SUDDIKSHANA KANNADA NEWS/DAVANAGERE/DATE:23_12_2025
ದಾವಣಗೆರೆ: ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜೆ. ಹೆಚ್. ಪಟೇಲ್ ಬಡಾವಣೆಯ ಪಾರ್ಕ್ ನಲ್ಲಿ ನಾಲ್ವರು ತಮ್ಮ ಬಳಿ ಅಕ್ರಮವಾಗಿ ಗಾಂಜಾ ಮತ್ತು ಮಾದಕ ವಸ್ತುಗಳನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಕುರಿತ ಖಚಿತ ವರ್ತಮಾನದ ಮೇರೆಗೆ ವಿದ್ಯಾನಗರ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಹತ್ತು ಲಕ್ಷ ರೂಪಾಯಿ ಮೌಲ್ಯದ ಮಾದಕ ವಸ್ತುಗಳು ಹಾಗೂ ಮಾರಾಟ ಮಾಡಿದ ಒಂದು ಲಕ್ಷ ರೂಪಾಯಿ ಜಫ್ತಿ ಮಾಡಿದ್ದಾರೆ.
READ ALSO THIS STORY: ಡ್ರಗ್ಸ್ ಕೇಸಲ್ಲಿ ದಾವಣಗೆರೆ ಕಾಂಗ್ರೆಸ್ ಮುಖಂಡ, ರಿಯಲ್ ಎಸ್ಟೇಟ್ ಉದ್ಯಮಿ ಶಾಮನೂರು ವೇದಮೂರ್ತಿ ಸೇರಿ ನಾಲ್ವರ ಬಂಧನ!
ರಾಜಸ್ತಾನದ ಜೋಧಪುರದ ಹರ್ಮೀನ್ರಗರ್ ಮೇರಿಯನಾಡದ ರಾಮ್ ಸ್ವರೂಪ್, ರಾಜಸ್ತಾನದ ಜೋಧಪುರದ ಲೂಣಿ ಗ್ರಾಮದ ಅಡುಗೆ ಕೆಲಸ ಮಾಡುತ್ತಿದ್ದ ಧೋಲಾರಾಮ್, ದಾವಣಗೆರೆಯ ಸಿದ್ದವೀರಪ್ಪ ಬಡಾವಣೆಯಲ್ಲಿ ವಾಸವಿದ್ದು ಅಲ್ಯೂಮಿನಿಯಂ ಕೆಲಸ ಮಾಡುತ್ತಿದ್ದ ದೇವ್ ಕಿಶನ್, ಶಾಮನೂರು ಗ್ರಾಮದ ರಿಯಲ್ ಎಸ್ಟೇಟ್ ನಡೆಸುತ್ತಿದ್ದ ಎಸ್. ಜಿ. ವೇದಮೂರ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆ ಹಿನ್ನೆಲೆ:
ಡಿಸೆಂಬರ್ 22ರಂದು ಮಧ್ಯಾಹ್ನ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜೆ.ಹೆಚ್ ಪಟೇಲ್ ಬಡಾವಣೆಯ ಉದ್ಯಾನವನದಲ್ಲಿ ಗಾಂಜಾ ಮತ್ತು ಮಾದಕ ವಸ್ತುಗಳ ಮಾರಾಟ ಮಾಡುತ್ತಿರುವ ಕುರಿತಂತೆ ಖಚಿತ ವರ್ತಮಾನ ಪೊಲೀಸರಿಗೆ ಸಿಕ್ಕಿತ್ತು. ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪರಮೇಶ್ವರ ಹೆಗಡೆ, ದಾವಣಗೆರೆ ನಗರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಶರಣ ಬಸವೇಶ್ವರ ಬಿ. ಹಾಗೂ ವಿದ್ಯಾನಗರ ಠಾಣೆ ನಿರೀಕ್ಷಕಿ ಶಿಲ್ಪಾ ವೈ.ಎಸ್. ಅವರ ಮಾರ್ಗದರ್ಶನದಲ್ಲಿ ವಿದ್ಯಾನಗರ ಪೊಲೀಸ್ ಠಾಣೆಯ ಪಿಎಸ್ಐ ಜಿ. ನಾಗರಾಜ ನೇತೃತ್ವದಲ್ಲಿ ವಿದ್ಯಾನಗರ ಪೊಲೀಸ್ ಅಧಿಕಾರಿ ಸಿಬ್ಬಂದಿಗಳೊಂದಿಗೆ ಜೆ. ಹೆಚ್. ಪಟೇಲ್ ಬಡಾವಣೆಯ ಪಾರ್ಕ್ ಗೆ ತೆರಳಿತ್ತು.
ಈ ವೇಳೆ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿತರ ಮೇಲೆ ದಾಳಿ ಮಾಡಿದ್ದು, ಪ್ರಕರಣಕ್ಕೆ ಸಂಭಂಧಿಸಿದಂತೆ ಆರೋಪಿತರು ಸಿಕ್ಕಿಬಿದ್ದಿದ್ದಾರೆ. ಆರೋಪಿತರಿಂದ ಅಂದಾಜು 10 ಲಕ್ಷ ರೂಪಾಯಿ ಮೌಲ್ಯದ ಒಟ್ಟು 90 ಗ್ರಾಂ ಎಂ.ಡಿ.ಎಂ.ಎ ಹಾಗೂ 200 ಗ್ರಾಂ ಓಪಿಯಂ ಎಂಬ ಮಾದಕ ವಸ್ತುಗಳು ಹಾಗೂ ಮಾದಕ ವಸ್ತುಗಳನ್ನು ಮಾರಾಟ ಮಾಡಿ ಬಂದಿದ್ದ ಹಣ ರೂ 1,00,000 ನಗದು ಸೇರಿದಂತೆ 11 ಲಕ್ಷ ಮೌಲ್ಯದ ಸ್ವತ್ತು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿತರ ವಿರುದ್ಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿತರು ನ್ಯಾಯಾಂಗ ಬಂಧನದಲ್ಲಿದ್ದಾರೆ.
ಆರೋಪಿತರ ಹಿನ್ನೆಲೆ:
ಆರೋಪಿತ ರಾಮ್ ಸ್ವರೂಪ್ ಈತನ ಮೇಲೆ ರಾಜಸ್ಥಾನ ರಾಜ್ಯದ ಜೋಧಪುರದಲ್ಲಿ ಎನ್ ಡಿಪಿಎಸ್ ಹಾಗೂ ಆರ್ಮ್ಸ್ ಆಕ್ಟ್ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ 3 ಆರೋಪಿತರುಗಳು ತಲೆ ಮರೆಸಿಕೊಂಡಿದ್ದು ಪತ್ತೆ ಕಾರ್ಯ ಕೈಗೊಳ್ಳಲಾಗಿದೆ. ಪತ್ತೆ ಕಾರ್ಯದಲ್ಲಿ ಯಶಸ್ವಿಯಾದ ವಿದ್ಯಾನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಜಿ.ನಾಗರಾಜ, ಗೋಪಿನಾಥ ಬಿ. ನಾಯ್ಡ್, ಮಾಲೇಶ್ ವಿ.,ಅಂಬರೀಶ್,ಸ್ವಾಮಿಲಿಂಗಪ್ಪ, ರವಿಕುಮಾರ್, ಕೊಟ್ರೇಶ್, ಬಸವರಾಜ ಎನ್.ಎ., ಮಾದಕ ದ್ರವ್ಯ ನಿಗ್ರಹ ಪಡೆಯ ವಿಭಾಗದ ಅಧಿಕಾರಿ, ಸಿಬ್ಬಂದಿಗಳಾದ ಪಿಎಸ್ಐ ಸಾಗರ್ ಅತ್ತಾರ್ವಾಲ, ಪ್ರಕಾಶ್.ಹೆಚ್, ಗೋವಿಂದರಾಜು ಎಸ್, ಮಂಜಪ್ಪ,ಎಂ, ಷಣ್ಮುಖ ಕೆ. ಹಾಗೂ ಶಿವರಾಜ್ ಎಂ. ಎಸ್. ಅವರನ್ನು ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಅವರು ಶ್ಲಾಘಿಸಿದ್ದಾರೆ.







Leave a comment