Home ಕ್ರೈಂ ನ್ಯೂಸ್ ಬೆಳ್ಳಂಬೆಳಗ್ಗೆ ಚಹಾ ಕುಡಿಯುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ಹಲ್ಲೆ, ವಸ್ತ್ರಾಪಹರಣ: ನಾಲ್ವರು ಮುಸ್ಲಿಂ ಯುವಕರ ಬಂಧನ!
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

ಬೆಳ್ಳಂಬೆಳಗ್ಗೆ ಚಹಾ ಕುಡಿಯುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ಹಲ್ಲೆ, ವಸ್ತ್ರಾಪಹರಣ: ನಾಲ್ವರು ಮುಸ್ಲಿಂ ಯುವಕರ ಬಂಧನ!

Share
ಮಹಿಳೆ
Share

ನವದೆಹಲಿ: ದೇಶದ ರಾಜಧಾನಿಯ ನೆಹರು ಪ್ಲೇಸ್‌ನಲ್ಲಿ ಭಾನುವಾರ ಬೆಳಿಗ್ಗೆ ಭೀಕರ ಘಟನೆಯೊಂದು ನಡೆದಿದೆ. ಹೋಟೆಲ್ ಹೊರಗಿನ ಟೀ ಅಂಗಡಿಯಲ್ಲಿ ಚಹಾ ಕುಡಿಯುತ್ತಿದ್ದ ಅಸ್ಸಾಂ ಮತ್ತು ಬಿಹಾರ ಮೂಲದ ಇಬ್ಬರು ಮಹಿಳೆಯರ ಮೇಲೆ ಪುಂಡರ ಗುಂಪೊಂದು ಹಲ್ಲೆ ನಡೆಸಿ, ಕಿರುಕುಳ ನೀಡಿರುವ ಘಟನೆ ವರದಿಯಾಗಿದೆ.

ಘಟನೆಯ ವಿವರ:

ಮೇ 10ರಂದು ಬೆಳಿಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮಹಿಳೆಯರು ಚಹಾ ಕುಡಿಯುತ್ತಿದ್ದಾಗ ಅಲ್ಲಿಗೆ ಬಂದ ಕೆಲವರು ಅಂಗಿ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದಾರೆ. ಇದನ್ನು ಮಹಿಳೆಯರು ಪ್ರಶ್ನಿಸಿದಾಗ, ಆರೋಪಿಗಳು ಅವರ ಮೇಲೆ ಹಲ್ಲೆ  ನಡೆಸಿದ್ದಲ್ಲದೆ, ಬಟ್ಟೆ ಹರಿದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರಲಾಗಿದೆ. ಅಲ್ಲದೆ, ಮಹಿಳೆಯರ ಮೂಲವನ್ನು ಗುರಿಯಾಗಿಸಿಕೊಂಡು ಜನಾಂಗೀಯ ನಿಂದನೆ ಕೂಡ ಮಾಡಲಾಗಿದೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ.

ವಿಡಿಯೋ ಸಾಕ್ಷ್ಯ:

ಸಂತ್ರಸ್ತ ಮಹಿಳೆಯರು ಈ ಘಟನೆಯನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದು, ಇದು ತನಿಖೆಗೆ ಸಹಕಾರಿಯಾಗಿದೆ. ವಿಡಿಯೋದಲ್ಲಿ ಆರೋಪಿಗಳು ಕುಡಿದ ಅಮಲಿನಲ್ಲಿ ಅಶ್ಲೀಲ ಪದಗಳಿಂದ ನಿಂದಿಸುತ್ತಿರುವುದು ದಾಖಲಾಗಿದೆ. ಘಟನೆ ನಡೆಯುತ್ತಿದ್ದಾಗ ಸ್ಥಳದಲ್ಲಿದ್ದ ಅನೇಕರು ನೆರವಿಗೆ ಬಾರದೆ ಮೌನ ಪ್ರೇಕ್ಷಕರಾಗಿದ್ದರು ಎಂದು ಮಹಿಳೆಯರು ಅಳಲು ತೋಡಿಕೊಂಡಿದ್ದಾರೆ.

ನಾಲ್ವರ ಬಂಧನ:

ಘಟನೆಗೆ ಸಂಬಂಧಿಸಿದಂತೆ ಕಾಲ್ಕಾಜಿ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮೊಹಮ್ಮದ್ ಫಹಾದ್, ಮೊಹಮ್ಮದ್ ಸಾವೇಜ್, ಮೊಹಮ್ಮದ್ ಆರಿಫ್ ಮತ್ತು ಅಮನ್ ಎಂಬ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles