SUDDIKSHANA KANNADA NEWS/ DAVANAGERE/ DATE:28-09-2024
ದಾವಣಗೆರೆ: ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ನಡೆಯಲಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಸೆಪ್ಟಂಬರ್ 29ರಂದು ಮದ್ಯ ಮಾರಾಟ ನಿಷೇಧಿಸಲಾಗಿದೆ.
ಕಾನೂನು ಸುವ್ಯವಸ್ಥೆ ಕಾಪಾಡಲು ಸೆಪ್ಟೆಂಬರ್ 29 ರಂದು ಬೆಳಗ್ಗೆ 6 ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಹರಿಹರ ತಾಲ್ಲೂಕಿನಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಮದ್ಯದಂಗಡಿ ಮುಚ್ಚಲು ಜಿಲ್ಲಾ ದಂಡಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ.