್ಲಿಸಲಾಗಿರುವ ನಮೂನೆ 53 ಹಾಗೂ ನಮೂನೆ 57ರ ಅರ್ಜಿಗಳು ವಿಲೇವಾರಿ ಆಗದೇ ರೈತರ ಬೆಳೆ ನಾಶ ಮಾಡುವುದು ಅಥವಾ ಒಕ್ಕಲೆಬ್ಬಿಸುವ ಕ್ರಮಕ್ಕೆ ಮುಂದಾಗಬಾರದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ರೈತರನ್ನು ಒಕ್ಕಲೆಬ್ಬಿಸಬಾರದು. ಅರ್ಜಿ ವಿಲೇವಾರಿಯಾಗುವ ತನಕ ಅಧಿಕಾರಿಗಳು ಸಂಯಮದಿಂದ ಇರಬೇಕು ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರ ರೈತರ ಪರವಾಗಿದೆ. ಬಗರ್ ಹುಕುಂ ಅರ್ಜಿ ಸಲ್ಲಿಸಿದ್ದಾರೆ. ನಮೂನೆ 53, ನಮೂನೆ 57ರ ಅಡಿ ಅರ್ಜಿಗಳು ಸಲ್ಲಿಕೆಯಾಗಿದ್ದರೂ ವಿಲೇವಾರಿಯಾಗಿಲ್ಲ. ಈ ಕಾರಣದಿಂದ ರೈತರು ಕಷ್ಟಪಟ್ಟು ಬೆಳೆದ ಬೆಳೆ ನಾಶ
ಮಾಡಬೇಡಿ. ಜೊತೆಗೆ ಅವರನ್ನು ಅಲ್ಲಿಂದ ಒಕ್ಕಲೆಬ್ಬಿಸಲು ಮುಂದಾಗಬಾರದು ಎಂದು ಸೂಚನೆ ನೀಡಿದ್ದಾರೆ.

 

Exit mobile version