SUDDIKSHANA KANNADA NEWS/ DAVANAGERE/ DATE:09-02-2025
ದಾವಣಗೆರೆ: ರಾಜ್ಯ ಬಿಜೆಪಿಯಲ್ಲಿ ಯಾವುದೇ ಗೊಂದಲ ಇಲ್ಲ. ನಮ್ಮದು ಪ್ರಜಾಪ್ರಭುತ್ವ ಇರುವ ಪಕ್ಷ. ನಮ್ಮ ಹೈಕಮಾಂಡ್ ಬಹಳ ಗಟ್ಟಿಯಾಗಿದೆ. ಈಗ ದೆಹಲಿ ಚುನಾವಣೆ ಮುಗಿದಿದೆ. ಸಂಘಟನೆಗೆ ಹೆಚ್ಚು ಸಮಯ ನೀಡುತ್ತಾರೆ. ಆಗ ಕರ್ನಾಟಕದ ಬಗ್ಗೆಯೂ ನಿರ್ಣಯ ಆಗುತ್ತದೆ. ಎಲ್ಲವೂ ಅತ್ಯಂತ ಸುಖಾಂತ್ಯವಾಗಲಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.
ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಅವರ ಹೆಸರು ಸೂಚಿಸಿದ್ದೀರಾ ಎನ್ನುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ನಾನು ಯಾರ ಹೆಸರನ್ನೂ ಸೂಚಿಸಿಲ್ಲ. ನಾನು ಸಂಸದನಾಗಿ ನನ್ನ ಕೆಲಸವನ್ನು ಮಾಡುತ್ತಿದ್ದೇನೆ. ನಿಮ್ಮ ಮೂಲಗಳಿಗೆ ನೀವೆ ಉತ್ತರ ಕೊಡಬೇಕು. ಏನೇ ಇದ್ದರೂ ಪಕ್ಷದ ಹೈಕಮಾಂಡ್ ಒಳ್ಳೆಯ ತೀರ್ಮಾನ ಮಾಡುತ್ತದೆ ಎನ್ನುವ ವಿಶ್ವಾಸ ಇದೆ. ಹೈಕಮಾಂಡ್ ಯಾರನ್ನು ಆಯ್ಕೆ ಮಾಡುತ್ತಾರೋ ಅವರೇ ಉತ್ತಮ ಎಂದು ಹೇಳಿದರು.