ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಜಿಮ್ ಟ್ರೈನರ್ ಮೇಲೆ ಹಲ್ಲೆ ಕೇಸ್‌: ನಟ ಧ್ರುವ ಸರ್ಜಾ ಮ್ಯಾನೇಜರ್ ಅರೆಸ್ಟ್!

On: September 10, 2024 4:14 PM
Follow Us:
---Advertisement---

ಬೆಂಗಳೂರು: ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲಿನ ಹಲ್ಲೆ ಕೇಸ್‌ಗೆ ಸಂಬಂಧಪಟ್ಟಂತೆ ನಟ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್‌ರನ್ನು ಪೊಲೀಸರು ಬಂಧಿಸಿದ್ದಾರೆ.

ಮೇ 26 ರಂದು ರಾತ್ರಿ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ನಡೆದಿತ್ತು. ಹರ್ಷ ಮತ್ತು ಸುಭಾಷ್ ಎಂಬುವವರು ಪ್ರಶಾಂತ್ ಮೇಲೆ ಹಲ್ಲೆ ನಡೆಸಿದ್ದರು. ಹಲ್ಲೆ ಮಾಡಿಸಿದ್ದು ಧ್ರುವ ಸರ್ಜಾ ಬಳಿ ಕೆಲಸ ಮಾಡಿಕೊಂಡಿದ್ದ ನಾಗೇಂದ್ರ. ಧ್ರುವಗೆ ನಾಗೇಂದ್ರ ಚಾಲಕನಾಗಿಯೂ ಕೆಲಸ ಮಾಡಿಕೊಂಡಿದ್ದರು. ಹಲ್ಲೆ ನಡೆಸಲು ನಾಗೇಂದ್ರಗೆ ಧ್ರುವ ಮ್ಯಾನೇಜರ್ ಅಶ್ವಿನ್ ಸಾಥ್ ಕೊಟ್ಟಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಶಾಂತ್ ಪೂಜಾರಿ ಅವರು ನಟ ಧ್ರುವ ಸರ್ಜಾಗೆ ಜಿಮ್‌ನಲ್ಲಿ ತರಬೇತಿ ನೀಡುತ್ತಿದ್ದು, ಇವರಿಬ್ಬರು ಆಪ್ತರಾಗಿದ್ದರು. ಆದರೆ ಇವರಿಬ್ಬರ ನಡುವಿನ ಆಪ್ತತೆಯನ್ನು ನಾಗೇಂದ್ರ ಹಾಗೂ ಅಶ್ವಿನ್‌ಗೆ ಸಹಿಸಿಕೊಳ್ಳಲು ಸಾದ್ಯವಾಗದೇ ಹಲ್ಲೆಗೆ ಪ್ಲ್ಯಾನ್ ರೂಪಿಸಿದ್ದರು ಎನ್ನಲಾಗಿದೆ.

ನಾಗೇಂದ್ರ ಹಾಗೂ ಅಶ್ವಿನ್ ತಾವೇ ಹಲ್ಲೆ ಮಾಡಿದರೆ ಗೊತ್ತಾಗುತ್ತದೆ ಎಂದು ಸ್ನೇಹಿತರ ಕೈಯಲ್ಲಿ ಹಲ್ಲೆ ಮಾಡಿಸಿದ್ದರಂತೆ. ಕನಕಪುರ ಮೂಲದ ಹರ್ಷ ಮತ್ತು ಸುಭಾಷ್ ಅವರನ್ನು ಮುಂದಕ್ಕೆ ಬಿಟ್ಟು ಅಶ್ವಿನ್ ಹಲ್ಲೆ ಮಾಡಿಸಿದ್ದರು. ತನಿಖೆ ವೇಳೆ ಅಶ್ವಿನ್ ಪಾತ್ರ ಇರುವುದು ಬೆಳಕಿಗೆ ಬಂದಿದ್ದು, ಅಶ್ವಿನ್ ನನ್ನು ಬಂಧಿಸಲಾಗಿದೆ.

Join WhatsApp

Join Now

Join Telegram

Join Now

Leave a Comment