ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಮಧುವಣಗಿತ್ತಿಯಂತೆ ಸಿದ್ಧಗೊಂಡ ಹೆಬ್ಬಾಳು: ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿದ್ಧತೆ ಹೇಗಿದೆ ಗೊತ್ತಾ…?

On: March 3, 2024 9:48 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:04-03-2024

ದಾವಣಗೆರೆ: ದಾವಣಗೆರೆ ತಾಲೂಕಿನ ಹೆಬ್ಬಾಳು ಗ್ರಾಮದಲ್ಲಿ ಮಾರ್ಚ್ 5ರಂದು ನಡೆಯಲಿರುವ 13 ನೇ ತಾಲೂಕು ಕನ್ನಡ ಸಮ್ಮೇಳನಕ್ಕೆ ಹೆಬ್ಬಾಳು ಮಠ ಮಧುವಣಗಿತ್ತಿಯಂತೆ ಸಿದ್ಧಗೊಂಡಿದೆ. ಮಾತ್ರವಲ್ಲ, ರಾತ್ರಿ ವೇಳೆ ವಿದ್ಯುದೀಪಲಂಕಾರದ ಬೆಳಕಿನಿಂದ ಕಂಗೊಳಿಸುತ್ತಿದೆ.

ದಾವಣಗೆರೆ ತಾಲೂಕು 13ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿದ್ದಗೊಂಡಿರುವ ಶ್ರೀ ರುದ್ರೇಶ್ವರ ಸಮುದಾಯ ಭವನ ಹೆಬ್ಬಾಳು ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಭಾನುವಾರ ಸಂಜೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಸುಮತಿ ಜಯಪ್ಪ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿ ಸಿ. ಜಿ. ಜಗದೀಶ್ ಕೂಲಂಬಿ, ತಾಲೂಕು ಕಸಾಪ ನಿರ್ದೇಶಕಿ ಸೌಭಾಗ್ಯಮ್ಮ, ಪಂಕಜಾಕ್ಷಿ, ಎ. ಎಂ. ಸಿದ್ದೇಶ್ ಕುರ್ಕಿ ಹೆಬ್ಬಾಳಿಗೆ ಭೇಟಿ ನೀಡಿ ಸಮ್ಮೇಳನದ ಸಿದ್ಧತೆಯನ್ನು ವೀಕ್ಷಿಸಿದರು.

ಮಾರ್ಚ್ 5ರಂದು ಹೆಬ್ಬಾಳು ಗ್ರಾಮದಲ್ಲಿ ಲೇಖಕಿ ಬಿ.ಟಿ.ಜಾಹ್ನವಿಯವರ ಅಧ್ಯಕ್ಷತೆಯಲ್ಲಿ ಸಮ್ಮೇಳನ ನಡೆಯಲಿದೆ. ಇದಕ್ಕೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರು ಲಾಂಛನ ಬಿಡುಗಡೆ ಮಾಡಿದ್ದಾರೆ. ಈ ಬಾರಿ ವಿಶೇಷವಾಗಿ ಸಮ್ಮೇಳನ ಆಯೋಜಿಸಲಾಗಿದೆ ಎಂದು ತಾಲೂಕು ಕಸಾಪ ಅಧ್ಯಕ್ಷೆ ಸುಮತಿ ಜಯಪ್ಪ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

 

 

ಏನೆಲ್ಲಾ ಕಾರ್ಯಕ್ರಮಗಳಿವೆ…?

ಮಾ. 5 ರಂದು ಬೆಳಗ್ಗೆ 8 ಕ್ಕೆ ಧ್ವಜಾರೋಹಣ ನಡೆಯಲಿದೆ 9 ಗಂಟೆಗೆ ನಡೆಯುವ ಸಮ್ಮೇಳನದ ಅಧ್ಯಕ್ಷರ ಮೆರವಣಿಗೆಗೆ ತಹಶೀಲ್ದಾರ್ ಡಾ.ಎಂ.ಬಿ ಅಶ್ವಥ್ ಚಾಲನೆ ನೀಡಲಿದ್ದಾರೆ. 10 ಕ್ಕೆ ಹೆಬ್ಬಾಳು ವಿರಕ್ತಮಠದ ಶ್ರೀ ಮಹಾಂತ ರುದ್ರೇಶ್ವರ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಜರುಗುವ ಸಮ್ಮೇಳನದ ಅಧ್ಯಕ್ಷತೆಯನ್ನು ಶಾಸಕ ಕೆ.ಎಸ್ ಬಸವಂತಪ್ಪ ವಹಿಸಲಿದ್ದಾರೆ. ಶಾಸಕ ಶಾಮನೂರು ಶಿವಶಂಕರಪ್ಪ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಮಹಾದ್ವಾರ ಉದ್ಘಾಟಿಸಲಿದ್ದಾರೆ. ಸಚಿವ ಎಸ್ ಎಸ್ ಮಲ್ಲಿಕಾರ್ಜುನ್
ಅವರು, ಬಳ್ಳಾರಿ ಸಿದ್ದಮ್ಮ ಮಹಾಮಂಟಪದ ಉದ್ಘಾಟನೆ ನೆರವೇರಿಸುವರು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಸಚಿವ ಡಾ. ಬಿ. ಇ. ರಂಗಸ್ವಾಮಿ ಸಮ್ಮೇಳನದ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಕಸಾಪ ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ಆಶಯ ನುಡಿಗಳನ್ನಾಡಲಿದ್ದಾರೆ. ತಾಲ್ಲೂಕು ಕಸಾಪ ಅಧ್ಯಕ್ಷೆ ಸುಮತಿ‌ಜಯಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಬಿ. ಎನ್. ಮಲ್ಲೇಶ್ ಕನ್ನಡಧ್ವಜ ಹಸ್ತಾಂತರ ಮಾಡಲಿದ್ದಾರೆ. ನಂತರ ಸಮ್ಮೇಳನಾಧ್ಯಕ್ಷರು ಕನ್ನಡ ಧ್ವಜ ಸ್ವೀಕಾರ ಮಾಡಲಿದ್ದಾರೆ. ತಾಲ್ಲೂಕು ಕಸಾಪ ಗೌರವಾಧ್ಯಕ್ಷ ದಾಗಿನಕಟ್ಟೆ ಪರಮೇಶ್ವರಪ್ಪ ಸಮ್ಮೇಳನಾಧ್ಯಕ್ಷರ ಪರಿಚಯ ಮಾಡಲಿದ್ದಾರೆ. ಬಳಿಕ ಸಮ್ಮೇಳನಾಧ್ಯಕ್ಷರಾದ ಸಾಹಿತಿ ಬಿ.ಟಿ ಜಾಹ್ನವಿ ಸಮ್ಮೇಳನಾಧ್ಯಕ್ಷರ ನುಡಿಗಳನ್ನಾಡಲಿದ್ದಾರೆ ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಪರಿಷತ್ ಸದಸ್ಯ ವೈ.ಎ ನಾರಾಯಣಸ್ವಾಮಿ, ಸಿಇಓ ಸುರೇಶ್ ಬಿ ಹಿಟ್ನಾಳ್, ಅಣಬೇರು ರಾಜಣ್ಣ, ಎಸ್. ಎಸ್. ಕೇರ್ ಟ್ರಸ್ಟ್ ನ ಆಜೀವ ಸದಸ್ಯೆ ಡಾ. ಪ್ರಭಾ ಮಲ್ಲಿಕಾರ್ಜುನ್ ಮತ್ತಿತರರು ಆಗಮಿಸಲಿದ್ದಾರೆಂದರು.

ಮಧ್ಯಾಹ್ನ 1ಕ್ಕೆ ಸಾಹಿತ್ಯಗೋಷ್ಠಿ ನಡೆಯಲಿದ್ದು ಸಾಹಿತಿ ಎಂ.ಎಸ್ ರುದ್ರೇಶ್ವರ ಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ವಚನ ಚಳುವಳಿಯಲ್ಲಿ ಸಾಮಾಜಿಕ ಚಿಂತನೆ ಕುರಿತು ಡಾ.ಎಂ ಮಂಜಣ್ಣ,ಕನ್ನಡ ಸಾಹಿತ್ಯ ಬೆಳವಣಿಗೆಯಲ್ಲಿ ತಂತ್ರಜ್ಞಾನದ ಪಾತ್ರ ಕುರಿತು ಎಚ್ ಎಸ್ ದ್ಯಾಮೇಶ್ ಮಾತನಾಡಲಿದ್ದಾರೆ. ಸಂಜೆ 4 ಕ್ಕೆ ಬಹಿರಂಗ ಅಧಿವೇಶನ ನಡೆಯಲಿದ್ದು ತಾಲ್ಲೂಕು ಕಸಾಪ ಅಧ್ಯಕ್ಷೆ ಸುಮತಿ ಜಯಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಗೌರವ ಕೋಶಾಧ್ಯಕ್ಷ ಹೆಚ್.ಕೆ ಪಾಲಾಕ್ಷಪ್ಪ ಗೋಪನಾಳ್ ನಿರ್ಣಯಗಳ ಮಂಡಿಸಲಿದ್ದಾರೆ ಎಂದು ವಿವರಿಸಿದರು.

ಸಂಜೆ 5ಕ್ಕೆ ನಡೆಯಲಿರುವ ಸಮಾರೋಪ‌ ಸಮಾರಂಭದಲ್ಲಿ‌  ಸಮ್ಮೇಳನಾಧ್ಯಕ್ಷರಾದ ಬಿ.ಟಿ‌.ಜಾಹ್ನವಿಯವರು‌ ಸಮೀಕ್ಷಾ ನುಡಿಗಳನ್ನಾಡಲಿದ್ದಾರೆ. ಸರ್ಕಾರಿ ಪ್ರಥಮ‌ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ದಾದಾಪೀರ್ ನವಿಲೇಹಾಳ್ ಸಮಾರೋಪ ನುಡಿಗಳನ್ನಾಡಲಿದ್ದಾರೆ. ಸಂಸದ ಜಿ.ಎಂ. ಸಿದ್ದೇಶ್ವರ್ ಸಾಧಕರಿಗೆ ಸನ್ಮಾನ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಬಸವರಾಜ್ ಶಿವಗಂಗಾ, ಬಿ. ಪಾಲಾಕ್ಷಿ, ಸಿ. ಟಿ. ಮಹಾಂತೇಶ್,ಇ.ಎಂ ಮಂಜುನಾಥ್ ಏಕಬೋಟೆ, ಬಿ. ದಿಳ್ಯಪ್ಪ, ರೇವಣಸಿದ್ದಪ್ಪ ಅಂಗಡಿ,ಕೆ.ರಾಘವೇಂದ್ರ ನಾಯರಿ ಮತ್ತಿತರರು ಆಗಮಿಸಲಿದ್ದಾರೆ. ಇದೇ ವೇಳೆ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಕೆ.ಜಿ ಸಿದ್ದಪ್ಪ,ಎಸ್ ರತ್ನಮ್ಮ,ಕಬ್ಬಡ್ಡಿ ನಾಗರಾಜ್,ನರೇಂದ್ರ ಬಾಬು,ಹೆಚ್.ವಿ ದೇವಿಕಾ ಸುನೀಲ್,ಮಲ್ಲೇಶಪ್ಪ ಸೇರಿದಂತೆ ಹಲವರಿಗೆ ಸನ್ಮಾನಿಸಿ ಗೌರವಿಸಲಾಗುವುದು ಎಂದರು.ನಂತರ ಸಾಂಸ್ಕೃತಿಕ ಸಂಭ್ರಮ ಜರುಗಲಿದ್ದು ಬಂಜಾರ ಬಾಷಾ ಅಕಾಡೆಮಿಯ ಸದಸ್ಯ ಉಮೇಶ್ ನಾಯ್ಕ್ ಚಾಲನೆ‌ ನೀಡಲಿದ್ದಾರೆ‌ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಸಿ.ಜಿ. ಜಗದೀಶ್ ಕೂಲಂಬಿ, ಕೆ.ಜಿ.‌ ಸೌಭಾಗ್ಯ, ಬೇತೂರು ಎಂ. ಷಡಾಕ್ಷರಪ್ಪ, ದಾಗಿನಕಟ್ಟೆ ಪರಮೇಶ್ವರಪ್ಪ, ಡಾ. ಶಿವಯ್ಯ, ಕುರ್ಕಿ ಸಿದ್ದೇಶ್ ಮತ್ತಿತರರು ಹಾಜರಿದ್ದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment