SUDDIKSHANA KANNADA NEWS/ DAVANAGERE/ DATE:19-08-2024
ಬೆಂಗಳೂರು/ ಬಳ್ಳಾರಿ: ಪ್ರಸಕ್ತ ಸಾಲಿಗೆ ರಾಷ್ಟ್ರೀಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (ಎನ್‌ಎಸ್‌ಪಿ ಪೋರ್ಟಲ್) ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರ ವಿದ್ಯಾರ್ಥಿವೇತನಕ್ಕಾಗಿ ವಿಕಲಚೇತನ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ವ್ಯಾಪ್ತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳು ತಾವು ವ್ಯಾಸಂಗ ಮಾಡುತ್ತಿರುವ ಶಾಲಾ ಕಾಲೇಜುಗಳು, ಶಿಕ್ಷಣ ಸಂಸ್ಥೆಗಳ ಮುಖಾಂತರ ರಾಷ್ಟ್ರೀಯ ವಿದ್ಯಾರ್ಥಿವೇತನ ತಂತ್ರಾಂಶದ ಎನ್‌ಎಸ್‌ಪಿ ಪೋರ್ಟಲ್‌ನ www.scholarships.gov.in ನ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆ.31 ಕೊನೆಯ ದಿನವಾಗಿದೆ.
ಅರ್ಹ ವಿಕಲಚೇತನ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿದ ನಂತರ ಅರ್ಜಿಯ ಒಂದು ಪ್ರತಿಯನ್ನು ತಮ್ಮ ವ್ಯಾಪ್ತಿಗೊಳಪಡುವ ಗ್ರಾ.ಪಂ. ವಿಆರ್‌ಡಬ್ಲೂ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿ ಯುಆರ್‌ಡಬ್ಲೂ, ತಾ.ಪಂ. ಎಂಆರ್‌ಡಬ್ಲೂ ಇವರಿಗೆ ಒಂದು ಪ್ರತಿ ಸಲ್ಲಿಸಬೇಕು.
ವಿವರಗಳಿಗಾಗಿ ಬಳ್ಳಾರಿ ಮತ್ತು ಕಂಪ್ಲಿಯ ವಿವಿದ್ದೊದ್ದೇಶ ಪುನರ್ವಸತಿ ಕಾರ್ಯಕರ್ತರ ಮೊ.8880875620, ಕುರುಗೋಡು ಮೊ.9538000887, ಸಿರುಗುಪ್ಪ ಮೊ.9743509698, ಸಂಡೂರು ಮೊ.9632052270 ಗೆ ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ದೂ.08392-267886 ಮತ್ತು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಲ್ಯಾಣಾಧಿಕಾರಿಗಳ ಕಚೇರಿ, ಬಳ್ಳಾರಿ ಇಲ್ಲಿಗೆ ಭೇಟಿ ನೀಡಬಹುದು ಎಂದು ವಿಕಲಚೇತನರ ಹಾಗೂ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.