• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Friday, June 20, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

2ನೇ ಹಂತದಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ.7ಕ್ಕೆ ಚುನಾವಣೆ, ಇಂದಿನಿಂದಲೇ ನೀತಿ ಸಂಹಿತೆ ಜಾರಿ: ಎಷ್ಟು ಮತದಾರರಿದ್ದಾರೆ ಗೊತ್ತಾ? ಫುಲ್ ಡೀಟೈಲ್ಸ್

Editor by Editor
March 16, 2024
in ದಾವಣಗೆರೆ
0
2ನೇ ಹಂತದಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ.7ಕ್ಕೆ ಚುನಾವಣೆ, ಇಂದಿನಿಂದಲೇ ನೀತಿ ಸಂಹಿತೆ ಜಾರಿ: ಎಷ್ಟು ಮತದಾರರಿದ್ದಾರೆ ಗೊತ್ತಾ? ಫುಲ್ ಡೀಟೈಲ್ಸ್

SUDDIKSHANA KANNADA NEWS/ DAVANAGERE/ DATE:16-03-2024

ದಾವಣಗೆರೆ: ಭಾರತ ಚುನಾವಣಾ ಆಯೋಗವು ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದು ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆ ರಾಜ್ಯದ ಎರಡನೇ ಹಂತದಲ್ಲಿ ನಡೆಯಲಿದೆ. ಮೇ 7 ರಂದು ಮತದಾನ ನಡೆಯಲಿದೆ.

ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಲೋಕಸಭಾ ಚುನಾವಣೆಯು ದೇಶದಲ್ಲಿ 7 ಹಂತಗಳಲ್ಲಿ ನಡೆಯಲಿದೆ. ಕರ್ನಾಟಕ ರಾಜ್ಯದಲ್ಲಿ ದೇಶದ ಎರಡನೇ ಹಾಗೂ ಮೂರನೇ ಹಂತದಲ್ಲಿ ಇಲ್ಲಿನ ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು ರಾಜ್ಯದಲ್ಲಿ ನಡೆಯುವ ಹಂತದನ್ವಯ ಎರಡನೇ ಹಂತದಲ್ಲಿ ದಾವಣಗೆರೆ ಲೋಕಸಭಾ ಚುನಾವಣೆ ನಡೆಯಲಿದೆ.

ಏಪ್ರಿಲ್ 12 ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದ್ದು ಏ.19 ರ ವರೆಗೆ ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಏ.20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರಗಳನ್ನು ವಾಪಸ್ ಪಡೆಯಲು ಏ.22 ಕೊನೆಯ ದಿನವಾಗಿರುತ್ತದೆ. ಮತದಾನವು ಮೇ 7 ರಂದು ನಡೆಯಲಿದೆ.

ಮತ ಎಣಿಕೆಯು ಜೂನ್ 4 ರಂದು ದಾವಣಗೆರೆ ವಿ.ವಿ. ಆವರಣದಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯದ ಸಭಾಂಗಣವನ್ನು ಚುನಾವಣಾಧಿಕಾರಿಗಳ ಕಚೇರಿಯನ್ನಾಗಿ ಮಾಡಲಾಗಿದ್ದು ಇಲ್ಲಿಯೇ ನಾಮಪತ್ರಗಳನ್ನು ಸ್ವೀಕರಿಸಲಾಗುತ್ತದೆ. ನಾಮಪತ್ರ ಸಲ್ಲಿಕೆ ವೇಳೆ ಸಾಮಾನ್ಯ ಅಭ್ಯರ್ಥಿಯಾಗಿದ್ದಲ್ಲಿ ರೂ.25 ಸಾವಿರ ಹಾಗೂ ಪ.ಜಾ, ಪ.ಪಂಗಡ ಅಭ್ಯರ್ಥಿಯಾಗಿದ್ದಲ್ಲಿ ರೂ.12500 ಠೇವಣಿ ಸಲ್ಲಿಸಬೇಕು, ಚುನಾವಣಾ ವೆಚ್ಚದ ಮಿತಿ ಪ್ರತಿ ಅಭ್ಯರ್ಥಿಗೆ ರೂ.95 ಲಕ್ಷ ಮಿತಿ ಇದೆ.

ಮತಗಟ್ಟೆಗಳ ವಿವರ:

ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಜಗಳೂರು, ಹರಪನಹಳ್ಳಿ, ಹರಿಹರ, ದಾವಣಗೆರೆ ಉತ್ತರ, ದಕ್ಷಿಣ, ಮಾಯಕೊಂಡ, ಚನ್ನಗಿರಿ, ಹೊನ್ನಾಳಿ ವಿಧಾನಸಭಾ ಕ್ಷೇತ್ರಗಳು ಒಳಗೊಂಡಿವೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 1946 ಮತಗಟ್ಟೆಗಳು ಬರುತ್ತವೆ. ಇದರಲ್ಲಿ ದಾವಣಗೆರೆ ಜಿಲ್ಲೆಯಲ್ಲಿ 1693 ಮತಗಟ್ಟೆಗಳಿವೆ.

ಮತದಾರರು:

ಕ್ಷೇತ್ರವ್ಯಾಪ್ತಿಯಲ್ಲಿ ಹರಪನಹಳ್ಳಿ ಸೇರಿದಂತೆ ಪುರುಷ 838705, ಮಹಿಳಾ 840340, ಇತರೆ 136 ಹಾಗೂ 565 ಸೇವಾ ಮತದಾರರು ಸೇರಿ 16,79,746 ಮತದಾರರಿದ್ದಾರೆ. ವಿಧಾನಸಭಾ ಚುನಾವಣಾ ನಂತರ 2024 ರ ಜನವರಿ 1 ಕ್ಕೆ 18 ವರ್ಷ ತುಂಬುವವ ಯುವ ಮತದಾರರನ್ನು ಸೇರ್ಪಡೆ ಮಾಡಲಾಗಿದ್ದು 19507 ಪುರುಷ, 17339 ಮಹಿಳಾ, 3 ಇತರೆ ಸೇರಿ 36849 ಹೊಸ ಯುವ ಮತದಾರರು ಪಟ್ಟಿಯಲ್ಲಿ ನೊಂದಾಯಿಸಿದ್ದಾರೆ. ಏಪ್ರಿಲ್ 9 ರ ವರೆಗೂ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಅವಕಾಶ ಇದ್ದು ಆನ್‍ಲೈನ್ ಮೂಲಕ, ಅಥವಾ ಬಿ.ಎಲ್.ಓ ಮೂಲಕ ನೊಂದಾಯಿಸಿ ಯುವ ಮತದಾರರಾಗಿ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ. ವಿ. ವೆಂಕಟೇಶ್ ತಿಳಿಸಿದರು.

ರಾಜಕೀಯ ಜಾಹೀರಾತು ತೆರವು:

ಮಾದರಿ ನೀತಿ ಸಂಹಿತೆಯು ತಕ್ಷಣದಿಂದಲೇ ಜಾರಿಯಲ್ಲಿದ್ದು ಜೂನ್ 6 ರವರೆಗೆ ಜಾರಿಯಲ್ಲಿರುತ್ತದೆ. ಈಗಾಗಲೇ ರಾಜಕೀಯ ಪ್ರೇರಿತ ಪ್ಲೆಕ್ಸ್, ಬಂಟಿಂಗ್ಸ್, ಪೋಸ್ಟರ್, ಕರಪತ್ರಗಳನ್ನು ಅಳವಡಿಸಿದ್ದಲ್ಲಿ ಅವುಗಳನ್ನು 24 ಗಂಟೆಯೊಳಗಾಗಿ ಕೂಡಲೇ ತೆರವು ಮಾಡಬೇಕು. ಪ್ಲೆಕ್ಸ್ ಅಳವಡಿಸಲು ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿಗಳಿಂದ ಅನುಮತಿ ಪಡೆದು, ಅನುಮತಿ ನೀಡಿದ ಅವಧಿ ಮತ್ತು ಸ್ಥಳದಲ್ಲಿ ಮಾತ್ರ ಪ್ರದರ್ಶನಕ್ಕೆ ಅವಕಾಶ ಇರುತ್ತದೆ. ಎಲ್ಲಾ ಸರ್ಕಾರಿ ಇಲಾಖೆಗಳ ವೆಬ್‍ಸೈಟ್, ಕಾರ್ಯಕ್ರಮಗಳ ಪ್ರದರ್ಶನದಲ್ಲಿ ರಾಜಕೀಯ ವ್ಯಕ್ತಿಗಳ ಭಾವಚಿತ್ರ ಬಳಸಿದ್ದಲ್ಲಿ ತೆರವು ಮಾಡಬೇಕು. ಯಾವುದೇ ಹೊಸ ಕಾಮಗಾರಿ ಕೈಗೊಳ್ಳುವಂತಿಲ್ಲ, ಈಗಾಗಲೇ ಆರಂಭಿಸಿದ ಕಾಮಗಾರಿಗಳನ್ನು ಮುಂದುವರೆಸಬಹುದಾಗಿದೆ ಎಂದರು.

ಮಾದರಿ ನೀತಿ ಸಂಹಿತೆ ಜಾರಿಗೆ ತಂಡ ರಚನೆ:

ಮಾದರಿ ನೀತಿ ಸಂಹಿತೆ ಜಾರಿಗೆ ತಂಡಗಳನ್ನು ರಚಿಸಲಾಗಿದೆ. ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಸಹಾಯಕ ಚುನಾವಾಣಾಧಿಕಾರಿಗಳ ನೇಮಕ ಮಾಡಲಾಗಿದೆ. ಮತ್ತು ಜಿಲ್ಲೆಯ ಗಡಿಭಾಗದಲ್ಲಿ 20 ಚೆಕ್‍ಪೋಸ್ಟ್, ಜಿಲ್ಲೆಯೊಳಗೆ
15 ಚೆಕ್‍ಪೋಸ್ಟ್‍ಗಳನ್ನು ಸ್ಥಾಪನೆ ಮಾಡಲಾಗಿದೆ. ಮತ್ತು ಪೊಲೀಸ್ ಅಧಿಕಾರಿಗಳನ್ನೊಳಗೊಂಡು 25 ಪ್ಲೈಯಿಂಗ್ ಸ್ಕ್ವಾಡ್ ನೇಮಕ ಮಾಡಲಾಗಿದೆ. ವೀಡಿಯೋ ಸರ್ವಲೆನ್ಸ್ ಟೀಮ್, ಸಿಸಿ ಟಿವಿ ಅಳವಡಿಕೆ ಮಾಡಲಿದ್ದು ಈ ತಂಡಗಳು ದಿನದ 24 ಗಂಟೆಯು ಮೂರು ಪಾಳಿಯಲ್ಲಿ ಕೆಲಸ ನಿರ್ವಹಿಸಲಿವೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ಮಾತನಾಡಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಜಾಗೃತಿಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು, ಅದೇ ರೀತಿ ಈ ವರ್ಷವೂ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳುವ ಮೂಲಕ ಎಲ್ಲಾ ಮತದಾರರು ಮತದಾನ ಮಾಡಲು ಪ್ರೇರೇಪಣೆ ನೀಡಲಾಗುತ್ತದೆ. ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಐದು ವಿಶೇಷ ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗುತ್ತದೆ. ಸಖಿ, ವಿಶೇಷಚೇತನರು, ಯುವ ಮತದಾರರು, ಸಂಪ್ರದಾಯ, ಧ್ಯೇಯ ಮತಗಟ್ಟೆಗಳ ಸ್ಥಾಪನೆ ಮಾಡಲಾಗುತ್ತದೆ. 85 ವರ್ಷ ಮೇಲ್ಟಟ್ಟ 11258, ವಿಶೇಷಚೇತನ 20351 ಮತದಾರರು ಹಾಗೂ 180 ಜನರು ನೂರು ವರ್ಷಕ್ಕಿಂತಲೂ ಹೆಚ್ಚಿನ ಮತದಾರರಿದ್ದಾರೆ ಎಂದರು.

ಜಿಲ್ಲಾ ರಕ್ಷಣಾಧಿಕಾರಿ ಉಮಾಪ್ರಶಾಂತ್ ಮಾತನಾಡಿ ಮುಕ್ತ, ನ್ಯಾಯಸಮ್ಮತ, ಶಾಂತಯುತ ಚುನಾವಣೆ ನಡೆಸಲು ಎಲ್ಲಾ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ರೌಢಿ ಶೀಟರ್ ಗಳ ಬಾಂಡಿಂಗ್ ಓವರ್, ಸಮಾಜದಲ್ಲಿ ಶಾಂತಿ ಕದಡುವವರ ಪಟ್ಟಿ ಮಾಡಿ ಅವರ ಮೇಲೆ ನಿಗಾವಹಿಸಲಾಗುತ್ತಿದೆ. ಮೊಬೈಲ್ ತಂಡ, ಚೆಕ್ ಪೋಸ್ಟ್ ಗಳ ಮೂಲಕ ತೀವ್ರ ಕಟ್ಟೆಚ್ಚರ ವಹಿಸುವ ಮೂಲಕ ನ್ಯಾಯಸಮ್ಮತ ಚುನಾವಣೆ ನಡೆಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಈ ವೇಳೆ ಅಪರ ಜಿಲ್ಲಾಧಿಕಾರಿ ಸೈಯ್ಯದಾ ಅಫ್ರೀನ್ ಭಾನು ಎಸ್.ಬಳ್ಳಾರಿ ಉಪಸ್ಥಿತರಿದ್ದರು.

Next Post
ದಾವಣಗೆರೆ ಮದರ್ ಥೆರೆಸಾ ಜೀವಾನಾಥೆಯ ಬಗ್ಗೆ ಎಷ್ಟು ಗೊತ್ತು…? ವೈಕುಂಠಧಾಮದಲ್ಲಿ ಮಾ.17ರ ನಾಳೆ ಅಂತ್ಯಕ್ರಿಯೆ

ದಾವಣಗೆರೆ ಮದರ್ ಥೆರೆಸಾ ಜೀವಾನಾಥೆಯ ಬಗ್ಗೆ ಎಷ್ಟು ಗೊತ್ತು...? ವೈಕುಂಠಧಾಮದಲ್ಲಿ ಮಾ.17ರ ನಾಳೆ ಅಂತ್ಯಕ್ರಿಯೆ

Leave a Reply Cancel reply

Your email address will not be published. Required fields are marked *

Recent Posts

  • ಹಣ ಕೊಟ್ಟವರಿಗೆ ಮನೆ: ಕಾಂಗ್ರೆಸ್ ಶಾಸಕ ಬಿ. ಆರ್. ಪಾಟೀಲ್ ಗೆ ನಾವು ಬೆಂಬಲ ಕೊಡ್ತೇವೆಂದ ಆರ್. ಅಶೋಕ್!
  • ನಿವೇಶನದ ಹಕ್ಕುಪತ್ರ ನೀಡಲು ಲಂಚ ಪಡೆಯುವಾಗ ಬಿಲ್ ಕಲೆಕ್ಟರ್, ನೀರುಗಂಟಿ ಲೋಕಾಯುಕ್ತ ಬಲೆಗೆ!
  • “ರಾಜ್ಯ ಸರ್ಕಾರದಲ್ಲಿ ದುಡ್ಡು ಕೊಟ್ಟವರಿಗಷ್ಟೇ ವಸತಿ ಯೋಜನೆಯಡಿ ಮನೆ ಹಂಚಿಕೆ”: ಕಾಂಗ್ರೆಸ್ ಶಾಸಕನ ಗಂಭೀರ ಆರೋಪ!
  • ಭದ್ರಾ ಡ್ಯಾಂ ನೀರಿನ ಮಟ್ಟ 150 ಅಡಿಗೆ ಏರಿಕೆ: ಒಳಹರಿವಿನಲ್ಲಿ ಸ್ವಲ್ಪ ಕುಸಿತ, ಭರ್ತಿಗೆ ಬೇಕು 36 ಅಡಿ
  • ಈ ರಾಶಿಯವರ ವ್ಯಾಪಾರ ವಹಿವಾಟಗಳಲ್ಲಿ ಕ್ರಮೇಣ ಉನ್ನತಿ ಭಾಗ್ಯ, ಈ ರಾಶಿಯವರ ಪ್ರೇಮಿಗಳ ಮದುವೆಗೆ ವಿರೋಧ

Recent Comments

No comments to show.

Archives

  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಸಾಹಿತ್ಯ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In