ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಆನ್‍ಲೈನ್ ಅರ್ಜಿ ಆಹ್ವಾನ

On: October 26, 2023 1:15 PM
Follow Us:
---Advertisement---
SUDDIKSHANA KANNADA NEWS/ DAVANAGERE/ DATE:26-10-2023

ದಾವಣಗೆರೆ: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮವು 2023-24ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಆರ್ಯ ವೈಶ್ಯ ಸಮುದಾಯದ ವಿದ್ಯಾರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.

ಈ ಯೋಜನೆಯಲ್ಲಿ ಸಿ.ಇ.ಟಿ./ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿ. ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ. 1.00 ಲಕ್ಷಗಳ ಸಾಲ ಹಾಗೂ ಶೇ. 2ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 4 ತಿಂಗಳ ವಿರಾಮಾವಧಿ ಇದ್ದು, ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸುವುದು. ಅರ್ಜಿದಾರರು 18 ರಿಂದ 35 ವರ್ಷದೊಳಗಿನವರಾಗಿದ್ದು, ಕುಟುಂಬದ ವಾರ್ಷಿಕ ವರಮಾನ ರೂ. 6.00 ಲಕ್ಷಗಳ ಮಿತಿಯೊಳಗಿರಬೇಕು.

ಆಸಕ್ತ ವಿದ್ಯಾರ್ಥಿಗಳು ಆನ್‍ಲೈನ್ www.kacdc.karnataka.gov.in ರ ಮೂಲಕ ನವೆಂಬರ್ 30 ರೊಳಗಾಗಿ ಅರ್ಜಿ ಸಲ್ಲಿಸುವುದು. ಈ ಯೋಜನೆಯ ಮಾರ್ಗಸೂಚಿ ಹಾಗೂ ಅರ್ಜಿಯನ್ನು ಗೂಗಲ್‍ನಲ್ಲಿ ಕ್ಯೂಆರ್ ಕೋಡ್‍ನ್ನು ಸ್ಕ್ಯಾನ್ ಮಾಡಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ 9448481111 / 08182-229634 ಅಥವಾ www.kacdc.karnataka.gov.in ವೆಬ್‍ಸೈಟ್ ಅಥವಾ ಜಿಲ್ಲಾ ಕರ್ನಾಟಕ ಆರ್ಯ ವೈಶ್ಯ ಸಮುದಾಯದ ಅಭಿವೃದ್ಧಿ ನಿಗಮದ ಕಚೇರಿ, ಭಾಗ್ಯ ನಿಲಯ, ಭಂಡಾರಿ ಗ್ಯಾಸ್ ಏಜೆನ್ಸಿ ಹತ್ತಿರ, 1ನೇ ಪ್ಯಾರಲಾಲ್ ರಸ್ತೆ, ಗಾಂಧಿನಗರ, ಶಿವಮೊಗ್ಗ ಇಲ್ಲಿ ಸಂಪರ್ಕಿಸಿ ಪಡೆಯುವುದು

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment