SUDDIKSHANA KANNADA NEWS/ DAVANAGERE/ DATE:26-03-2025
ನವದೆಹಲಿ: ಅಶಿಸ್ತಿನ ವಿರುದ್ಧಪಕ್ಷದ ವರಿಷ್ಠರು ಕೈಗೊಂಡಿರುವ ನಿರ್ಧಾರವನ್ನು ಯಾರೂ ಸಂಭ್ರಮಿಸಬಾರದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ ವಿನಂತಿಸಿದ್ದಾರೆ.
ಭಾರತೀಯ ಜನತಾ ಪಾರ್ಟಿ ಉದಾತ್ತ ಉದ್ದೇಶ ಹಾಗೂ ಗುರಿಯನ್ನಿಟ್ಟುಕೊಂಡು ಯೋಜಿತವಾಗಿ ಬೆಳೆದು ಕೋಟ್ಯಂತರ ಸಮರ್ಪಣಾ ಕಾರ್ಯಕರ್ತರನ್ನು ದೇಶ ಕಟ್ಟುವ ಬದ್ಧತೆಗಾಗಿ ಸಜ್ಜುಗೊಳಿಸಿದ ಪಕ್ಷ ಎಂದು ಹೇಳಿದ್ದಾರೆ.
ಸಂಸ್ಕಾರವಂತ ಹಾಗೂ ಶಿಸ್ತುಬದ್ಧ ಸಂಘಟನೆಯ ವ್ಯವಸ್ಥೆಯಲ್ಲಿರುವ ನಾವು ಪಕ್ಷದ ವರಿಷ್ಠರು ಕೈಗೊಂಡ ನಿರ್ಧಾರವನ್ನು ಗೌರವಿಸಿ, ಮುಂಬರುವ ದಿನಗಳಲ್ಲಿ ಪಕ್ಷ ಕಟ್ಟುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗೋಣ. ರಾಜ್ಯದಲ್ಲಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೈಗೊಳ್ಳಬೇಕಿರುವ ಹೋರಾಟಗಳತ್ತ ಒಗ್ಗಟ್ಟಿನ ಸಂಕಲ್ಪ ತೊಟ್ಟು ಮುನ್ನಡೆಯೋಣ ಎಂದು ಕಾರ್ಯಕರ್ತರಿಗೆ ಕರೆ ಕೊಟ್ಟಿದ್ದಾರೆ.