ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ರಾಮೇಶ್ವರ ಕಫೆ ಸ್ಪೋಟ ಪ್ರಕರಣ: ಯಾರನ್ನು ರಕ್ಷಿಸುವ ಪ್ರಶ್ನೆ ಇಲ್ಲ, ಕುಕ್ಕರ್ ಬಾಂಬ್ ಬ್ಲಾಸ್ ಆದಾಗಲೂ ಬಿಜೆಪಿ ತುಷ್ಟೀಕರಣ ಮಾಡಿತ್ತಾ…? ಸಿಎಂ ಸಿದ್ದರಾಮಯ್ಯ ಪ್ರಶ್ನೆ

On: March 2, 2024 3:51 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:02-03-2024

ಮೈಸೂರು: ರಾಮೇಶ್ವರ ಕೆಫೆ ಸ್ಫೋಟ ಪ್ರಕರಣವು ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಸ್ಫೋಟ ಪ್ರಕರಣ ಸಂಬಂಧ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನ ನಿವಾಸದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸ್ಫೋಟಕ ಇಟ್ಟು ಹೋಗಿದ್ದ ಆರೋಪಿಯ ಪತ್ತೆ ಹಚ್ಚುವ ಕಾರ್ಯ ಚುರುಕಾಗಿ ನಡೆದಿದೆ ಎಂದು ತಿಳಿಸಿದರು.

ಸ್ಫೋಟವಾಗಿರುವುದು ನಿಜ. ಆರೋಪಿ ಮಾಸ್ಕ್ ಮತ್ತು ಟೋಪಿ ಧರಿಸಿ ಬಸ್ಸಿನಲ್ಲಿ ಬಂದು ತಿಂಡಿ ತಿಂದು ನಂತರ ಸ್ಫೋಟಕವುಳ್ಳ ಬ್ಯಾಗ್ ಇಟ್ಟು ತೆರಳಿದ್ದಾನೆ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಪಮುಖ್ಯಮಂತ್ರಿ, ಗೃಹ ಸಚಿವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ ಎಂದರು.

ಮಂಗಳೂರು ಕುಕ್ಕರ್ ಬಾಂಬ್ ಹಾಗೂ ಈ ಸ್ಫೋಟಕ್ಕೂ ಸಾಮ್ಯತೆ ಇರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ತನಿಖೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.

ರಾಜಕೀಯ ಹೇಳಿಕೆ

ಅಲ್ಪಸಂಖ್ಯಾತರ ತುಷ್ಟೀಕರಣದಿಂದಾಗಿ ಈ ರೀತಿಯ ಘಟನೆಗಳು ನಡೆಯುತ್ತಿವೆ ಎಂದು ಬಿಜೆಪಿ ನಾಯಕರು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ರಾಜಕೀಯವಾದ ಹೇಳಿಕೆ ನೀಡಿದ್ದಾರೆ. ಅವರ ಕಾಲದಲ್ಲಿಯೂ
ಬಾಂಬ್ ಸ್ಪೋಟವಾಗಿದೆ. ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟವಾದಾಗ ಏನು ಮಾಡಿದ್ದರು? ಆಗಲೂ ತುಷ್ಟೀಕರಣದಿಂದಾಗಿ ಆಗಿತ್ತೇ ಎಂದು ಪ್ರಶ್ನಿಸಿದರು.

ತನಿಖೆ ನಡೆಯುತ್ತಿದೆ

ಸ್ಪೋಟದ ಘಟನೆಯನ್ನು ನಾನು ಖಂಡಿಸುತ್ತೇನೆ. ಇದರಲ್ಲಿ ರಾಜಕಾರಣ ಮಾಡಬಾರದು ಎಂದರು. ಭಯೋತ್ಪಾದಕ ಕೃತ್ಯವೇ ಎಂಬ ಪ್ರಶ್ನೆಗೆ ಉತ್ತರಿಸಿ ತನಿಖೆ ಇನ್ನೂ ನಡೆಯುತ್ತಿದೆ ಎಂದರು.

ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ

ವಿಧಾನಸೌಧದ ಪ್ರಕರಣ ಕುರಿತು ಎಫ್.ಎಸ್.ಎಲ್ ವರದಿಯನ್ನು ಸರ್ಕಾರ ಬಹಿರಂಗ ಮಾಡುತ್ತಿಲ್ಲ. ಸತ್ಯವನ್ನು ತಿರುಚುವ ಕೆಲಸ ಸರ್ಕಾರ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿ, ಇಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದರು. ತಪ್ಪಿತಸ್ಥರನ್ನು ಶಿಕ್ಷಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಿಯೇ ತೀರುತ್ತದೆ ಎಂದು ಹೇಳಿದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment