ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ರಾಜ್ಯಮಟ್ಟದ ಯುವಜನೋತ್ಸವದಲ್ಲಿ ಕೆವೈಸಿ ಅಭಿಯಾನ: ಡಾ. ಪ್ರಭಾ ಮಲ್ಲಿಕಾರ್ಜುನ್ ರ ಪರಿಕಲ್ಪನೆಗೆ ಸಿಎಂ, ಜನರಿಂದ ಮೆಚ್ಚುಗೆಗಳ ಮಹಾಪೂರ

On: January 9, 2025 9:19 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:09-01-2025

ದಾವಣಗೆರೆ: ನಗರದ ಎಂಬಿಎ ಮೈದಾನದಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಯುವಜನ ಮಹೋತ್ಸವದಲ್ಲಿ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಪರಿಕಲ್ಪನೆಯಡಿ ಮೂಡಿಬಂದ ಸಂವಿಧಾನದ ಅರಿವಿನ ಕೆವೈಸಿ ಅಭಿಯಾನ ಯುವಜನತೆ ಹಾಗೂ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು.

ಯುವಜನ ಮಹೋತ್ಸವದಲ್ಲಿ ಸಂವಿಧಾನ ತಿಳಿಯಿರಿ ಅಭಿಯಾನ ವಿಶೇಷ ರೀತಿಯಲ್ಲಿ ಅನಾವರಣಗೊಂಡಿತ್ತು.ಈ ಅಭಿಯಾನಕ್ಕೆ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಚಾಲನೆ ನೀಡಿ ವೀಕ್ಷಿಸಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಕಾರ್ಯವೈಖರಿಗೆ ಮೆಚ್ಚುಗೆ ಸೂಚಿಸಿದರು.

ಅಭಿಯಾನದಲ್ಲಿ ಬಾಬಾ ಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಅವರು ರಚಿಸಿದ ನಮ್ಮ ಸಂವಿಧಾನದ ಬಗ್ಗೆ ಸಮಗ್ರ ಮಾಹಿತಿ ಹಾಗೂ ಸಂವಿಧಾನದ ಪೀಠಿಕೆ ಅದರಲ್ಲೂ ಸ್ಥಳದಲ್ಲೇ ಸಂವಿಧಾನದ ಪೀಠಕೆ ತಯಾರಿಸಿದ್ದು ಎಲ್ಲರ ಗಮನ ಸೆಳೆಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ವತಃ ಸಂವಿಧಾನ ಪೀಠಿಕೆ ತಯಾರಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಭಾರತದ ಸಂವಿಧಾನವು ದೇಶದ ಕಾನೂನುಗಳು, ಆಡಳಿತ ಮತ್ತು ನಾಗರಿಕರ ಹಕ್ಕುಗಳನ್ನು ವ್ಯಾಖ್ಯಾನಿಸುವ  ಅತ್ಯುನ್ನತ ಕಾನೂನು ಚೌಕಟ್ಟಾಗಿದೆ. ಜನವರಿ 26, 1950 ರಂದು ಸಂವಿಧಾನವನ್ನು ಅಳವಡಿಸಿಕೊಳ್ಳಲಾಯಿತು. ಭಾರತ ಪ್ರಜಾಪ್ರಭುತ್ವದ ಬೆನ್ನೆಲುಬು ನಮ್ಮ ಸಂವಿಧಾನ. ಸರ್ಕಾರದ ಅಧಿಕಾರಗಳು ಮತ್ತು ರಾಜ್ಯದ ಜವಾಬ್ದಾರಿಗಳನ್ನು ಸಂವಿಧಾನ ವಿವರಿಸುತ್ತದೆ.”ನಾವು ಭಾರತದ ಜನರು” ಎಂದು ಪ್ರಾರಂಭವಾಗುವ ಪೀಠಿಕೆಯು ರಾಷ್ಟ್ರದ ಮೌಲ್ಯಗಳು ಮತ್ತು ದೃಷ್ಟಿಕೋನವನ್ನು ಪ್ರತಿಬಿಂಬಿಸುತ್ತದೆ.

ಇದು ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಒತ್ತಿಹೇಳುತ್ತದೆ-ಭಾರತದ ಪ್ರಜಾಸತ್ತಾತ್ಮಕ ಅಡಿಪಾಯವನ್ನು ಎತ್ತಿಹಿಡಿಯುವ, ನ್ಯಾಯಯುತ, ಮುಕ್ತ ಮತ್ತು ಏಕೀಕೃತ ಸಮಾಜವನ್ನು ಖಾತ್ರಿಪಡಿಸುವ ಪ್ರಮುಖ ತತ್ವಗಳಾಗಿವೆ ಎಂದು ಸಂಸದರು ವಿವರಿಸಿದರು.

ಈ ಅಭಿಯಾನ ಮೂಲಕ ವಿದ್ಯಾರ್ಥಿಗಳು ಯುವಜನರು ಹಾಗೂ ಸಾರ್ವಜನಿಕರಲ್ಲಿ ನಮ್ಮ ಸಂವಿಧಾನದ ಸಮಗ್ರ ಮಾಹಿತಿ ತಿಳಿದುಕೊಳ್ಳಲು ಸಹಕಾರಿಯಾಯಿತು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment