ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

“ಗುಂಡಿಕ್ಕಿ ಕೊಲ್ಲಿ” ಎಂಬ ಕಾನೂನು ಜಾರಿಗೊಳಿಸಿ ಎಂಬ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ವಿಚಾರ: ಮಾಜಿ ಡಿಸಿಎಂ ವಿರುದ್ಧ ಎಫ್ಐಆರ್

On: February 9, 2024 9:51 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:09-02-2024

ದಾವಣಗೆರೆ: ದೇಶ ವಿಭಜನೆ ಬಗ್ಗೆ ಹೇಳಿಕೆ ನೀಡಿದ ಡಿ. ಕೆ. ಸುರೇಶ್ ಹಾಗೂ ವಿನಯ್ ಕುಲಕರ್ಣಿ ಅವರಂಥವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ಜಾರಿಗೆ ತರಬೇಕು ಎಂಬ ಆಗ್ರಹ ಮಾಡಿದ್ದ ಮಾಜಿ ಡಿಸಿಎಂ ಕೆ. ಎಸ್. ಈಶ್ವರಪ್ಪರ ವಿರುದ್ದ ಎಫ್ ಐ ಆರ್ ದಾಖಲಾಗಿದೆ. ನಗರದ ಬಡಾವಣೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಕೇಸ್ ನೀಡಲಾಗಿದೆ.

ಡಿ. ಕೆ. ಸುರೇಶ್ ಹಾಗೂ ವಿನಯ್ ಕುಲಕರ್ಣಿ ರಾಷ್ಟ್ರದ್ರೋಹಿಗಳು. ದೇಶ ವಿಭಜನೆ ಬಗ್ಗೆ ಮಾತನಾಡುವರು ಜಿನ್ನಾ ವಂಶಸ್ಥರು. ದೇಶ ಇಬ್ಬಾಗ ಮಾಡುವವರನ್ನು ಸುಮ್ಮನೆ ಬಿಡಬಾರದು. ಗುಂಡಿಕ್ಕಿ ಕೊಲ್ಲುವಂಥ
ಕಾನೂನನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೊಳಿಸಬೇಕು ಎಂಬ ಒತ್ತಾಯ ಮಾಡಿದ್ದರು.

ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಬಿಜೆಪಿ ನೂತನ ಜಿಲ್ಲಾಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ್ದ ಈಶ್ವರಪ್ಪರ ಹೇಳಿಕೆಗೆ ಆಕ್ರೋಶ ವ್ಯಕ್ತವಾಗಿತ್ತು. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಸಹ ಎಫ್ ಐ ಆರ್ ದಾಖಲಾಗಿರುವುದನ್ನು ಖಚಿತಪಡಿಸಿದ್ದಾರೆ.

ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು, ಕಾನೂನು ಮತ್ತು ಸುವ್ಯವಸ್ಥೆ ಹದಗೆಡಿಸುವ ಸಲುವಾಗಿ ಉದ್ರೇಕಕಾರಿ ಭಾಷಣ ಮಾಡಿದ್ದು ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ನಿಜಲಿಂಗಪ್ಪ ಬಡಾವಣೆಯ ನಿವಾಸಿ ಹನುಮಂತ ಎಂಬುವವರು ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ಈಶ್ವರಪ್ಪರ ವಿರುದ್ಧ ಐಪಿಸಿ ಕಲಂ 505 (1)ಸಿ, 505 (2), 506ರಡಿ ಎಫ್ ಐ ಆರ್ ದಾಖಲಿಸಲಾಗಿದೆ.

ಸಚಿವರಾದ ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಈಶ್ವರಪ್ಪರ ವಿರುದ್ಧ ಮುಗಿಬಿದ್ದಿದ್ದರು. ಹೆಚ್. ಕೆ. ಪಾಟೀಲ್ ಅವರು 24 ಗಂಟೆಯೊಳಗೆ ಕ್ಷಮೆಯಾಚಿಸಬೇಕು ಎಂದು ಎಚ್ಚರಿಕೆ ನೀಡಿದ್ದರು. ಆದ್ರೆ, ತನ್ನ ಹೇಳಿಕೆಗೆ ಬದ್ಧ ಎಂಬ ಹೇಳಿಕೆ ನೀಡಿದ್ದ ಈಶ್ವರಪ್ಪರ ವಿರುದ್ದ ಎಫ್ ಐ ಆರ್ ದಾಖಲಿಸಲಾಗಿದೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment