ನವದೆಹಲಿ: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ವಿರುದ್ಧ ಮೇಲ್ಮನವಿ ಸಲ್ಲಿಸಿದ ಜಾರಿ ನಿರ್ದೇಶನಾಲಯದ ಕ್ರಮಕ್ಕೆ ಸುಪ್ರೀಂಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೇ, ಇಡಿಯನ್ನು ತರಾಟೆಗೆ ತೆಗೆದುಕೊಂಡು ಆಕ್ರೋಶ ವ್ಯಕ್ತಪಡಿಸಿದೆ.
ರಾಜಕೀಯ ನಾಯಕರ ವಿರುದ್ಧ ಹೋರಾಡುವುದು ಸರಿಯಲ್ಲ. ಅಧಿಕಾರ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಸಿದ್ದರಾಮಯ್ಯ ಅವರ ಪತ್ನಿಗೆ ಪರಿಹಾರ ರೂಪದಲ್ಲಿ ನೀಡಲಾಗಿದ್ದ
ಸೈಟ್ ಪ್ರಕರಣ ಪಡೆದ ವಿಚಾರ ಹಾಗೂ ಇಡಿ ಕ್ರಮ ಕುರಿತಂತೆ ಅಸಮಾಧಾನ ವ್ಯಕ್ತಪಡಿಸಿದ ಸುಪ್ರೀಂಕೋರ್ಟ್, ಸಿದ್ದರಾಮಯ್ಯರ ಪತ್ನಿ ಪಾರ್ವತಿ ಅವರ ವಿರುದ್ಧ ಮೇಲ್ಮನವಿ ಸಲ್ಲಿಸಿದ ಇಡಿ ಕ್ರಮ ಸರಿಯಲ್ಲ ಎಂದು ಪ್ರತಿಪಾದಿಸಿದೆ.
ಈ ಸುದ್ದಿಯನ್ನೂ ಓದಿ: 2006ರ ಮುಂಬೈ ರೈಲು ಸ್ಫೋಟಗಳು: ಮರಣದಂಡನೆ ಶಿಕ್ಷೆಗೆ ಗುರಿಯಾದ ಐವರು ಸೇರಿ 12 ಅಪರಾಧಿಗಳು ಖುಲಾಸೆ!
ಈ ಮೂಲಕ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಅವರಿಗೆ ಸಮಾಧಾನ ಸಿಕ್ಕಿದೆ.