SUDDIKSHANA KANNADA NEWS/ DAVANAGERE/ DATE:04-06-2024
ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಮತ ಎಣಿಕೆ ಶುರುವಾಗಿದ್ದು, ಆರಂಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅನರು ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿಯ ಗಾಯಿತ್ರಿ ಸಿದ್ಗೇಶ್ವರ ಹಿನ್ನಡೆ ಅನುಭವಿಸಿದ್ದಾರೆ.
ಮತ ಎಣಿಕೆ ಆರಂಭವಾಗುತ್ತಿದ್ದಂತೆ ಅಂಚೆ ಮತ ಎಣಿಕೆಯಲ್ಲಿ ಪ್ರಭಾ ಮಲ್ಲಿಕಾರ್ಜುನ್ ಅವರು ಆರಂಭದಲ್ಲಿ ಮುನ್ನಡೆ ಸಾಧಿಸಿದರೆ, ಆ ಬಳಿಕ ಸ್ವಲ್ಪ ಹೊತ್ತಿನಲ್ಲೇ ಗಾಯಿತ್ರಿ ಸಿದ್ದೇಶ್ವರ ಅವರು ಮುನ್ನಡೆ ಸಾಧಿಸಿದರು. ಅಂಚೆ ಮತಗಳು ಮುಗಿದು ಇವಿಎಂ ಮತ ಯಂತ್ರ ತೆರೆಯುತ್ತಿದ್ದಂತೆ ಪ್ರಭಾ ಮಲ್ಲಿಕಾರ್ಜುನ್ ಅವರು ಮತ್ತೆ ಮುನ್ನಡೆ ಕಾಯ್ದುಕೊಂಡರು. ಮಾಹಿತಿ ಪ್ರಕಾರ 1355 ಮತಗಳ ಅಂತರದಿಂದ ಪ್ರಭಾ ಮಲ್ಲಿಕಾರ್ಜುನ್ ಅವರು ಮುನ್ನಡೆ ಕಾಯ್ದುಕೊಂಡಿದ್ದಾರೆ.
ಗಾಯಿತ್ರಿ ಸಿದ್ದೇಶ್ವರ ಅವರು ಹಿನ್ನಡೆ ಅನುಭವಿಸಿದ್ದು, ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯ್ ಕುಮಾರ್ ಅವರಿಗೂ ಮತಗಳು ಬಂದಿವೆ.