SUDDIKSHANA KANNADA NEWS/ DAVANAGERE/ DATE:26-10-2023
ದಾವಣಗೆರೆ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯಡಿ ಪಡಿತರ ಚೀಟಿ ಹೊಂದಿದ ‘ಕುಟುಂಬದ ಯಜಮಾನಿ’ ಎಂದು ಗುರುತಿಸಲ್ಪಟ್ಟ ಮಹಿಳೆಯರಿಗೆ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ ಆಗಸ್ಟ್ –2023 ರಿಂದ ಮಾಹೆಯಾನ ರೂ.2000 ಡಿಬಿಟಿ ಮೂಲಕ ಹಣ ಜಮೆ ಮಾಡಲಾಗುತ್ತಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಸೆಪ್ಟೆಂಬರ್ ಮಾಹೆಯಲ್ಲಿ 3,45,386 ಫಲಾನುಭವಿಗಳ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ರೂ.2000 ಹಣ ಜಮೆ ಮಾಡಲಾಗಿದೆ. ಅರ್ಜಿ ಸಲ್ಲಿಸಿದ 31,512 ಫಲಾನುಭವಿಗಳ ಆಧಾರ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆ ಜೋಡಣೆಯಾಗದೇ ಇ-ಕೆವೈಸಿ ಅಪ್ಡೇಟ್ ಆಗದೇ ಇರುವುದರಿಂದ ಹಣ ಜಮೆಯಾಗದೇ ಇರುವವರು ತಮ್ಮ ಖಾತೆ ಹೊಂದಿರುವ ಬ್ಯಾಂಕ್ಗಳಿಗೆ ಸಂಪರ್ಕಿಸಿ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ವಿವರಗಳನ್ನು ನೀಡಿ ಆಧಾರ್ ಜೋಡಣೆ ಮತ್ತು ಇಕೆವೈಸಿ ಅಪ್ಡೇಟ್ ಮಾಡಿಸಿಕೊಳ್ಳುವುದು.
ಫಲಾನುಭವಿಗಳು ಆಧಾರ್ ಕಾರ್ಡ್, ಪಡಿತರ ಚೀಟಿಯನ್ವಯ ಹಾಗೂ ಪಾಸ್ಪುಸ್ತಕದಲ್ಲಿರುವ ಖಾತೆದಾರರ
ಹೆಸರು ಹೊಂದಾಣಿಕೆ ಮಾಡಿಸಿಕೊಳ್ಳುವಂತೆ ಯೋಜನೆಯ ಸೌಲಭ್ಯವನ್ನು ಪಡೆಯುವಂತೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿವಮೊಗ್ಗ ಇವರು ತಿಳಿಸಿದ್ದಾರೆ.