Home ಕ್ರೈಂ ನ್ಯೂಸ್ ಈದ್ ಮಿಲಾದ್ ಮೆರವಣಿಗೆಗೆ ಬಿಗಿ ರೂಲ್ಸ್: ಕರ್ಕಶ ಸೌಂಡ್ ಸಿಸ್ಟಂ, ಡಿಜೆ, ಪ್ರಚೋದನಕಾರಿ ಹಾಡು, ಸೋಶಿಯಲ್ ಮೀಡಿಯಾ ಪೋಸ್ಟ್‌ಗೆ ನಿಷೇಧ!
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

ಈದ್ ಮಿಲಾದ್ ಮೆರವಣಿಗೆಗೆ ಬಿಗಿ ರೂಲ್ಸ್: ಕರ್ಕಶ ಸೌಂಡ್ ಸಿಸ್ಟಂ, ಡಿಜೆ, ಪ್ರಚೋದನಕಾರಿ ಹಾಡು, ಸೋಶಿಯಲ್ ಮೀಡಿಯಾ ಪೋಸ್ಟ್‌ಗೆ ನಿಷೇಧ!

Share
ಈದ್ ಮಿಲಾದ್
Share

ದಾವಣಗೆರೆ: ಆಗಸ್ಟ್ 26ರಂದು ಈದ್ ಮಿಲಾದ್ ಸಂಭ್ರಮ: ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯಾದ್ಯಾಂತ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬವನ್ನು ಆಚರಿಸುತ್ತಿದ್ದು, ಈ ಸಂಬಂಧ ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯಾದ್ಯಾಂತ ಮೆರವಣಿಗೆ, ಪ್ರಾರ್ಥನೆ ಮಾಡುವ ಜಿಲ್ಲಾ ಪೊಲೀಸ್ ಇಲಾಖೆಯು ಕಟ್ಟುನಿಟ್ಟಿನ ಸೂಚನೆ ನೀಡಿದೆ.

ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯಲ್ಲಿ ಕಾನೂನು -ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಈದ್ ಮಿಲಾದ್ ಹಬ್ಬದ ಮೆರವಣಿಗೆ ಸಂದರ್ಭದಲ್ಲಿ ಈ ಸೂಚನೆಗಳನ್ನು ಪಾಲಿಸುವಂತೆ ಸೂಚಿಸಿದೆ.

ಈದ್ ಮಿಲಾದ್ ಮೆರವಣಿಗೆ ವೇಳೆ ಪಾಲಿಸಬೇಕಾದ ಅಂಶಗಳು:

ಈದ್ ಮಿಲಾದ್ ಮೆರವಣಿಗೆ ಈಗಾಗಲೇ ನಿಗಧಿಪಡಿಸಿದ ಮಾರ್ಗಗಳಲ್ಲಿಯೇ ಸಾಗಬೇಕು

ನಿಗಧಿಪಡಿಸಿದ ಸ್ಥಳದಲ್ಲಿಯೇ ಈದ್ ಮಿಲಾದ್ ಮೆರವಣಿಗೆ ಮುಕ್ತಾಯ ಮಾಡಬೇಕು.

ಮೆರವಣಿಗೆ ವೇಳೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹವರ ಮತ್ತು ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ನಿರ್ದಾಕ್ಷಣ್ಯ ಕಾನೂನು ಕ್ರಮ ಕೈಮದ ಎಚ್ಚರಿಕೆ

ಈದ್ ಮಿಲಾದ್ ಹಬ್ಬದ ಸಂಬಂಧ ಜಿಲ್ಲಾ ಮಟ್ಟದಲ್ಲಿ, ಉಪ ವಿಭಾಗ ಮಟ್ಟದಲ್ಲಿ, ಠಾಣಾ ಮಟ್ಟದಲ್ಲಿ ವಿವಿಧ ಕೋಮಿನ ಮುಖಂಡರುಗಳೊಂದಿಗೆ ಸಭೆ ನಡೆಸಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ಹಬ್ಬಗಳನ್ನು ಆಚರಿಸುವಂತೆ ಈಗಾಗಲೇ ತಿಳಿಸಲಾಗಿದೆ.

ಪ್ರಚೋದನಕಾರಿ ಹಾಡುಗಳನ್ನು ಹಾಕುವಂತಿಲ್ಲ, ಪೋಸ್ಟರ್‌ಗಳನ್ನು ಪ್ರದರ್ಶಿಸುವುದಕ್ಕೆ ಅವಕಾಶ ಇರುವುದಿಲ್ಲ. ಈ ಬಗ್ಗೆ ಆಯೋಜಕರು ವಿಶೇಷ ಗಮನ ಹರಿಸಬೇಕು.

ಸಾರ್ವಜನಿಕ, ಜನ ಸಂದಣಿ ಪ್ರದೇಶಗಳಲ್ಲಿ ಸಿಡಿಮದ್ದುಗಳನ್ನು ಸಿಡಿಸಬಾರದು.

ಸಾರ್ವಜನಿಕ ಸಂಚಾರ ವ್ಯವಸ್ಥೆಗೆ ತೊಂದರೆಯಾಗುವ ರೀತಿಯಲ್ಲಿ ಮೆರವಣಿಗೆ ನಡೆಸಬಾರದು.

ಈದ್ ಮಿಲಾದ್ ಮೆರವಣಿಗೆಯಲ್ಲಿ ಯಾವುದೇ ವಿದ್ಯುತ್ ಅವಘಡಗಳಾಗಂದಂತೆ ಮುನ್ನೆಚ್ಚರಿಕೆ ಕ್ರಮಗಳ ಕೈಗೊಳ್ಳಬೇಕು

ಈದ್ ಮಿಲಾದ್ ಮೆರವಣಿಗೆಯನ್ನು ನಿಗದಿತ ಸಮಯಕ್ಕೆ ಮುಗಿಸಬೇಕು. ಈದ್ ಮಿಲಾದ್ ಮೆರವಣಿಗೆ ಮಾರ್ಗಗಳಲ್ಲಿ ಸೂಕ್ಷ್ಮ ಪ್ರದೇಶಗಳಲ್ಲಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು

ಈಗಾಗಲೇ ರೌಡಿ ಮತ್ತು ಮತೀಯ ಗೂಂಡಗಳ ಮೇಲೆ ಮುಂಜಾಗೃತ ಕ್ರಮಗಳನ್ನು ಕೈಗೊಂಡು ನಿಗಾ ಇಡಲಾಗಿದೆ.

ಕರ್ಕಶವಾದ ಶಬ್ಧವನ್ನುಂಟು ಮಾಡುವ ಸೌಂಡ್ ಸಿಸ್ಟಂ ಮತ್ತು ಡಿಜೆಗಳನ್ನು ಉಪಯೋಗಿಸಬಾರದು, ಏಕೆಂದರೆ ನ್ಯಾಯಾಲಯವು ಕರ್ಕಶವಾದ ಶಬ್ಧವನ್ನುಂಟು ಮಾಡುವ ಸೌಂಡ್ ಸಿಸ್ಟಂ ಮತ್ತು ದ್ವನಿವರ್ಧಕಗಳ ನಿಷೇಧಿಸಿದ್ದು, ಉಲ್ಲಂಘಿಸಿದ್ದಲ್ಲಿ ಕಾನೂನು ರಿತ್ಯಾ ಕ್ರಮ ಕೈಗೊಳ್ಳಲಾಗುವುದು.

ಈದ್ ಮಿಲಾದ್ ಮೆರವಣಿಗೆ ಮಾಡುವಾಗ ಸಾರ್ವಜನಿಕ ಆಸ್ತಿ, ಜೀವ ಹಾನಿಯಾಗದಂತೆ ಮುಂಜಾಗೃತ ಕ್ರಮಗಳನ್ನು ಅನುಸರಿಸಬೇಕು.ಮೆರವಣಿಗೆ ಮಾರ್ಗಗಳಲ್ಲಿ ಸ್ವಯಂ ಸೇವಕರನ್ನು ನೇಮಿಸಬೇಕು.

ಸಾಮಾಜಿಕ ಜಾಲತಾಣಗಳಲ್ಲಿ ಕೋಮುಪ್ರಚೋದಕ ಹಾಗೂ ಧಾರ್ಮಿಕ ನಿಂದನೆ, ಸುಳ್ಳುಸುದ್ದಿ ಹರಡುವುದು, ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರುವಂತಹ ಪೋಸ್ಟ್ ಗಳನ್ನು ಹಾಕುವುದಾಗಲೀ ಹಾಗೂ ಶೇರ್ ಮಾಡುವುದಾಗಲೀ ನಿಷಿದ್ಧ.

ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೇ ಶಾಂತಿಯುತವಾಗಿ ಹಾಗೂ ಸೌಹಾರ್ದತವಾಗಿ ಹಬ್ಬವನ್ನು ಆಚರಿಸುವುದು, ಯಾವುದೇ ಅಹಿತಕರ ಘಟನೆಗಳು ಕಂಡುಬಂದರೆ ತುರ್ತು ಸಹಾಯವಣಿ 112 ಗೆ ಕರೆ ಮಾಡಿ. ಸ್ಥಳೀಯ ಪೊಲೀಸ್ ಠಾಣೆ/ಪೊಲೀಸ್ ಅಧಿಕಾರಿ ಸಿಬ್ಬಂದಿಗಳಿಗೆ ಮಾಹಿತಿ ನೀಡಲು ಕೋರಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಪಡೆಯದೇ ಯಾವುದೇ ಬ್ಯಾನರ್ ಮತ್ತು ಬಂಟಿಂಗ್ಸ್ ಗಳನ್ನು ಅಳವಡಿಸುವಂತಿಲ್ಲ.

ಮುಂಜಾಗ್ರತಾ ಕ್ರಮಗಳು:

ಅಗತ್ಯ ಸ್ಥಳಗಲ್ಲಿ ಸಿಸಿಟಿವಿಗಳ ಅಳವಡಿಕೆ, ಡ್ರೋನ್ ಕ್ಯಾಮೆರಾಗಳ ಹದ್ದಿನಕಣ್ಣು

ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ಚೆಕ್ ಪೋಸ್ಟ್ ಗಳು, ಜಿಲ್ಲೆಯ ಒಳ ಹಾಗೂ ಹೋರ ಹೋಗುವ ವ್ಯಕ್ತಿ ಹಾಗೂ ವಾಹನಗಳ ಮೇಲೆ ನಿಗಾ

ದಾವಣಗೆರೆ ನಗರ ಹಾಗೂ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಪಥಸಂಚಲನ

ಸಾರ್ವಜನಿಕರಲ್ಲಿ ಭಯಮುಕ್ತ, ಶಾಂತಿ ಸೌಹಾರ್ದಯುತ ಹಬ್ಬ ಆಚರಿಸಲು ಜಿಲ್ಲಾ ಪೊಲೀಸ್ ಕ್ರಮ

ಜಿಲ್ಲೆಯ ಎಲ್ಲಾ ಪೊಲೀಸ್ ಠಾಣಾ ಮಟ್ಟದಲ್ಲಿರುವ ಫ್ಲೆಕ್ಸ್, ಬಂಟಿಂಗ್ಸ್, ಬ್ಯಾನರ್ ಪ್ರಿಂಟಿಂಗ್ ಅಂಗಡಿಗಳೊಂದಿಗೆ ಸಭೆ ನಡೆಸಿ ಧಾರ್ಮಿಕ, ವ್ಯಕ್ತಿಯ ಬಗ್ಗೆ ಅವಹೇಳನವಿರುವಂತಹ ಬರಹಗಳು, ಚಿತ್ರಗಳು ಇರುವಂತಹ ಫ್ಲೆಕ್ಸ್ ಬಂಟಿಂಗ್ಸ್, ಬ್ಯಾನರ್ ಗಳನ್ನು ಪ್ರಿಂಟ್ ಮಾಡದಂತೆ ಸೂಚಿಸಲಾಗಿದೆ. ಹಾಗೇನಾದರೂ ಕಂಡು ಬಂದರೆ ಸ್ಥಳೀಯ ಠಾಣೆಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.

ಪೊಲೀಸ್ ಬಂದೋಬಸ್ತ್:

ಈದ್ ಮಿಲಾದ್ ಮೆರವಣಿಗೆ ಸಂಬಂಧ ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಹಾಗು ಕೆ.ಎಸ್.ಆರ್.ಪಿ ತುಕಡಿಗಳು ಮತ್ತು ಡಿಎಆರ್ ತುಕಡಿಗಳನ್ನು ಅಲ್ಲದೇ ಹೋಮ್ ಗಾರ್ಡ್ ಸಿಬ್ಬಂದಿಗಳನ್ನು ನಿಯೋಜಿಸಿದ್ದು, ಮೆರವಣಿಗೆ ಉದ್ದಕ್ಕೂ ಸಿಸಿಟಿವಿ ಅಳವಡಿಕೆ, ಮೆರವಣಿಗೆಯ ಸಂಪೂರ್ಣ ಚಿತ್ರಿಕರಣಕ್ಕೆ ವಿಡಿಯೋಗ್ರಾಫರ್ಸ್ ಗಳನ್ನು ನಿಯೋಜಿಸಲಾಗಿದೆ. ಅಲ್ಲದೇ ಮೆರವಣಿಗೆಯ ಉದ್ದಕ್ಕೂ ಡ್ರೋನ್ ಕಣ್ಗಾವಲು ಇರಿಸಲಾಗಿರುತ್ತದೆ, ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಕಾನೂನು & ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿರುತ್ತದೆ.

ಪೊಲೀಸ್ ಇಲಾಖೆ ನಾಗರಿಕರಿಗೆ ಎರಡು ಸಂದೇಶಗಳನ್ನು ನೀಡಲು ಇಚ್ಛಿಸುತ್ತದೆ. ಜಿಲ್ಲೆಯಲ್ಲಿ ಶಾಂತಿ ಮತ್ತು ಕೋಮು ಸೌಹಾರ್ದತೆ ಪಾಲನೆ, ಜನಸ್ನೇಹಿ ಪೊಲೀಸ್ ಆಗಿ ಕರ್ತವ್ಯವನ್ನು ನಿರ್ವಹಿಸುತ್ತೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೆಚ್. ಟಿ, ಶೇಖರ್ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles