Site icon Kannada News-suddikshana

ತೋಟಗಾರಿಕೆ ಇಲಾಖೆ: ಹನಿ ನೀರಾವರಿ ಘಟಕಕ್ಕೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

SUDDIKSHANA KANNADA NEWS/ DAVANAGERE/ DATE-29-05-2025

ಬೆಂಗಳೂರು: ತೋಟಗಾರಿಕೆ ಇಲಾಖೆ ವತಿಯಿಂದ 2025-26 ನೇ ಸಾಲಿಗೆ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಬೆಳೆ ಬೆಳೆಯುವ ರೈತರಿಗೆ ಹನಿ ನೀರಾವರಿ ಘಟಕಕ್ಕೆ ಸಹಾಯಧನ ನೀಡಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

ಎಲ್ಲಾ ವರ್ಗದ ರೈತರಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ 5 ಹೆಕ್ಟೇರ್ ಪ್ರದೇಶಕ್ಕೆ ಸಹಾಯಧನ ವಿತರಿಸಲು ಅವಕಾಶವಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ ಹಾಗೂ ಇತರೆ ವರ್ಗದ ರೈತರಿಗೆ 2 ಹೆಕ್ಟೇರ್ ಪ್ರದೇಶಕ್ಕೆ ಶೇ.90 ರ ಸಹಾಯಧನ ಕಲ್ಪಿಸಲಾಗುವುದು. 2 ಹೆಕ್ಟೇರ್ ನಿಂದ 5 ಹೆಕ್ಟೇರ್ ವರೆಗೂ ಶೇ.45 ರ ಸಹಾಯಧನ ಕಲ್ಪಿಸಲಾಗುವುದು.

ಖಾಯಂ ನೀರಾವರಿ ಸೌಲಭ್ಯವಿರುವ ಹಾಗೂ ತೋಟಗಾರಿಕೆ ಬೆಳೆ ಹೊಂದಿರುವ ರೈತರು ಅಗತ್ಯ ದಾಖಲಾತಿಗಳೊಂದಿಗೆ ತೋಟಗಾರಿಕೆ ಇಲಾಖೆ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version