ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಒಂದೇ ಆರೋಪ ಸಾಬೀತಾದರೂ ನೇಣು ಹಾಕಿಕೊಳ್ಳುತ್ತೇನೆ: ಬ್ರಿಜ್ ಭೂಷಣ್ ಶರಣ್ ಸಿಂಗ್ ಸವಾಲು: ವಜಾ ಆಗುವವರೆಗೂ ಹೋರಾಟ ನಿಲ್ಲದು ಎಂದ ಹೋರಾಟಗಾರರು…!

On: May 31, 2023 12:20 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:31-05-2023

ಲಖನೌ: ನನ್ನ ವಿರುದ್ಧ ಒಂದು ಆರೋಪ ಸಾಬೀತಾದರೂ ಸಾಕು ನೇಣು ಹಾಕಿಕೊಳ್ಳುತ್ತೇನೆ. ದಾಖಲೆಗಳಿದ್ದರೆ ಕುಸ್ತಿಪಟುಗಳಿಗೆ ನೀಡಲು ಹೇಳಿ. ಕೋರ್ಟ್ ಗೆ ನೀಡಲಿ. ನಾನು ತಪ್ಪು ಮಾಡಿದ್ದೇ ಆದರೆ ಯಾವುದೇ ಶಿಕ್ಷೆ ವಿಧಿಸಿದರೂ ಅನುಭವಿಸಲು ಸಿದ್ಧನಿದ್ದೇನೆ ಎಂದು ಡಬ್ಲ್ಯೂ ಎಫ್ ನ (WFI) ಮುಖ್ಯಸ್ಥ ಮತ್ತು ಬಿಜೆಪಿ (BJP)ಸಂಸದ ಬ್ರಿಜ್ ಶರಣ್ ಸಿಂಗ್ ಎಎನ್ ಎ ಸಂಸ್ಥೆಯು ಟ್ವೀಟ್ ಮಾಡಿರುವ ವಿಡಿಯೋ(VEDEO)ದಲ್ಲಿ ಸವಾಲು ಹಾಕಿದ್ದಾರೆ.

ಗಂಗೆಗೆ ಪದಕ ಎಸೆಯುವುದಾಗಿ ಕುಸ್ತಿಪಟುಗಳು ಹರಿದ್ವಾರಕ್ಕೆ ತೆರಳಿದ ವಿಚಾರದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ನನ್ನ ವಿರುದ್ಧದ ಆರೋಪಗಳ ಬಗ್ಗೆ ದೆಹಲಿ (DELHI) ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪದಲ್ಲಿ ಸತ್ಯವಿದ್ದಿದ್ದೇ ಆದರೆ ನನ್ನನ್ನು ಪೊಲೀಸರು ಬಂಧಿಸುತ್ತಾರೆ. ಕಾನೂನಿಗೆ ತಲೆಬಾಗುತ್ತೇನೆ ಎಂದಿದ್ದಾರೆ.

ಸ್ಪಿನ್ ಮಾಂತ್ರಿಕನ ಬೆಂಬಲ:

ಮೇ 28 ರಂದು ದೆಹಲಿ ಪೊಲೀಸರು ಜಂತರ್ ಮಂತರ್ ಪ್ರತಿಭಟನಾ ಸ್ಥಳದಿಂದ ಕುಸ್ತಿಪಟುಗಳನ್ನು ಬಲವಂತವಾಗಿ ತೆರವು ಮಾಡಿದ ರೀತಿಯಿಂದ ನನಗೆ ಬೇಸರವಾಗಿದೆ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ಸ್ಪಿನ್ ಮಾಂತ್ರಿಕ ಅನಿಲ್ ಕುಂಬ್ಳೆ ಹೇಳಿದ್ದಾರೆ.

ಭಾರತೀಯ ಕುಸ್ತಿ ಫೆಡರೇಷನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪದ ಮೇಲೆ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಮೇ 28 ರಂದು ನಮ್ಮ ಕುಸ್ತಿಪಟುಗಳ ಜತೆ ನಡೆದಿರುವ ವಿಷಯ ಕೇಳಿ ನೋವಾಯಿತು. ಸರಿಯಾದ ಮಾತುಕತೆಯ ಮೂಲಕ ಯಾವುದೇ ವಿಷಯವನ್ನೂ ಪರಿಹರಿಸಬಹುದು. ಆದಷ್ಟು ಬೇಗ ಸಮಸ್ಯೆ ಪರಿಹಾರವಾಗಲಿ ಎಂದು ಆಶಿಸುತ್ತಿರುವುದಾಗಿ ಅನಿಲ್ ಕುಂಬ್ಳೆ (ANIL KUMBLE)ಟ್ವೀಟ್ ಮಾಡಿದ್ದಾರೆ.

ಪ್ರತಿಭಟನಾ ನಿರತ ಕುಸ್ತಿಪಟುಗಳು ತಮ್ಮ ಪದಕಗಳನ್ನು ಗಂಗಾ ನದಿಗೆ ಎಸೆಯಲು ನಿರ್ಧರಿಸಿದ್ದರು. ಇದಕ್ಕಾಗಿ ತಾವು ಗೆದ್ದ ಪದಕಗಳನ್ನು ತೆಗೆದುಕೊಂಡು ಕುಸ್ತಿಪಟುಗಳು ಹರಿದ್ವಾರಕ್ಕೆ ಬಂದಿದ್ದರು. ಈ ಹೊತ್ತಲ್ಲಿ ರೈತರ ನಾಯಕ ನರೇಶ್ ಟಿಕಾಯತ್ ಅವರು ಹರಿದ್ವಾರದ ಹರ್ ಕಿ ಪೌರಿ ಘಾಟ್‌ಗೆ ಆಗಮಿಸಿದ್ದಾರೆ. ಅಲ್ಲಿ ಕುಸ್ತಿಪಟುಗಳೊಂದಿಗೆ ಮಾತನಾಡಿ ಅವರು ನೀವು ಕಷ್ಟಪಟ್ಟು ಸಂಪಾದಿಸಿದ ಪದಕಗಳನ್ನು ಪವಿತ್ರ ನದಿಯಾದ ಗಂಗಾದಲ್ಲಿ ಬಿಸಾಡುವ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಒತ್ತಾಯಿಸಿದ ನಂತರ ಕುಸ್ತಿಪಟುಗಳು ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.

ಮಂಗಳವಾರ ಪ್ರತಿಭಟನಾ ನಿರತ ಕುಸ್ತಿಪಟುಗಳು ತಮ್ಮ ಪದಕಗಳನ್ನು ಗಂಗಾ ನದಿಗೆ ಎಸೆಯಲು ನಿರ್ಧರಿಸಿದ್ದರು. ಇದಕ್ಕಾಗಿ ತಾವು ಗೆದ್ದ ಪದಕಗಳನ್ನು ತೆಗೆದುಕೊಂಡು ಕುಸ್ತಿಪಟುಗಳು ಹರಿದ್ವಾರಕ್ಕೆ ಬಂದಿದ್ದರು. ಈ ಹೊತ್ತಲ್ಲಿ ರೈತರ ನಾಯಕ ನರೇಶ್ ಟಿಕಾಯತ್ ಅವರು ಹರಿದ್ವಾರದ ಹರ್ ಕಿ ಪೌರಿ ಘಾಟ್‌ಗೆ ಆಗಮಿಸಿದ್ದಾರೆ. ಅಲ್ಲಿ ಕುಸ್ತಿಪಟುಗಳೊಂದಿಗೆ ಮಾತನಾಡಿ ಅವರು ನೀವು ಕಷ್ಟಪಟ್ಟು ಸಂಪಾದಿಸಿದ ಪದಕಗಳನ್ನು ಪವಿತ್ರ ನದಿಯಾದ ಗಂಗಾದಲ್ಲಿ ಬಿಸಾಡುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದ ನಂತರ ಕುಸ್ತಿಪಟುಗಳು ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.

ಕುಸ್ತಿಪಟುಗಳು ತಮ್ಮ ಪದಕಗಳನ್ನು ಭಾರತೀಯ ಕಿಸಾನ್ ಯೂನಿಯನ್ ಅಧ್ಯಕ್ಷ ನರೇಶ್ ಟಿಕಾಯತ್ ಅವರಿಗೆ ಹಸ್ತಾಂತರಿಸಿದ್ದಾರೆ. ಐದು ದಿನಗಳಲ್ಲಿ ನ್ಯಾಯ ದೊರಕಿಸಿಕೊಡಲು ಟಿಕಾಯತ್ ಸಹಾಯ ಮಾಡಬೇಕೆಂಬ ಷರತ್ತಿನೊಂದಿಗೆ ಕುಸ್ತಿಪಟುಗಳು ತಮ್ಮ ಪದಕಗಳನ್ನು ಹಸ್ತಾಂತರಿಸಿದ್ದಾರೆ. ಟಿಕಾಯತ್ ಘಾಟ್‌ಗೆ ಆಗಮಿಸುವ ಮೊದಲು, ನದಿಯ ವ್ಯವಹಾರಗಳನ್ನು ನೋಡಿಕೊಳ್ಳುವ ಗಂಗಾ ಸಭೆಯು ಪದಕಗಳನ್ನು ಬಿಸಾಡುವುದಕ್ಕೆ ನಿಷೇಧಿಸುವ ಆದೇಶವನ್ನು ಸಂಜೆ ಹೊರಡಿಸಿತ್ತು. ಕುಸ್ತಿಪಟುಗಳು ತಮ್ಮ ಪದಕಗಳನ್ನು ಬಿಸಾಡಲು ಹರಿದ್ವಾರದ ಗಂಗಾ ತೀರದಲ್ಲಿರುವ ಹರ್ ಕಿ ಪೌರಿಯನ್ನು ಆಯ್ಕೆ ಮಾಡಿಕೊಂಡಿದ್ದರು.

ಇದಕ್ಕೂ ಮುನ್ನ ತಮ್ಮ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ಹೇಳಿಕೆಯನ್ನು ಹಂಚಿಕೊಂಡ ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಈ ಪದಕಗಳು ನಮ್ಮ ಜೀವನ ಮತ್ತು ಆತ್ಮ. ನಾವು ಅವುಗಳನ್ನು ಗಂಗೆಯಲ್ಲಿ ಬಿಸಾಡಲಿದ್ದೇವೆ, ಏಕೆಂದರೆ ಅವಳು ಮಾ ಗಂಗಾ. ಅದರ ನಂತರ, ಬದುಕುವುದರಲ್ಲಿ ಅರ್ಥವಿಲ್ಲ, ಹಾಗಾಗಿ ನಾವು ಇಂಡಿಯಾ ಗೇಟ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತೇವೆ ಎಂದಿದ್ದಾರೆ. ಇಂಡಿಯಾ ಗೇಟ್ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಹುತಾತ್ಮರ ಸ್ಥಳವಾಗಿದೆ. ನಾವು ಅವರಷ್ಟು ಪವಿತ್ರರಲ್ಲ, ಆದರೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸುವಾಗ ನಮ್ಮ ಭಾವನೆಗಳು ಆ ಸೈನಿಕರನ್ನು ಹೋಲುತ್ತವೆ ಎಂದು 2016 ರ ರಿಯೊ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್ ಟ್ವೀಟ್ ಮಾಡಿದ್ದರು. ಏತನ್ಮಧ್ಯೆ, ಇಂಡಿಯಾ ಗೇಟ್ ನಲ್ಲಿ ಪ್ರತಿಭಟನೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

 

 

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment