SUDDIKSHANA KANNADA NEWS/ DAVANAGERE/ DATE:10-03-2025
ದಾವಣಗೆರೆ: ಮಾನಸ ಗಂಗೋತ್ರಿ ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಾಲೆ, ವಿಜಯಪುರ ಇವರು ಪ್ರಸಕ್ತ ಸಾಲಿಗೆ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 5ನೇ ತರಗತಿ ಮತ್ತು ಪಿಯುಸಿ ಹಾಗೂ 6 ರಿಂದ 10ನೇ ತರಗತಿಯವರೆಗೆ ಬಿಟ್ಟುಹೋದ, ಖಾಲಿ ಇರುವ ಸ್ಥಾನಗಳಿಗೆ ಆಯ್ಕೆ ಮಾಡಲು ಮಾ.9 ಮತ್ತು ಮೇ.18 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ದಾವಣಗೆರೆ, ಚನ್ನಗಿರಿ, ಜಗಳೂರು ಮತ್ತು ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಹರಿಹರ, ಹೊನ್ನಾಳಿ, ಕಚೇರಿಗಳನ್ನು
ಸಂಪರ್ಕಿಸಲು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.