Home ದಾವಣಗೆರೆ ಕರಾವಳಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ತಜ್ಞ ಸದಸ್ಯರಾಗಿ ದಾವಣಗೆರೆಯ ಡಾ.ಎಸ್.ಮಂಜಪ್ಪ ನೇಮಕ
ದಾವಣಗೆರೆಬೆಂಗಳೂರು

ಕರಾವಳಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ತಜ್ಞ ಸದಸ್ಯರಾಗಿ ದಾವಣಗೆರೆಯ ಡಾ.ಎಸ್.ಮಂಜಪ್ಪ ನೇಮಕ

Share
ದಾವಣಗೆರೆ
Share

SUDDIKSHANA KANNADA NEWS/DAVANAGERE/DATE:05_01_2026

ದಾವಣಗೆರೆ: ಕರ್ನಾಟಕ ಕರಾವಳಿ ಪ್ರದೇಶಗಳ ಅಭಿವೃದ್ಧಿ ಪ್ರಾಧಿಕಾರದ ತಜ್ಞ ಸದಸ್ಯರಾಗಿ ದಾವಣಗೆರೆ ಬಾಪೂಜಿ ಎಂಜಿನಿಯರಿಂಗ್ ಕಾಲೇಜಿನ ವಿಶ್ರಾಂತ ಪ್ರಾಧ್ಯಾಪಕ ಹಾಗೂ ಮಂಗಳೂರು ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜು ಹಿರಿಯ ನಿರ್ದೇಶಕ ಡಾ.ಎಸ್.ಮಂಜಪ್ಪ ಅವರನ್ನು ನೇಮಕ ಮಾಡಲಾಗಿದೆ.

ಕರ್ನಾಟಕ ಸರ್ಕಾರದ ಪರಿಸರ, ಅರಣ್ಯ ಮತ್ತು ಪರಿಸರ ವಿಜ್ಞಾನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ, ಭಾರತ ಸರ್ಕಾರದ ಗೆಜಿಟೆರ್‌ನಲ್ಲಿ ಡಾ.ಎಸ್.ಮಂಜಪ್ಪ ಅವರನ್ನು ತಜ್ಞ ಸದಸ್ಯರಾಗಿ ಪ್ರಕಟಿಸಲಾಗಿದೆ.

ಕರಾವಳಿ ನಿಯಂತ್ರಣ ವಲಯ ಕಾನೂನು ಪರಿಸರ ಮತ್ತು ಹವಾಮಾನ ಬದಲಾವಣೆ ಮಂತ್ರಾಲಯ ಇದರ ಅಡಿಯಲ್ಲಿ ಕೇಂದ್ರ ಸರ್ಕಾರ 1994 ರಿಂದ ಕರಾವಳಿ ಪ್ರದೇಶದಲ್ಲಿ ನಡೆಯುತ್ತಿರುವ ಅಭಿವೃದ್ಧಿ ನಿರ್ವಹಣೆ ಮಾಡುವ ಸಲುವಾಗಿ ಕರಾವಳಿ ಪ್ರದೇಶಗಳಿರುವ ರಾಜ್ಯಗಳಲ್ಲಿ ರಾಜ್ಯ ಮಟ್ಟದ ಸಮಿತಿ ರಚಿಸಿದ್ದು. ಈ ಪೈಕಿ ಕರ್ನಾಟಕದ ಕರಾವಳಿ ಪ್ರದೇಶಗಳಾದ ಮಂಗಳೂರು, ಉಡುಪಿ ಮತ್ತು ಕಾರವಾರ ಜಿಲ್ಲೆಗಳು ಸೇರಿವೆ.

ಡಾ.ಎಸ್.ಮಂಜಪ್ಪ ಅವರು ಈ ಹಿಂದೆಯೂ ಕೂಡ ಕೇಂದ್ರ ಕರಾವಳಿ ನಿರ್ವಹಣೆ ವಲಯ ಸಮಿತಿಯಲ್ಲಿ ಕೆಲಸ ಮಾಡಿದ ಅನುಭವವ ಹೊಂದಿದ್ದಾರೆ. ಅಲ್ಲದೇ ರಾಜ್ಯ ಸರ್ಕಾರದ ಮಾಲಿನ್ಯ ನಿಯಂತ್ರಣ ಮಂಡಳಿಯ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರಾಗಿ ಹಾಗೂ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ.

2025 ರಲ್ಲಿ ಅವರು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರ ನೇಮಕಾತಿಗಾಗಿ ಕರ್ನಾಟಕ ಸರ್ಕಾರವು ರಚಿಸಿದ ಆಯ್ಕೆ ಸಮಿತಿಯ ಸದಸ್ಯರಾಗಿದ್ದರು.

Share

Leave a comment

Leave a Reply

Your email address will not be published. Required fields are marked *