ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಲೋಕಸಭಾ ಚುನಾವಣೆ: ಅಧಿಕಾರಿಗಳಿಂದ ಮತ ಎಣಿಕೆಗೆ ಸಿದ್ಧತೆ

On: June 3, 2024 9:15 AM
Follow Us:
---Advertisement---

ಬೆಂಗಳೂರು: ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯವು ಜೂನ್ 4ರ ಬೆಳಗ್ಗೆ 8ಕ್ಕೆ ಮತ ಎಣಿಕೆ ಆರಂಭಗೊಳ್ಳಲಿದ್ದು, ಮತ ಎಣಿಕೆ ಕೇಂದ್ರಗಳಲ್ಲಿ ಅಧಿಕಾರಿಗಳು ಮತ ಎಣಿಕೆಗೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.

ಕೇಂದ್ರದಲ್ಲಿನ ಪ್ರತಿ ಟೇಬಲ್‌ಗೆ ಸೂಕ್ಷ್ಮ ವೀಕ್ಷಕ, ಮತ ಎಣಿಕೆ ಮೇಲ್ವಿಚಾರಕರು ಮತ್ತು ಮತ ಎಣಿಕೆ ಸಹಾಯಕರನ್ನು ನಿಯೋಜಿಸಲಾಗಿದೆ. ಒಂದು ಕೊಠಡಿಯಲ್ಲಿ 14 ಟೇಬಲ್‌ಗಳನ್ನು ಹಾಕಲು ಅವಕಾಶವಿದ್ದು, ದೊಡ್ಡ ಕೊಠಡಿಗಳಿದ್ದರೆ ಹೆಚ್ಚಿನ ಟೇಬಲ್‌ಗಳನ್ನು ಹಾಕಲಾಗುತ್ತದೆ. ಮತ ಎಣಿಕೆ ಸಿಬ್ಬಂದಿ ಹಾಗೂ ಅಭ್ಯರ್ಥಿಗಳ ಮತ ಎಣಿಕೆ ಏಜೆಂಟ್‌ಗಳು ಬೆಳಗ್ಗೆ 6 ಗಂಟೆಗೆ ಮತ ಎಣಿಕೆ ಕೇಂದ್ರದಲ್ಲಿ ಹಾಜರಿರಬೇಕು. ಗುರುತಿನ ಚೀಟಿ ಇರುವವರಿಗೆ ಮಾತ್ರ ಮತ ಎಣಿಕೆ ಕೇಂದ್ರದ ಒಳಗೆ ಪ್ರವೇಶ ನೀಡಲಾಗುವುದು.

ಇನ್ನು ಈ ಬಾರಿಯು ಅಂಚೆ ಮತದಾನವು ಏರಿಕೆಯಾಗಿದೆ. ಇದರ ಎಣಿಕೆ ಕಾರ್ಯ ನಿರಂತರವಾಗಿ ನಡೆಯಲಿದ್ದು, ಕೊನೆಯ ಸುತ್ತಿಗೆ ಮುಂಚಿತವಾಗಿ ಅಂಚೆ ಮತದಾನದ ಎಣಿಕೆಯನ್ನು ಪೂರ್ಣಗೊಳಿಸಲಾಗುತ್ತದೆ. ಇನ್ನು ಮತ ಎಣಿಕೆ ಕೇಂದ್ರದ ಪ್ರತಿ ಕೊಠಡಿಯಲ್ಲೂ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಅದರ ಜೊತೆಗೆ ಚುನಾವಣಾಧಿಕಾರಿ ನಿರ್ದೇಶನದ ಮೇರೆಗೆ ಇನ್ನಿತರ ಕಡೆಗಳಲ್ಲಿಯೂ ಸಿಸಿಟಿವಿ ಕ್ಯಾಮೆರಾ ಹಾಗೂ ವಿಡಿಯೊಗ್ರಫಿ ವ್ಯವಸ್ಥೆ ಕಲ್ಪಿಸಲಾಗುತ್ತದೆ.

ಮತ ಎಣಿಕೆ ಕೇಂದ್ರದಲ್ಲಿ ವೀಕ್ಷಕರಿಗಾಗಿ ಒಂದು ಕೊಠಡಿ, ಚುನಾವಣಾಧಿಕಾರಿಗಾಗಿ ಒಂದು ಕೊಠಡಿ ಇರಲಿದೆ. ಮಾಧ್ಯಮ ಕೇಂದ್ರ ಕೂಡ ಇರಲಿದ್ದು, ಈ ಕೇಂದ್ರದಲ್ಲಿ ಮಾತ್ರ ಮಾಧ್ಯಮದವರಿಗೆ ಮೊಬೈಲ್ ಬಳಸಲು ಅವಕಾಶವಿದೆ. ಹೊರತಾಗಿ ಈ ಕೊಠಡಿಯ ಹೊರಗಡೆ ಮೊಬೈಲ್ ಬಳಸಲು ಅವಕಾಶವಿಲ್ಲ. ಮತ ಎಣಿಕೆ ಕಾರ್ಯದಲ್ಲಿ ಕಾರ್ಯ ನಿರ್ವಹಿಸುವ ಯಾವುದೇ ಸಿಬ್ಬಂದಿ ಎಣಿಕೆ ಕೇಂದ್ರದಲ್ಲಿ ಮೊಬೈಲ್ ಅಥವಾ ಬ್ಯಾಗ್ ತರುವಂತಿಲ್ಲ. ಜೊತೆಗೆ ಏಜೆಂಟ್‌ಗಳು ಕೂಡ ಮೊಬೈಲ್ ಅಥವಾ ಬ್ಯಾಗ್ ತರುವಂತಿಲ್ಲ.

Join WhatsApp

Join Now

Join Telegram

Join Now

Leave a Comment