Site icon Kannada News-suddikshana

ಮತ ಎಣಿಕೆ ಆರಂಭ: ಸಿಕ್ಕಿಂನಲ್ಲಿ ಎಸ್‌ಎಂಗೆ, ಅರುಣಾಚಲ ಪ್ರದೇಶದಲ್ಲಿ ಬಿಜೆಪಿಗೆ ಮುನ್ನಡೆ

ದೆಹಲಿ: ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು ಬೆಳಿಗ್ಗೆ 6 ಗಂಟೆಗೆ ಆರಂಭಗೊಂಡಿದ್ದು, ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಹಾಗೂ ಸಿಕ್ಕಿಂನಲ್ಲಿ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ (ಎಸ್‌ಕೆಎಂ) ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ. 

ಸಿಕ್ಕಿಂನ 32 ಕ್ಷೇತ್ರಗಳ ಮತ ಎಣಿಕೆ ಹಾಗೂ ಅರುಣಾಚಲ ಪ್ರದೇಶ 60 ಕ್ಷೇತ್ರಗಳ ಪೈಕಿ 50 ಕ್ಷೇತ್ರಗಳ ಮತ ಎಣಿಕೆ ಆರಂಭಗೊಂಡಿದೆ. ಈ ಪೈಕಿ ಸಿಕ್ಕಿಂನಲ್ಲಿ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ (ಎಸ್‌ಕೆಎಂ)ಪಕ್ಷವು 24 ಹಾಗೂ ಅರುಣಾಚಲ ಪ್ರದೇಶದಲ್ಲಿ 24 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಪಡೆದುಕೊಂಡಿದೆ. ಇನ್ನುಳಿದಂತೆ ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಇಪಿ) 4 ಕಡೆ ಹಾಗೂ ಇತರೆ ಅಭ್ಯರ್ಥಿಗಳು 6 ಕಡೆ ಮುನ್ನಡೆ ಸಾಧಿಸಿದೆ.

ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೇರಲಿದೆ ಎಂದು ಆಕ್ಸಿಸ್ ಮೈ ಇಂಡಿಯಾದ ಮತಗಟ್ಟೆ ಸಮೀಕ್ಷೆ ಮೂಲಕ ತಿಳಿದುಬಂದಿದೆ. 44 ರಿಂದ 51 ಸ್ಥಾನಗಳನ್ನು ಪಡೆದು ರಾಜ್ಯದಲ್ಲಿ ಬಿಜೆಪಿ ಗೆಲ್ಲಲಿದೆ. ಉಳಿದಂತೆ 1 ರಿಂದ 4 ಸ್ಥಾನ ಕಾಂಗ್ರೆಸ್‌, ತಲಾ 2 ರಿಂದ 6 ಕ್ಷೇತ್ರಗಳು ಕ್ರಮವಾಗಿ ಎನ್‌ಪಿಪಿ ಮತ್ತು ಇತರರ ಪಾಲಾಗಲಿವೆ ಎಂದು ಹೇಳಲಾಗಿದೆ.

ಇನ್ನು ಅರುಣಾಚಲ ಪ್ರದೇಶ 60 ಕ್ಷೇತ್ರಗಳ ಪೈಕಿ ಬಿಜೆಪಿಯು 10 ಕ್ಷೇತ್ರಗಳನ್ನು ಈಗಾಗಲೇ ಅವಿರೋಧವಾಗಿ ಜಯಗಳಿಸಿದೆ. ಇನ್ನು ಈ ಎರಡೂ ರಾಜ್ಯಗಳಲ್ಲಿ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯ ಮತದಾನ ಏಪ್ರಿಲ್ 19 ರಂದು ಏಕಕಾಲದಲ್ಲಿ ನಡೆದಿತ್ತು.

Exit mobile version