ದಾವಣಗೆರೆ: ನಿಜವಾದ ಬಡವರ ಪರ ಸರ್ಕಾರ ಎಂದರೆ ಅದು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಮಾತ್ರ. ಗೃಹಲಕ್ಷ್ಮೀ ಯೋಜನೆಯ ಲಾಭದ ವಿವರವನ್ನು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ನೀಡಿದ್ದಾರೆ.
ನಗರದ ಎಪಿಎಂಸಿ ಮಾರುಕಟ್ಟೆ ಬಳಿ ಗ್ಯಾರಂಟಿ ಫಲಾನುಭವಿಗಳ ಜೊತೆ ಸಂವಾದ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಗೃಹಲಕ್ಷ್ಮೀ ಯೋಜನೆಯಿಂದ ನೆಮ್ಮದಿಯ ಬದುಕು ಕಟ್ಟಿಕೊಂಡಿದ್ದಾರೆ. ಗೃಹಲಕ್ಷ್ಮೀ ಯೋಜನೆಯ ಹಣದಿಂದ ದಾವಣಗೆರೆ ಜಿಲ್ಲೆಯ ಸಾವಿರಾರು ಮಹಿಳೆಯರು ಹಸು/ಎಮ್ಮೆಗಳನ್ನು ಖರೀದಿಸಿ ಹಾಲು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಗೃಹಲಕ್ಷ್ಮೀ ಹಣವನ್ನುಕೂಡಿಟ್ಟು ನೂರಾರು ಮಹಿಳೆಯರು ತಮ್ಮ ಜಮೀನುಗಳಿಗೆ ಬೋರ್ವೆಲ್ ಕೊರೆಸಿದ್ದಾರೆ. ಹೊನ್ನಾಳಿ ತಾಲ್ಲೂಕು ಮಲ್ಲಿಗೇನಹಳ್ಳಿ ಗ್ರಾಮದ 450 ಮಹಿಳೆಯರು ಗೃಹಲಕ್ಷ್ಮೀ ಹಣವನ್ನು ಒಟ್ಟುಗೂಡಿಸಿ ತಮ್ಮಊರಿನದೇವಸ್ಥಾನದಅಭಿವೃದ್ಧಿಗೆ 9 ಲಕ್ಷರೂ ಹಣವನ್ನು ಕೊಡುಗೆಯಾಗಿ ನೀಡಿದ್ದಾರೆ. ನೂರಾರು ಮಹಿಳೆಯರು ಅಂಗಡಿ, ಹೊಲಿಗೆ ಯಂತ್ರ, ಬೀದಿ ಬದಿ ವ್ಯಾಪಾರ ಆರಂಭಿಸಿ ತಮ್ಮ ಬದುಕುಕಟ್ಟಿಕೊಂಡಿದ್ದಾರೆ ಎಂದು ತಿಳಿಸಿದರು.
ಸಾವಿರಾರು ಮಹಿಳೆಯರು ತಮ್ಮ ಮಕ್ಕಳ ಶಾಲಾ ಶುಲ್ಕ ಕಟ್ಟಿಅವರ ಶೈಕ್ಷಣಿಕಅಭಿವೃದ್ಧಿಗೆ ನೆರವಾಗಿದ್ದಾರೆ. ಗೃಹಲಕ್ಷ್ಮೀ ಹಣದಿಂದ ಮಕ್ಕಳಿಗೆ ಸೈಕಲ್, ಮೋಟಾರ್ ಬೈಕ್, ಮೊಬೈಲ್ ಹಾಗೂ ಪುಸ್ತಕಗಳನ್ನು ಕೊಡಿಸಿ ಅವರನ್ನು ಸಾಕ್ಷರರನ್ನಾಗಿ ಮಾಡಿದ್ದಾರೆ. ಹಳ್ಳಿಗಳಲ್ಲಿ ರೈತರಆತ್ಮಹತ್ಯೆ ಪ್ರಕರಣಗಳು ಮಹಿಳಾ ಸಬಲೀಕರಣದಿಂದಾಗಿ ಗಣನೀಯವಾಗಿ ಕಡಿಮೆಯಾಗಿವೆ. ಮಹಿಳೆಯರು ಸ್ವಾವಲಂಬಿಯಾಗಲು ಆರ್ಥಿಕವಾಗಿ ಸಬಲೀಕರಣವಾಗಲು ಗೃಹಲಕ್ಷ್ಮೀ ಯೋಜನೆಯು ನೆರವಾಗಿದೆ ಎಂದು ಮಾಹಿತಿ ನೀಡಿದರು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಪಂಚಗ್ಯಾರಂಟಿ ಯೋಜನೆಗಳಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ 538.81 ಕೋಟಿ ರೂ. ಖರ್ಚು ಮಾಡಿದೆ ಎಂದರು.
ಗೃಹಲಕ್ಷ್ಮಿ ಯೋಜನೆಯಡಿ ಕ್ಷೇತ್ರದ 58,684 ಮನೆಯ ಯಜಮಾನಿರಿಗೆ ಮಾಸಿಕ ಎರಡು ಸಾವಿರ ರೂಗಳಂತೆ 332 ಕೋಟಿ ರೂ. ಹಣ ನೀಡಲಾಗಿದೆ. ಶಕ್ತಿ ಯೋಜನೆಯಡಿ 2,47,50,558 ಬಾರಿ ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣಿಸಿದ್ದು ಅದರ ಟಿಕೆಟ್ ಮೌಲ್ಯ 53.97 ಕೋಟಿ ರೂ. ಹಣವನ್ನು ಕಾಂಗ್ರೆಸ್ ಸರ್ಕಾರ ಭರಿಸಿದೆ. ಗೃಹಜ್ಯೋತಿ ಯೋಜನೆಯ 49,770 ಫಲಾನುಭವಿಗಳಿಗೆ ಉಚಿತ ವಿದ್ಯುತ್ ಸೌಲಭ್ಯ ನೀಡಿದ್ದು ಇದರ ಮೊತ್ತ 72.20 ಕೋಟಿ ರೂ. ಅನ್ನಭಾಗ್ಯ ಯೋಜನೆಯಡಿ 77.17 ಕೋಟಿ ರೂ. ಹಣ ನೀಡಲಾಗಿದೆ. ಯುವನಿಧಿ ಯೋಜನೆಯ 950 ಫಲಾನುಭವಿಗಳಿಗೆ 28.08 ಲಕ್ಷ ರೂ. ಹಣವನ್ನು ಕಾಂಗ್ರೆಸ್ ಸರ್ಕಾರ ನೀಡಿದೆ. ಎಂದು ಅಂಕಿಅಂಶಗಳ ಸಮೇತ ವಿವರಿಸಿದರು.
ಗ್ಯಾರಂಟಿ ಯೋಜನೆಗಳು ಮಹಿಳೆಯರ ಸಬಲೀಕರಣಕ್ಕೆ ನೆರವಾಗಿವೆ. ಆರ್ಥಿಕವಾಗಿ, ಸಾಮಾಜಿಕವಾಗಿ ಅವರ ಶಕ್ತಿ ವೃದ್ಧಿಸಿದೆ. ಪಂಚಗ್ಯಾರಂಟಿ ಯೋಜನೆಗಳು ಅದರಲ್ಲೂ ಗೃಹಲಕ್ಷ್ಮಿ ಯೋಜನೆ ಮಹಿಳೆಯರನ್ನು ಆರ್ಥಿಕವಾಗಿ ಶಕ್ತಿವಂತರನ್ನಾಗಿ ಮಾಡಿದೆ. ಮಲ್ಲಿಗೆನಹಳ್ಳಿಯಲ್ಲಿ ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು ಹನುಮಂತ ದೇವಸ್ಥಾನದ ನಿರ್ಮಾಣಕ್ಕೆ 12 ಲಕ್ಷ ರೂ. ಹಣವನ್ನು ದೇಣಿಗೆಯಾಗಿ ನೀಡಿದ್ದಾರೆ. ಒಂದಲ್ಲ ಒಂದು ರೀತಿಯಲ್ಲಿ ಗ್ಯಾರಂಟಿ ಯೋಜನೆಗಳು ಜನರಿಗೆ, ಸಮಾಜಕ್ಕೆ ನೆರವಾಗುತ್ತಿವೆ ಎಂದರು.
ಆರು ಬಾರಿ ಅಪ್ಪಾಜಿ ಶಾಮನೂರು ಶಿವಶಂಕರಪ್ಪ ಅವರನ್ನು ಗೆಲ್ಲಿಸಿದಂತೆ ಸಮರ್ಥ ಶಾಮನೂರು ಮಲ್ಲಿಕಾರ್ಜುನ ಅವರನ್ನು ಗೆಲ್ಲಿಸಬೇಕು. ಗ್ಯಾರಂಟಿ ಯೋಜನೆಗಳಿಗೆ, ಕಾಂಗ್ರೆಸ್ ಸರ್ಕಾರಕ್ಕೆ ಶಕ್ತಿ ತುಂಬಬೇಕು ಎಂದು ಮನವಿ ಮಾಡಿದರು.
ಸಂವಾದ ಕಾರ್ಯಕ್ರಮದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ, ಉಪಾಧ್ಯಕ್ಷರುಗಳಾದ ದಿನೇಶ್ ಗೂಳಿಗೌಡ, ಮೆಹರೋಜ್ ಖಾನ್, ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್, ಗ್ಯಾರಂಟಿ ಸಮಿತಿಯ ಜಿಲ್ಲಾ, ತಾಲೂಕು ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು.





Leave a comment