ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ವಿನಾಕಾರಣ ಅರ್ಜಿ ತಿರಸ್ಕರಿಸಬೇಡಿ, ವಿದ್ಯಾರ್ಥಿಗಳು, ಮಹಿಳೆಯರಿಗೆ ಹೆಚ್ಚು ಸಾಲ ಒದಗಿಸಿ: ಡಾ. ಪ್ರಭಾ ಮಲ್ಲಿಕಾರ್ಜುನ್ ಖಡಕ್ ಸೂಚನೆ!

On: March 7, 2025 9:05 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:07-03-2025

ದಾವಣಗೆರೆ: ವಿದ್ಯಾರ್ಥಿಗಳಿಗೆ ಹಾಗೂ ಮಹಿಳೆಯರಿಗೆ ಬ್ಯಾಂಕ್‍ಗಳು ಹೆಚ್ಚಿನ ಸಾಲ, ಸೌಲಭ್ಯ ಒದಗಿಸುವ ಕೆಲಸ ಮಾಡಬೇಕೆಂದು ದಾವಣಗೆರೆ ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಬ್ಯಾಂಕರ್ಸ್ ತ್ರೈಮಾಸಿಕ ಸಭೆಯಲ್ಲಿ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. ವೃತ್ತಿಪರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ ಒದಗಿಸಬೇಕು. ಇದರಿಂದ ಅವರ ಮುಂದಿನ ಭವಿಷ್ಯ ಉತ್ತಮವಾಗಲಿದೆ. ಮತ್ತು ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸಲು ಬ್ಯಾಂಕ್‍ಗಳಲ್ಲಿ ಅವರಿಗೆ ಸಿಗುವ ಸಾಲ, ಸೌಲಭ್ಯಗಳನ್ನು ಕಲ್ಪಿಸಬೇಕೆಂದು ತಿಳಿಸಿದರು.

ಶೈಕ್ಷಣಿಕ ಸಾಲವಾಗಿ ಡಿಸೆಂಬರ್ ನಲ್ಲಿ 5954 ವಿದ್ಯಾರ್ಥಿಗಳಿಗೆ ನೀಡಬೇಕಾಗಿದ್ದು ಇದರಲ್ಲಿ 2665 ಮಹಿಳೆಯರು ಇದ್ದಾರೆ. ಮತ್ತು ಪಿಎಂ ವಿಶ್ವಕರ್ಮ ಯೋಜನೆಯಡಿ 11731 ಅರ್ಜಿಗಳನ್ನು ಸ್ವೀಕರಿಸಿದ್ದು ಇದರಲ್ಲಿ 4768 ಕ್ಕೆ ಮಂಜೂರಾತಿ ನೀಡಿ 5357 ಅರ್ಜಿಯನ್ನು ತಿರಸ್ಕರಿಸಲಾಗಿದೆ. ಇನ್ನೂ 1606 ಅಭ್ಯರ್ಥಿಗಳ ಅರ್ಜಿಗಳು ಬಾಕಿ ಇದ್ದು ಆದಷ್ಟು ಬೇಗ ಇತ್ಯರ್ಥ ಮಾಡಿ ಸೌಲಭ್ಯ ನೀಡಲು ಸೂಚನೆ ನೀಡಿ ಮಂಜೂರಾತಿಗಿಂತಲೂ ತಿರಸ್ಕರಿಸಿದ ಅರ್ಜಿಗಳು ಹೆಚ್ಚಿದ್ದು ವಿನಾಕಾರಣ ಅರ್ಜಿಗಳನ್ನು ತಿರಸ್ಕರಿಸಬಾರದು ಎಂದರು.

ಬ್ಯಾಂಕ್‍ಗಳಿಂದ ಶೈಕ್ಷಣಿಕ ಸಾಲ, ಮನೆ ಸಾಲ, ವೃತ್ತಿಪರ ಸಾಲ ಹೀಗೆ ವಿವಿಧ ರೀತಿಯ ಸಾಲ ಸೌಲಭ್ಯಗಳನ್ನು ಜನರಿಗೆ ಒದಗಿಸಿ ಸಬಲೀಕರಣ ಗೊಳಿಸಬೇಕು. ಬ್ಯಾಂಕ್‍ಗೆ ಸಾರ್ವಜನಿಕರು ಬಂದಾಗ ಸರಿಯಾದ ರೀತಿ ಸಹಕರಿಸಿ ಯೋಜನೆಗಳ ಬಗ್ಗೆ ಸೂಕ್ತ ಮಾಹಿತಿ ನೀಡಿ ಸದುಪಯೋಗಪಡಿಸಿಕೊಳ್ಳುವಂತೆ ಮಾಹಿತಿ ನೀಡಬೇಕು. ಸರ್ಕಾರದ ಯೋಜನೆಗಳನ್ನು ಸರಿಯಾದ ವ್ಯಕ್ತಿಗಳಿಗೆ ಸರಿಯಾದ ಸಮಯಕ್ಕೆ ತಲುಪಿಸುವ ಕಾರ್ಯ ಆಗಬೇಕಿದೆ ಎಂದು ತಿಳಿಸಿದರು.

ಅಷ್ಟೇ ಅಲ್ಲದೆ ಪಿಎಂ ವಿಶ್ವಕರ್ಮ ಯೋಜನೆ, ಮುದ್ರಾ ಯೋಜನೆ ಇನ್ನಿತರೆ ಯೋಜನೆಗಳಲ್ಲಿ ಅರ್ಹ ಫಲಾನುಭವಿಗಳಿಗೆ ಸ್ವಂತ ಉದ್ಯೋಗ ಕೈಗೊಳ್ಳಲು ಕೌಶಲ್ಯ ತರಬೇತಿಗಳನ್ನು ನೀಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿ.ಪಂ. ಸಿಇಓ ಸುರೇಶ್ ಬಿ. ಇಟ್ನಾಳ್ ಮಾತನಾಡಿ, ಶೈಕ್ಷಣಿಕ ಸಾಲ ಯೋಜನೆ, ಪಿಎಂಜೆಜೆವೈ, ಮುದ್ರಾ ಯೋಜನೆ, ಪ್ರಧಾನ ಮಂತ್ರಿ ಆವಾಜ್ ಯೋಜನೆಯಲ್ಲಿನ ಅರ್ಹರಿಗೆ ಸಾಲ ಸೌಲಭ್ಯ ನೀಡಬೇಕು. ಹಾಗೆಯೆ ನಗರ, ಗ್ರಾಮೀಣ ಫಲಾನುಭವಿಗಳಿಗೆ ಹಾಗೂ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ, ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡುವ ಮೂಲಕ ಮತ್ತಷ್ಟು ಕ್ರಿಯಾಶೀಲರಾಗಿ ಕೆಲಸ ಮಾಡಬೇಕು ಎಂದರು.

ಸಭೆಯಲ್ಲಿ ನಬಾರ್ಡ್ ಅಧಿಕಾರಿ ರಶ್ಮಿ ರೇಖಾ, ಆರ್‍ಬಿಐ ಎಜಿಎಂ ಅರುಣ್ ಕುಮಾರ್, ಲೀಡ್ ಬ್ಯಾಂಕ್ ಮ್ಯಾನೇಜರ್ ಸಿದ್ದಾರ್ಥ್ ಎಸ್ ಆಚಾರ್ಯ, ಕೆನರಾ ಬ್ಯಾಂಕ್ ಎಜಿಎಂ ವೈ ವಿ.ಎನ್ ಶಿವಪ್ರಸಾದ್ ಸೇರಿದಂತೆ ವಿವಿಧ ಬ್ಯಾಂಕ್‍ಗಳ ಮ್ಯಾನೇಜರ್ ಗಳು ಉಪಸ್ಥಿತರಿದ್ದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment