SUDDIKSHANA KANNADA NEWS/ DAVANAGERE/ DATE:30-05-2023
ಬೆಂಗಳೂರು(BANGALORE): ರಾಜ್ಯದಲ್ಲಿ ಕಾಂಗ್ರೆಸ್ (CONGRESS) ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಬಿಪಿಎಲ್ (BJL) ಕಾರ್ಡ್ (CARD)ಗೆ ಭಾರೀ ಡಿಮ್ಯಾಂಡ್ ಬಂದಿದೆ. ಎಲ್ಲಾ ಕಡೆಗಳಲ್ಲಿ ಬಿಪಿಎಲ್ (BPL) ಕಾರ್ಡ್ (CARD) ಪಡೆಯಲು ಜನರು ನಾ ಮುಂದು ತಾ ಮುಂದು ಅಂತಾ ಮುಗಿಬೀಳುತ್ತಿದ್ದಾರೆ. ಈಗಾಗಲೇ ಸೈಬರ್ ಸೆಂಟರ್, ಸೇವಾ ಸಿಂಧು, ತಹಶೀಲ್ದಾರ್ ಕಚೇರಿಗಳಲ್ಲಿ ಜನರು ಎಡತಾಕುತ್ತಿದ್ದಾರೆ. ಇದಕ್ಕೆಲ್ಲಾ ಕಾರಣ ಕಾಂಗ್ರೆಸ್ ನೀಡಿರುವ 5 ಗ್ಯಾರಂಟಿಗಳು.
ಪ್ರಾಥಮಿಕ ಹಂತವಾಗಿ ಬಿಪಿಎಲ್ ಕಾರ್ಡ್ (BPL CARD)ಹೊಂದಿದವರಿಗೆ ಸೌಲಭ್ಯ ಸಿಗುತ್ತದೆ ಎಂಬ ವದಂತಿ ಹಬ್ಬಿದ ಬಳಿಕ ಬಿಪಿಎಲ್ (BPL)ಗಾಗಿ ಜನರು ಮುಗಿಬೀಳುವಂತಾಗಿದೆ. ಸರ್ಕಾರ ಸ್ಪಷ್ಟನೆ ನೀಡಿದರೂ ಕೇಳುವ ಸಮಾಧಾನ ಜನರಲ್ಲಿ ಇಲ್ಲ. ಹಾಗಾಗಿ, ಬೇಕೇ ಬೇಕು, ಬಿಪಿಎಲ್ ಕಾರ್ಡ್ ಬೇಕು ಎಂದು ಜನರು ಕೇಳುತ್ತಿರುವ ದೃಶ್ಯ ಸಾಮಾನ್ಯವಾಗಿದೆ.
ಆದ್ಯತಾ ಕುಟುಂಬಗಳ ಅಂದರೆ ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್ ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಲು ಜೂನ್ 1 ರಿಂದ ಅವಕಾಶ ಕಲ್ಪಿಸಿಕೊಡಲಾಗಿದೆ. ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಈ ಬಗ್ಗೆ ನಿರ್ಧಾರ ಮಾಡಿದ್ದು,
ಚುನಾವಣಾ ನೀತಿ ಸಂಹಿತೆ ಇದ್ದರಿಂದ ರಾಜ್ಯದಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಕೆ ಮತ್ತು ಪಡಿತರ ಚೀಟಿಗಳ ವಿತರಣೆ ಸ್ಥಗಿತಗೊಳಿಸಲಾಗಿತ್ತು. ವೆಬ್ ಪೋರ್ಟಲ್ (WEBPORTEL)ನಲ್ಲಿ ಅರ್ಜಿ ಸಲ್ಲಿಕೆ ವಿಭಾಗವನ್ನು ಲಾಕ್ (LOCK) ಮಾಡಲಾಗಿತ್ತು. ಕಾಂಗ್ರೆಸ್ (CONGRESS) ಪಕ್ಷವು ಚುನಾವಣೆಯಲ್ಲಿ ನೀಡಿರುವ ಐದು ಗ್ಯಾರಂಟಿ ಭರವಸೆಗಳ ಅನುಷ್ಠಾನದಲ್ಲಿ ಫಲಾನುಭವಿಗಳನ್ನು ಗುರುತಿಸಲು ಬಿಪಿಎಲ್ ಪಡಿತರ ಚೀಟಿಯನ್ನೇ ಮಾನದಂಡವಾಗಿ ನಿಗದಿಪಡಿಸುವ ಸಾಧ್ಯತೆ ಇದೆ.
ಈ ಹಿನ್ನೆಲೆಯಲ್ಲಿ ಜನರು ಬಿಪಿಎಲ್ ಪಡಿತರ ಚೀಟಿಗಾಗಿ ಆಹಾರ ಇಲಾಖೆ ಕಚೇರಿಗಳಿಗೆ ಭೇಟಿ ನೀಡುತ್ತಿದ್ದಾರೆ.
ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಹೆಚ್ಚುವರಿ ನಿರ್ದೇಶಕ ಜಿ. ಗ್ಯಾನೇಂದ್ರ ಕುಮಾರ್ ಗಂಗ್ವಾರ್, ‘ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಪಡಿತರ ಚೀಟಿಗಳಿಗೆ ಅರ್ಜಿ ಸ್ವೀಕರಿಸುವುದನ್ನು ನಿಲ್ಲಿಸಲಾಗಿತ್ತು. ಈ ಹಿಂದೆಯೇ ಮಂಜೂರಾದ ಪಡಿತರ ಚೀಟಿಗಳ ವಿತರಣೆ ಪ್ರಗತಿಯಲ್ಲಿದೆ. ಆದ್ದರಿಂದ ಜೂನ್ 1ರಿಂದ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸ್ವೀಕರಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ನಾಳೆ ಮೇ. 31. ನಾಡಿದ್ದು ಜೂನ್ 1 ರಂದು. ಅಂದಿನಿಂದ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದಾಗಿದೆ. Rationcardagent.co.in ಈ ವೆಬ್ ಸೈಟ್ ಗೆ ಹೋಗಿ ಮಾಹಿತಿ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗೆ ಇಲ್ಲಿಗೂ ಭೇಟಿ ನೀಡಬಹುದು. https://ahara.kar.nic.in/WebForms/Show_RationCard.aspx, https://karnatakastateopenuniversity.in/karnataka-ration-card.html