SUDDIKSHANA KANNADA NEWS/ DAVANAGERE/ DATE-04-06-2025
ಬೆಂಗಳೂರು: ಆರ್‌ಸಿಬಿಯ ಐಪಿಎಲ್ ಗೆಲುವಿನ ಸಂಭ್ರಮಾಚರಣೆಗೆ ಸಾಕ್ಷಿಯಾಗಬೇಕಿದ್ದ ಜನರು ದುರಂತಕ್ಕೆ ಒಳಗಾಗಿ, ಮೃತಪಟ್ಟಿರುವುದು ತೀವ್ರ ನೋವು ಮತ್ತು ಆಘಾತ ತಂದಿದೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.
ಮೃತರಿಗೆ ನನ್ನ ಸಂತಾಪಗಳು. ಅವರ ಕುಟುಂಬಕ್ಕೆ ನನ್ನ ಸಾಂತ್ವನಗಳು. ಸ್ವಾಭಿಮಾನ ಇರಲಿ, ಆದರೆ ಜೀವಕ್ಕಿಂತ ದೊಡ್ಡದಲ್ಲ. ದಯವಿಟ್ಟು ಎಲ್ಲರೂ ಸುರಕ್ಷಿತವಾಗಿರಿ ಎಂದು ಮನವಿ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
ನಾನು ಸಹ ಗಾಯಾಳುಗಳನ್ನು ಭೇಟಿ ಮಾಡಿದ್ದೇನೆ. ಅವರೊಟ್ಟಿಗೆ ಮಾತನಾಡಿದ್ದೇನೆ. ನಿಮ್ಮೊಂದಿಗೆ ಸರ್ಕಾರ ಇದೆ ಎಂಬ ಭರವಸೆ ನೀಡಿದ್ದೇನೆ. ಎಲ್ಲರೂ ಸುರಕ್ಷತೆಗೆ ಹೆಚ್ಚು ಆದ್ಯತೆ ನೀಡಿ ಎಂದು ಹೇಳಿದ್ದಾರೆ.