SUDDIKSHANA KANNADA NEWS/DAVANAGERE/DATE:16_12_2025
ಬೆಂಗಳೂರು: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಬೆಂಗಳೂರು ಇಲ್ಲಿ ಸೆಕ್ಯೂರಿಟಿ ಗಾರ್ಡ್ ಮತ್ತು ಫೈಮೆನ್ ಹುದ್ದೆಗಳಿಗೆ ನಾಲ್ಕು ವರ್ಷಗಳ ಅವಧಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ನೇಮಕಾತಿಯು ದೈಹಿಕ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆಗಳ ಮೆರಿಟ್ ಆಧಾರದಲ್ಲಿ ನಡೆಯುವುದು. ಆಯ್ಕೆಯಾದವರು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕಾಗುತ್ತದೆ. ಆಯ್ಕೆಯಾದವರಿಗೆ 21000/- ರೂ.ಗಳ ಮೂಲ ವೇತನವಿದ್ದು, ತುಟ್ಟಿ ಭತ್ಯೆ ಹಾಗೂ ಇತರೆ ಭತ್ಯೆಗಳು ಕೂಡ ಲಭ್ಯವಿದೆ.
ಆಸಕ್ತ ಮಾಜಿಸೈನಿಕರು ನಿಗದಿತ ನಮೂನೆಯ ಅರ್ಜಿಯನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಡಿ 26 ರೊಳಗೆ ಸಲ್ಲಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವAತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 08182-220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.





Leave a comment