SUDDIKSHANA KANNADA NEWS/ DAVANAGERE/ DATE:27-11-2024
ದಾವಣಗೆರೆ: ಲೋಕಸಭಾ ಕ್ಷೇತ್ರದ ಮಾಜಿ ಸದಸ್ಯ ಹಾಗೂ ಶಾಸಕ ಬಿ. ಪಿ. ಹರೀಶ್ ಅವರು ರಾಜ್ಯದ ರೈತರ ಕೃಷಿ ಭೂಮಿ, ಮಠ, ದೇವಸ್ಥಾನದ ಜಮೀನುಗಳನ್ನು ಅಕ್ರಮವಾಗಿ ಕಬಳಿಸಲು ವಕ್ಫ್ ಬೋರ್ಡ್ ಹೆಸರಿನಲ್ಲಿ ಷಡ್ಯಂತ್ರ ರೂಪಿಸಿರುವ ಜನವಿರೋಧಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೀದರ್ ಜಿಲ್ಲೆಯ ಧರ್ಮಾಪುರ್ ಗ್ರಾಮಕ್ಕೆ ಭೇಟಿ ನೀಡಿ ರೈತರೊಂದಿಗೆ ಚರ್ಚಿಸಿ ಅಹವಾಲು ಸ್ವಿಕರಿಸಿ, ಜಿಲ್ಲಾ ಬಿ.ಜೆ.ಪಿ. ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಬೀದರ್ನ ಗಣೇಶ ಮೈದಾನದಿಂದ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ಪಾದಯಾತ್ರೆ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದರು.
ಈ ವೇಳೆ ವಿಜಯಪುರ ಕ್ಷೇತ್ರದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಮಾಜಿ ಶಾಸಕರಾದ ಕುಮಾರ್ ಬಂಗಾರಪ್ಪ, ಅರವಿಂದ್ ಲಿಂಬಾವಳಿ, ಪ್ರಕಾಶ್ ಖಂಡ್ರೆ, ಮಾಜಿ ಸಚಿವರಾದ ಬಂಡೆಪ್ಪ ಕಾಶಪ್ಪನವರ್, ಮುಖಂಡರಾದ ಎನ್.ಆರ್. ಸಂತೋಷ್, ರೈತ ಮುಖಂಡರಾದ ದಯಾನಂದ ಸ್ವಾಮಿ ಹಾಗೂ ಇನ್ನೂ ಅನೇಕ ಸ್ಥಳೀಯ ಮುಖಂಡರು ಹಾಜರಿದ್ದರು.