Site icon Kannada News-suddikshana

ನ. 23ಕ್ಕೆ ಜಗಳೂರಿನಲ್ಲಿ ಮದ್ಯ ಮಾರಾಟ ನಿಷೇಧ

SUDDIKSHANA KANNADA NEWS/ DAVANAGERE/ DATE:21-11-2024

ದಾವಣಗೆರೆ: ಜಗಳೂರು ಪಟ್ಟಣ ಪಂಚಾಯತಿ ವಾರ್ಡ್ ನಂ.9 ರ ವ್ಯಾಪ್ತಿಯಲ್ಲಿ ನವೆಂಬರ್ 23 ರಂದು ಮತದಾನ ನಡೆಯಲಿದೆ.

ಈ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡುವ ಮುನ್ನೆಚ್ಚರಿಕೆ ಕ್ರಮವಾಗಿ ನವೆಂಬರ್ 22 ರಂದು ಸಂಜೆ 4 ಗಂಟೆಯಿಂದ ನ.24 ರ ಸಂಜೆ 6 ಗಂಟೆವರೆಗೆ ಬಾರ್ ಮತ್ತು ರೆಸ್ಟೋರೆಂಟ್, ಹೋಟೆಲ್ ಹಾಗೂ ಇನ್ನಿತರೆ ಸ್ಥಳಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ಮದ್ಯದಂಗಡಿ ಮುಚ್ಚಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಆದೇಶಿಸಿದ್ದಾರೆ.

 

Exit mobile version