SUDDIKSHANA KANNADA NEWS/DAVANAGERE/DATE:05_12_2025
ಬೆಂಗಳೂರು: ಹಳ್ಳಿಗಳ ಅಭಿವೃದ್ಧಿಯಲ್ಲಿ ದೇಶದ ಅಭಿವೃದ್ಧಿ ಅಡಗಿದೆ. ಗ್ರಾಮೀಣ ಭಾಗದಲ್ಲಿ ಪ್ರತಿಯೊಬ್ಬರಿಗೂ ಉತ್ತಮ ಮೂಲಸೌಕರ್ಯ ಒದಗಿಸುವುದು ಸರ್ಕಾರದ ಮುಖ್ಯ ಧ್ಯೇಯವಾಗಿದೆ. ಈ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಗ್ರಾಮೀಣ ಜನರ ಆಸ್ತಿಗಳ ಭದ್ರತೆಗಾಗಿ ಇ-ಸ್ವತ್ತು ಅಭಿಯಾನವನ್ನು ಪ್ರಾರಂಭಿಸಲಾಗಿದೆ.
READ ALSO THIS STORY: ಬಿಜೆಪಿ ನಾಯಕಿ ಪತಿ ಫ್ಲಾಟ್ ನಲ್ಲಿ ವೇಶ್ಯಾವಾಟಿಕೆ ಜಾಲ ಪತ್ತೆ: ಆರೋಪ ನಿರಾಕರಿಸಿದ ಶಾಲಿನಿ ಮತ್ತು ಅರುಣ್ ಯಾದವ್!
ಗ್ರಾಮೀಣ ಜನರು ಆಸ್ತಿಗಳ ಇ-ಖಾತಾ ಪಡೆಯುವುದು ಈಗ ಮತ್ತಷ್ಟು ಸುಲಭವಾಗಿದೆ. https://eswathu.karnataka.gov.in ಪೋರ್ಟಲ್‌ಗೆ ಲಾಗಿನ್ ಆಗಿ ನಿಮ್ಮ ಆಸ್ತಿ ವಿವರಗಳನ್ನು ತುಂಬಿಸಿ, ಅರ್ಜಿ ಸಲ್ಲಿಸಿ ಇ-ಖಾತಾ ಪಡೆಯಬಹುದು. ಅದಕ್ಕಾಗಿ ನಮ್ಮ ಇಲಾಖೆಯಿಂದ ಇ-ಸ್ವತ್ತು ಸಹಾಯವಾಣಿ 9483476000 ಅನ್ನು ಪ್ರಾರಂಭಿಸಿದ್ದು ನಿಮ್ಮ ಯಾವುದೇ ಗೊಂದಲಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದು.
ಗ್ರಾಮೀಣ ಭಾಗದ ಜನರು ತಮ್ಮ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸುಲಭವಾಗಿ ಮತ್ತು ಡಿಜಿಟಲ್ ರೂಪದ ಇ – ಖಾತಾ ಪಡೆಯಲು ಇಲಾಖೆಯು ಅವಕಾಶ ಕಲ್ಪಿಸಿದೆ. ಇದನ್ನು ಪ್ರತಿಯೊಬ್ಬರೂ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿಸುತ್ತೇವೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.





Leave a comment