ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ತಾಯಿ ಮಗಳ ನಡುವೆ ಸ್ಪರ್ಧೆ ಎಂದಿದ್ದ ಗಾಯತ್ರಿ ಸಿದ್ದೇಶ್ವರರಿಗೆ ತಿರುಗೇಟು ನೀಡಿದ್ದು ಹೇಗೆ ಡಾ. ಪ್ರಭಾ ಮಲ್ಲಿಕಾರ್ಜುನ್…?

On: March 22, 2024 4:02 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:22-03-2024

ದಾವಣಗೆರೆ: ಲೋಕಸಭೆ ಚುನಾವಣೆಯಲ್ಲಿ ತಾಯಿ ಮಗಳ ನಡುವೆ ಗೆಲುವಿಗೆ ಹೋರಾಟ ಎಂಬ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹೇಳಿಕೆಗೆ ಟಾಂಗ್ ನೀಡಿರುವ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಭಾರತೀಯ ಸಂಸ್ಕೃತಿಯಲ್ಲಿ ತಾಯಿ ಮಗಳ ಸಂಬಂಧಕ್ಕೆ ಬೆಲೆ ಇದೆ. ಸಂಬಂಧಕ್ಕೆ ಗೌರವ ಇದೆ. ಚುನಾವಣೆ ಎಂದ ಮೇಲೆ ಗೆಲುವಿಗೆ ಹೋರಾಟ ಮಾಡುವುದಷ್ಟೇ ಮುಖ್ಯ ಎಂದು ತಿರುಗೇಟು ನೀಡಿದ್ದಾರೆ.

ಎಂಸಿಸಿ ಬಿ ಬ್ಲಾಕ್ ನಲ್ಲಿನ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ರ ನಿವಾಸದ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಯೋಗ್ಯರನ್ನು ಆಯ್ಕೆ ಮಾಡಬೇಕು ಎಂಬುದು ಪ್ರಜ್ಞಾವಂತ ಮತದಾರರು ನಿರ್ಧರಿಸುತ್ತಾರೆ. ಚುನಾವಣೆಯಲ್ಲಿ ಸಂಬಂಧಕ್ಕಿಂತ ಜನರ ಸೇವೆ ಮುಖ್ಯ. ಕಷ್ಟ, ಸುಖದಲ್ಲಿ ಭಾಗಿಯಾಗುವುದು ತುಂಬಾನೇ ಪ್ರಮುಖವಾಗುತ್ತದೆ. ಪ್ರತಿಯೊಬ್ಬರನ್ನೂ ಭೇಟಿ ಮಾಡಲು ಆಗದು. ಕೇವಲ 40 ದಿನಗಳು ಮಾತ್ರ ಇದ್ದು, ಎಲ್ಲಾ ಶಾಸಕರು, ಮುಖಂಡರು, ಕಾರ್ಯಕರ್ತರು ನನ್ನ ಗೆಲುವಿಗೆ ಶ್ರಮಿಸುವುದಾಗಿ ವಿಶ್ವಾಸ ಇದೆ ಎಂದರು.

ನಾನು ಎಂದಿಗೂ ಟಿಕೆಟ್ ನೀಡಿ ಎಂದು ಕೇಳಿರಲಿಲ್ಲ. ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಮತದಾರರು ಹಾಗೂ ಜನರ ಒತ್ತಾಯದಿಂದ ನನಗೆ ಟಿಕೆಟ್ ಕೊಟ್ಟಿದ್ದಾರೆ. ಸರ್ವೆಯಲ್ಲಿಯೂ ನನ್ನ ಹೆಸರು ಬಂದಿದೆ. ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ವರಿಷ್ಠರು ಟಿಕೆಟ್ ಘೋಷಿಸಿದ್ದು, ಗೆಲ್ಲುವ ವಿಶ್ವಾಸ ಇದೆ. ರಾಜ್ಯ ಸರ್ಕಾರದ ಗ್ಯಾರಂಟಿಗಳು, ಮಹಿಳೆಯರಿಗೆ ನೀಡಿರುವ ಸೌಲಭ್ಯಗಳನ್ನು ತಿಳಿಸಿಕೊಡುವ ಕೆಲಸ ಮಾಡುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಅಲೆ ನೋಡಿಕೊಂಡು ಮತ ಹಾಕುವುದಕ್ಕಿಂತ ಜನರಿಗೆ ಸ್ಪಂದಿಸುವ, ಕೆಲಸ ಮಾಡುವವರಿಗೆ ಮತ ನೀಡಿ ಎಂದು ಮನವಿ ಮಾಡಿದರು.

ಯಾವ ವ್ಯಕ್ತಿಗೆ ಮತ ನೀಡಬೇಕು. ಜನರ ಸಮಸ್ಯೆಗೆ ಯಾರು ಸ್ಪಂದಿಸುತ್ತಾರೆ, ಪ್ರತಿನಿಧಿಸುತ್ತಾರೆ ಅಂಥವರನ್ನು ಆಯ್ಕೆ ಮಾಡಬೇಕು ಎಂಬುದು ಕ್ಷೇತ್ರದ ಜನರ ಅಭಿಮತವಾಗಿದೆ. ಒಳ್ಳೆಯ ಅಭ್ಯರ್ಥಿ ಗೆಲ್ಲಿಸಬೇಕೆಂದು ಮತದಾರರು ನಿರ್ಧರಿಸಿದ್ದು, ಪ್ರಜ್ಞಾವಂತ ಮತದಾರರು ಬೆಂಬಲಿಸಬೇಕು ಎಂದು ಹೇಳಿದರು.

ಯಾವಾಗಲೂ ನಾನು ಲೋಕಸಭಾ ಅಭ್ಯರ್ಥಿ ಎಂದು ಎಲ್ಲಿಯೂ ಹೇಳಿಕೊಂಡಿರಲಿಲ್ಲ. ಮಾಧ್ಯಮದವರು, ಮುಖಂಡರು, ಕಾರ್ಯಕರ್ತರು ಸಾಕಷ್ಟು ಬಾರಿ ಅಭ್ಯರ್ಥಿ ಆಗ್ತೀರೋ ಇಲ್ಲವೋ ಎಂಬುದನ್ನು ಕೇಳುತ್ತಿದ್ದರು. ಈ ಪ್ರಶ್ನೆಗೆ ಉತ್ತರ ನೀಡುವ ಸಮಯ ಈಗ ಬಂದಿದೆ. ಕ್ಷೇತ್ರದ ಶಾಸಕರು, ಮುಖಂಡರ ಅಭಿಪ್ರಾಯ ಪಡೆದು ಟಿಕೆಟ್ ಅಂತಿಮಗೊಳಿಸಲಾಗಿದೆ. ಬಿಜೆಪಿಯಲ್ಲಿ ಯಾರೇ ಅಭ್ಯರ್ಥಿಯಾದರೂ ಸ್ಪರ್ಧೆ ಇದ್ದೇ ಇರುತ್ತದೆ, ಹಾಗೆಂದ ಮೇಲೆ ಹೋರಾಟವೂ ಇರುತ್ತದೆ. ಮಾವ ಶಾಮನೂರು ಶಿವಶಂಕರಪ್ಪರು ಹಾಗೂ ಪತಿ ಮಲ್ಲಿಕಾರ್ಜುನ್ ರವರು ಮಾಡಿರುವಂಥ ಅಭಿವೃದ್ಧಿ ಕೆಲಸದಿಂದ ಕಾರ್ಯಕರ್ತರ ಒತ್ತಾಸೆಯಂತೆ ಟಿಕೆಟ್ ಸಿಕ್ಕಿದೆ ಎಂದರು.

ಶಾಮನೂರು ಶಿವಶಂಕರಪ್ಪರ ಕುಟುಂಬಕ್ಕೆ ಟಿಕೆಟ್ ಸಿಕ್ಕಿದೆ, ಜನರು ಮೂವರಿಗೆ ಅಧಿಕಾರ ನೀಡುವುದಿಲ್ಲ ಎಂಬ ವ್ಯಂಗ್ಯದ ಮಾತಿಗೆ ಪ್ರತಿಕ್ರಿಯೆ ನೀಡಿದ ಪ್ರಭಾ ಮಲ್ಲಿಕಾರ್ಜುನ್ ಅವರು, ನಾನಾಗಿ ಯಾವತ್ತೂ ಟಿಕೆಟ್ ಕೇಳಿಲ್ಲ. ಯಾರು ನಿಂತರೆ ಸರಿಯಾಗಿ ಪ್ರತಿಸ್ಫರ್ಧೆ ಒಡ್ಡಬಹುದು ಎಂಬ ಲೆಕ್ಕಾಚಾರ ಹಾಕಿ ಟಿಕೆಟ್ ಘೋಷಿಸಲಾಗಿದೆ. ಹರಪನಹಳ್ಳಿಯೂ ಸೇರಿದಂತೆ ಏಳು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ. ಎಲ್ಲರೂ ಚುನಾವಣೆಯಲ್ಲಿ ಗೆಲುವಿಗೆ ಶ್ರಮಿಸುವುದಾಗಿ ಭರವಸೆ ನೀಡಿದ್ದಾರೆ. ನಮ್ಮದು ಯಾವುದೇ ಅಸ್ತ್ರ ಇಲ್ಲ, ಭಿವೃದ್ಧಿ ಕೆಲಸಗಳೇ ನಮಗೆ ಶ್ರೀರಕ್ಷೆ. ಬಿಜೆಪಿಯವರದ್ದು ಮೋದಿ ಅಲೆ ಇದ್ದರೆ, ನಮ್ಮದು ಮಾತ್ರ ಕಾಂಗ್ರೆಸ್ ಅಲೆ. ಜನರು ಅಭಿವೃದ್ಧಿ ಕೆಲಸ ಗಳನ್ನು ನೋಡಿಕೊಂಡು ನಮಗೆ ಮತ ನೀಡುತ್ತಾರೆ ಎಂದು ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ತಿಳಿಸಿದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment