• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Thursday, June 19, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

ಕಾಂಗ್ರೆಸ್ ಸಂಸದರು, ಶಾಸಕರ ಮೇಲೆ ಇಡಿ ದಾಳಿ ರಾಜಕೀಯ ಪ್ರೇರಿತ: ಸೈಯದ್ ಖಾಲಿದ್ ಅಹ್ಮದ್

Editor by Editor
June 11, 2025
in ದಾವಣಗೆರೆ, ಬೆಂಗಳೂರು
0
ಕಾಂಗ್ರೆಸ್ ಸಂಸದರು, ಶಾಸಕರ ಮೇಲೆ ಇಡಿ ದಾಳಿ ರಾಜಕೀಯ ಪ್ರೇರಿತ: ಸೈಯದ್ ಖಾಲಿದ್ ಅಹ್ಮದ್

SUDDIKSHANA KANNADA NEWS/ DAVANAGERE/ DATE-11-06-2025

ದಾವಣಗೆರೆ: ಕೇಂದ್ರ ಸರ್ಕಾರವು ಕಾಂಗ್ರೆಸ್ ಸಂಸದರು ಹಾಗೂ ಶಾಸಕರ ಮೇಲೆ ಇಡಿ ಮೂಲಕ ದಾಳಿ ನಡೆಸುತ್ತಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ. ಜಾರಿ ನಿರ್ದೇಶನಾಲಯವು ನಡೆಸಿರುವ ದಾಳಿ ರಾಜಕೀಯ ಪ್ರೇರಿತ ಎಂದು ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಆರೋಪಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಳ್ಳಾರಿ ಸಂಸದ ತುಕರಾಂ, ಶಾಸಕರಾದ ಭರತ್ ರೆಡ್ಡಿ, ಗಣೇಶ್, ಶ್ರೀನಿವಾಸ್, ನಾಗೇಂದ್ರ ಅವರ ಮನೆಗಳ ಮೇಲೆ ಇಡಿ ದಾಳಿ ನಡೆಸಿದೆ. ವಾಲ್ಮೀಕಿ ನಿಗಮದ ಹಗರಣ ಸಂಬಂಧ ದಾಳಿ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆಯಾದರೂ ರಾಜಕೀಯ ದ್ವೇಷ ಇದರಲ್ಲಿ ಅಡಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಕುಗ್ಗಿಸಲು ಮತ್ತು ಹೆದರಿಸುವ ಭಾಗವಾಗಿದೆ ಎಂದು ದೂರಿದ್ದಾರೆ.

ಬಿಜೆಪಿ ಅಧಿಕಾರದಲ್ಲಿದ್ದಾಗ ಹಗರಣಗಳ ಮೇಲೆ ಹಗರಣ ನಡೆಸಿದೆ. ಇದು ಜಗಜ್ಜಾಹೀರಾಗಿದೆ. ಶೇಕಡಾ 40 ರಷ್ಟು ಕಮೀಷನ್ ಪಡೆದಿರುವುದಾಗಿ ಆಗಿನ ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ಆರೋಪ ಮಾಡಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದಿದ್ದರು. ಆದ್ರೂ ಯಾವುದೇ ದಾಳಿ ಆಗಿರಲಿಲ್ಲ. ಬಿಜೆಪಿ ಅಧಿಕಾರದಲ್ಲಿದ್ದಾಗ ನಡೆದ ಹಗರಣಗಳ ಕುರಿತಂತೆ ಇಡಿ, ಆದಾಯ ತೆರಿಗೆ, ಸಿಬಿಐ ಏಕೆ ದಾಳಿ ನಡೆಸಿಲ್ಲ. ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಿ ದಾಳಿ ನಡೆಸಿರುವ ಹಿಂದೆ ಇರುವವರು ಯಾರು ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಅಧಿಕಾರ ನಡೆಸುವಾಗ ಸಿಎಂ ಹುದ್ದೆಗೆ 2 ಸಾವಿರ ಕೋಟಿ ರೂಪಾಯಿ, ಸಚಿವ ಸ್ಥಾನಕ್ಕೆ ನೂರಾರು ಕೋಟಿ ರೂಪಾಯಿ ಕೊಡಬೇಕೆಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪ ಕುರಿತಂತೆ ಯಾವುದೇ ತನಿಖೆ ನಡೆಸಲಿಲ್ಲ. ಬಿ. ಎಸ್. ಯಡಿಯೂರಪ್ಪ, ಬಿ. ವೈ. ವಿಜಯೇಂದ್ರ ಸಾವಿರಾರು ಕೋಟಿ ರೂಪಾಯಿ ಅಕ್ರಮ ಆಸ್ತಿ ಮಾಡಿದ್ದಾರೆ ಎಂದು ಬಹಿರಂಗವಾಗಿಯೇ ಹೇಳಿದ್ದರೂ ಇದುವರೆಗೆ ಯಾವುದೇ ಇಡಿ ದಾಳಿ ಆಗಿಲ್ಲ. ಬಿಜೆಪಿ ನಾಯಕರು ಭ್ರಷ್ಟಾಚಾರ ಹಗರಣದಲ್ಲಿ
ಸಿಲುಕಿದ್ದರೂ ಯಾವುದೇ ಕ್ರಮ ಆಗಿಲ್ಲ ಎಂದು ಹೇಳಿದ್ದಾರೆ.

ಒಂದು ಕಣ್ಣಿಗೆ ಬೆಣ್ಣೆ, ಮತ್ತೊಂದು ಕಣ್ಣಿಗೆ ಸುಣ್ಣ ಎಂಬಂತಾಗಿದೆ. ತಪ್ಪು ಯಾರೂ ಮಾಡಿದ್ದರೂ ತನಿಖೆ ಆಗಲಿ. ಆದ್ರೆ, ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸುವುದರ ಹಿಂದೆ ದೊಡ್ಡ ಷಡ್ಯಂತ್ರ ಅಡಗಿದೆ. ಕೇಂದ್ರ ಸರ್ಕಾರವು ಸ್ವಾಯತ್ತ ಸಂಸ್ಥೆಗಳಾದ ಇಡಿ, ಸಿಬಿಐ ದುರುಪಯೋಗಪಡಿಸಿಕೊಳ್ಳುವುದನ್ನು ಬಿಡಬೇಕು ಎಂದು ಸೈಯದ್ ಖಾಲಿದ್ ಅಹ್ಮದ್ ಅವರು ಒತ್ತಾಯಿಸಿದ್ದಾರೆ.

Next Post
ದಾವಣಗೆರೆ ಜಿಲ್ಲೆಯಲ್ಲಿ ಎರಡು ದಿನಗಳ ಅಂಚೆ ಕಚೇರಿಯಲ್ಲಿ ವಹಿವಾಟು ಬಂದ್: ಯಾಕೆ?

ದಾವಣಗೆರೆ ಜಿಲ್ಲೆಯಲ್ಲಿ ಎರಡು ದಿನಗಳ ಅಂಚೆ ಕಚೇರಿಯಲ್ಲಿ ವಹಿವಾಟು ಬಂದ್: ಯಾಕೆ?

Leave a Reply Cancel reply

Your email address will not be published. Required fields are marked *

Recent Posts

  • ಈ ರಾಶಿಯವರಿಗೆ ಸಂತಾನ ಫಲ, ಈ ರಾಶಿಯವರಿಗೆ ಮಂಗಳಕಾರ್ಯ, ಈ ರಾಶಿಯವರಿಗೆ ಧನಪ್ರಾಪ್ತಿ ಯೋಗ
  • ಇರಾನ್ ನಿಂದ ಭಾರತೀಯರ ಸ್ಥಳಾಂತರಕ್ಕೆ “ಆಪರೇಷನ್ ಸಿಂಧು” ಆರಂಭಿಸಿದ ಭಾರತ!
  • ರಷ್ಯಾ ಸೈನಿಕನ ಅಂತಿಮ ವಿಧಿವಿಧಾನ ಕರ್ನಾಟಕದಲ್ಲಿ ಹಿಂದೂ ಧರ್ಮದಂತೆ ನೆರವೇರಿದ್ದು ಯಾಕೆ?
  • ಸರ್ಕಾರಿ ಕಚೇರಿಗಳಲ್ಲಿ ವಾರಕ್ಕೆ 5 ದಿನಗಳ ಕೆಲಸದ ಅವಧಿ ಹಿಂಪಡೆದೆ ಸರ್ಕಾರ! ವಿವಾದದ ಬಿರುಗಾಳಿ ಎದ್ದಿದ್ದು ಯಾಕೆ?
  • ಭಾರತ- ಪಾಕ್ ಯುದ್ಧ ನಿಲ್ಲಿಸಿದ್ದೇನೆ – ಪಾಕ್ ಪ್ರೀತಿಸುತ್ತೇನೆ: ಊಸರವಳ್ಳಿ ಡೊನಾಲ್ಡ್ ಟ್ರಂಪ್ ಗೆ ಮೋದಿ ಕೊಟ್ರು ಗುನ್ನ!

Recent Comments

No comments to show.

Archives

  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಸಾಹಿತ್ಯ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In