ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

BIG BREAKING: 3641 ಮತಗಳ ಮುನ್ನಡೆ ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್: ಗಾಯತ್ರಿ ಸಿದ್ದೇಶ್ವರ ಪಡೆದ ಮತಗಳೆಷ್ಟು..?

On: June 4, 2024 9:22 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:04-06-2024

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಮತ ಎಣಿಕೆ ಬಿರುಸು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು, 3641 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಗಾಯಿತ್ರಿ ಸಿದ್ದೇಶ್ವರ ಅವರು ಮತ್ತೆ ಹಿನ್ನೆಡೆ ಆಗಿದ್ದಾರೆ. ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯ್ ಕುಮಾರ್ ಅವರಿಗೂ ಮತಗಳು ಬಿದ್ದಿವೆ.

ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು, 20873 ಮತಗಳನ್ನು ಪಡೆದಿದ್ದರೆ, ಬಿಜೆಪಿಯ ಗಾಯಿತ್ರಿ ಸಿದ್ದೇಶ್ವರ ಅವರು 17,232 ಮತಗಳನ್ನು ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯ್ ಕುಮಾರ್ ಅವರು 2383 ಮತಗಳನ್ನು ಪಡೆದಿದ್ದಾರೆ.

ದಾವಣಗೆರೆ ಲೋಕಸಭಾ ಕ್ಷೇತ್ರದ ಮತ ಎಣಿಕೆ ಶುರುವಾಗಿದ್ದು, ಆರಂಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅನರು ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿಯ ಗಾಯಿತ್ರಿ ಸಿದ್ಗೇಶ್ವರ ಹಿನ್ನಡೆ ಅನುಭವಿಸಿದ್ದಾರೆ.

ಮತ ಎಣಿಕೆ ಆರಂಭವಾಗುತ್ತಿದ್ದಂತೆ ಅಂಚೆ ಮತ ಎಣಿಕೆಯಲ್ಲಿ ಪ್ರಭಾ ಮಲ್ಲಿಕಾರ್ಜುನ್ ಅವರು ಆರಂಭದಲ್ಲಿ ಮುನ್ನಡೆ ಸಾಧಿಸಿದರೆ, ಆ ಬಳಿಕ ಸ್ವಲ್ಪ ಹೊತ್ತಿನಲ್ಲೇ ಗಾಯಿತ್ರಿ ಸಿದ್ದೇಶ್ವರ ಅವರು ಮುನ್ನಡೆ ಸಾಧಿಸಿದರು. ಅಂಚೆ ಮತಗಳು ಮುಗಿದು ಇವಿಎಂ ಮತ ಯಂತ್ರ ತೆರೆಯುತ್ತಿದ್ದಂತೆ ಪ್ರಭಾ ಮಲ್ಲಿಕಾರ್ಜುನ್ ಅವರು ಮತ್ತೆ ಮುನ್ನಡೆ ಕಾಯ್ದುಕೊಂಡರು. ಮಾಹಿತಿ ಪ್ರಕಾರ 1355 ಮತಗಳ ಅಂತರದಿಂದ ಪ್ರಭಾ ಮಲ್ಲಿಕಾರ್ಜುನ್ ಅವರು ಮುನ್ನಡೆ ಕಾಯ್ದುಕೊಂಡಿದ್ದಾರೆ.

ಗಾಯಿತ್ರಿ ಸಿದ್ದೇಶ್ವರ ಅವರು ಹಿನ್ನಡೆ ಅನುಭವಿಸಿದ್ದು, ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯ್ ಕುಮಾರ್ ಅವರಿಗೂ ಮತಗಳು ಬಂದಿವೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment