Home ಕ್ರೈಂ ನ್ಯೂಸ್ ಬೆಳ್ಳಂಬೆಳಿಗ್ಗೆ ಇಡಿ ಅಧಿಕಾರಿಗಳಿಂದ ಸಚಿವ ಸತೀಶ್ ಜಾರಕಿಹೊಳಿ, ಸಂಸದೆ ಪ್ರಿಯಾಂಕ್ ಜಾರಕಿಹೊಳಿಗೆ ಶಾಕ್: 18 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ!
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

ಬೆಳ್ಳಂಬೆಳಿಗ್ಗೆ ಇಡಿ ಅಧಿಕಾರಿಗಳಿಂದ ಸಚಿವ ಸತೀಶ್ ಜಾರಕಿಹೊಳಿ, ಸಂಸದೆ ಪ್ರಿಯಾಂಕ್ ಜಾರಕಿಹೊಳಿಗೆ ಶಾಕ್: 18 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ!

Share
ಸತೀಶ್ ಜಾರಕಿಹೊಳಿ
Share

ಬೆಂಗಳೂರು: ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಅವರ ಪುತ್ರಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಸೇರಿದ ವಿವಿಧೆಡೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ಮುಂಜಾನೆ ದಾಳಿ ನಡೆಸಿ ಪರಿಶೀಲನೆ ಮುಂದುವರಿಸಿದ್ದಾರೆ.

ಹಣ laundering (ಹಣ ವರ್ಗಾವಣೆ) ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯ ಭಾಗವಾಗಿ ಬೆಂಗಳೂರಿನ ಡಾಲರ್ಸ್ ಕಾಲೋರಿಯಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಸೇರಿದಂತೆ ರಾಜ್ಯಾದ್ಯಂತ ಸುಮಾರು 18 ಕಡೆಗಳಲ್ಲಿ ಏಕಕಾಲಕ್ಕೆ ಇಡಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

  • ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ಇಡಿ ದಾಳಿ: ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಸೇರಿದಂತೆ 18ಕ್ಕೂ ಹೆಚ್ಚು ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯದಿಂದ ಏಕಕಾಲಕ್ಕೆ ದಾಳಿ.

  • ಅಕ್ರಮ ಹಣ ವರ್ಗಾವಣೆ ತನಿಖೆ ತೀವ್ರ: ಅಬಕಾರಿ ಇಲಾಖೆ ಹಗರಣ ಹಾಗೂ ಮದ್ಯದ ಪರವಾನಗಿ ನವೀಕರಣದ ಅಕ್ರಮ ಹಣ ವರ್ಗಾವಣೆ (Money Laundering) ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದುವರಿದ ತನಿಖೆ.

  • ಬೆಂಗಳೂರು, ಬೆಳಗಾವಿಯಲ್ಲಿ ಬಿಗಿ ಭದ್ರತೆ: ಬೆಂಗಳೂರಿನ ಡಾಲರ್ಸ್ ಕಾಲೋನಿ ಸೇರಿದಂತೆ ವಿವಿಧ ಕಡೆಗಳಲ್ಲಿ ಸಿಆರ್‌ಪಿಎಫ್ (CRPF) ಯೋಧರೊಂದಿಗೆ ಶೋಧ ಕಾರ್ಯ.

ಈ ಹಿಂದೆ ಜೂನ್ ತಿಂಗಳಲ್ಲಿ ಸಚಿವರ ಸಂಬಂಧಿ ಹಾಗೂ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ನಿವಾಸದ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದರು.

ಮುಂದುವರಿದ ಭಾಗವಾಗಿ ಈಗ ಸ್ವತಃ ಸಚಿವರು ಹಾಗೂ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರ ಆಪ್ತ ಹಾಗೂ ಸಂಬಂಧಪಟ್ಟ ಸ್ಥಳಗಳ ಮೇಲೆ ಶೋಧ ಕಾರ್ಯ ನಡೆಯುತ್ತಿದ್ದು, ತನಿಖೆಯಿಂದಷ್ಟೇ ಹೆಚ್ಚಿನ ವಿವರಗಳು ಹೊರಬರಬೇಕಿದೆ

Share

Leave a comment

Leave a Reply

Your email address will not be published. Required fields are marked *