Site icon Kannada News-suddikshana

ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಬಿಡುಗಡೆಗೆ ಕೇಂದ್ರ ಸಚಿವರಿಗೆ ಪ್ರಭಾ ಮಲ್ಲಿಕಾರ್ಜುನ್ ಮನವಿ

SUDDIKSHANA KANNADA NEWS/ DAVANAGERE/ DATE:29-07-2024

ದಾವಣಗೆರೆ: 2023-24ನೇ ಸಾಲಿನ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂಪಾಯಿ ನೀಡುವುದಾಗಿ ಭರವಸೆ ನೀಡಲಾಗಿತ್ತು. ಆದ್ರೆ. ಇನ್ನೂ ಅನುದಾನ ಬಿಡುಗಡೆ ಆಗಿಲ್ಲ. ಕೂಡಲೇ ಹಣ ನೀಡುವಂತೆ ದಾವಣಗೆರೆ ಲೋಕಸಭಾ ಸದಸ್ಯೆ ಡಾ. ಪ್ರಭಾ ಮಲ್ಲಿಕಾರ್ಜುನ್ ರವರು ಇಂದು ಕೇಂದ್ರ ಜಲಸಂಪನ್ಮೂಲ ಸಚಿವರಾದ ಸಿ.ಆರ್ ಪಾಟೀಲ್ ರವರನ್ನು ಭೇಟಿಯಾಗಿ ಮನವಿ ಮಾಡಿದರು.

ಕೇಂದ್ರ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆಗೆ ಬಿಡುಗಡೆ ಮಾಡಬೇಕಾಗಿರುವ 5300 ಕೋಟಿ ರೂಗಳನ್ನು ಶೀಘ್ರವೇ ಬಿಡುಗಡೆಗೊಳಿಸುವಂತೆ ಮನವಿ ಸಲ್ಲಿಸಿದರು.

ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ಜೀವನಾಡಿ ಭದ್ರಾ ನದಿ. ಭದ್ರಾ ಮೇಲ್ದಂಡೆ ಯೋಜನೆ ಜಾರಿಗೊಳಿಸಿದರೆ ಲಕ್ಷಾಂತರ ಜನರು, ಲಕ್ಷಾಂತರ ಹೆಕ್ಟೇರ್ ಗೆ ನೀರು ಉಣಿಸಲು ಅನುಕೂಲವಾಗುತ್ತದೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2023ರಲ್ಲಿ ಮಂಡಿಸಿದ್ದ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿದ್ದರು. 5300 ಕೋಟಿ ರೂಪಾಯಿ ನೀಡುವುದಾಗಿ ಆಯವ್ಯಯದಲ್ಲಿ ಹೇಳಿದ್ದರು. ಆದ್ರೆ, ಇದುವರೆಗೆ ಅನುದಾನ ಬಂದಿಲ್ಲ. ಆದಕಾರಣ ಈ ಬಗ್ಗೆ ಕೂಡಲೇ ಕ್ರಮ ಕೈಗೊಂಡು ಹಣ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಪ್ರಭಾ ಮಲ್ಲಿಕಾರ್ಜುನ್ ಅವರು ಮನವಿಯಲ್ಲಿ ಆಗ್ರಹಿಸಿದ್ದಾರೆ.

Exit mobile version