ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಜಾತಿ ಸಮೀಕ್ಷೆ ವರದಿ ಸ್ವೀಕಾರದಿಂದ ಸಮಾಜದಲ್ಲಿ ಅಶಾಂತಿ, ಬೆಂಕಿ ಜೊತೆ ಆಟವಾಡಲು ಸರ್ಕಾರ ಹೊರಟಿದೆ: ಬಸವರಾಜ ಬೊಮ್ಮಾಯಿ ಗಂಭೀರ ಆರೋಪ

On: March 1, 2024 3:49 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:01-03-2024

ಬೆಂಗಳೂರು: ರಾಜ್ಯ ಸರ್ಕಾರ ಜಾತಿ ಸಮೀಕ್ಷೆ ವರದಿ ಪಡೆದಿರುವುದು ಸಮಾಜದಲ್ಲಿ ಅಶಾಂತಿಗೆ ಕಾರಣವಾಗಿದೆ. ಸರ್ಕಾರ ಬೆಂಕಿಯ ಜೊತೆ ಆಟವಾಡಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆ ಹತ್ತಿರ ಬಂದಾಗ ಕಾಂಗ್ರೆಸ್ ಪಕ್ಷ ಜಾತ್ಯತೀತ ಅಂತ ಕರೆಯುವ ಪಕ್ಷಕ್ಕೆ ಜಾತಿಗಳ ಮೇಲೆ ಪ್ರತಿ ಬರುತ್ತದೆ. ಚುನಾವಣೆ ಹತ್ತಿರ ಬಂದಾಗ ಜಾತಿ ಸಮಾವೇಶ, ಸುಳ್ಳು ಆಶ್ವಾಸನೆ ಕೊಡುವುದು ಮಾಡುತ್ತಾರೆ. 2017 ರಲ್ಲಿ ಸಿದ್ದರಾಮಯ್ಯ ಅವರು ಎಲ್ಲ ಜಾತಿಗಳ ಶಿಕ್ಷಣ ಮತ್ತು ಸಾಮಾಜಿಕ ಅಧ್ಯಯನ ಮಾಡಲು ಸೂಚಿಸಿದ್ದರು. ಅವರ ಉದ್ದೇಶ ಬೇರೆ ಇತ್ತು ಎಂದು ತಿಳಿಸಿದರು.

ಜಾತಿ ಗಣತಿ ಮಾಡುವ ಅಧಿಕಾರದ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿದೆ ಅದನ್ನು ತಪ್ಪಿಸಲು ಇವರು ಶೈಕ್ಷಣಿಕ, ಸಾಮಾಜಿಕ ಅಧ್ಯಯನ ಅಂತ ಹೇಳಿ ಉದ್ದೇಶ ಒಂದು ಆದೇಶ ಒಂದು ಆಗಿರುವುದರಿಂದ ಈ ಗೊಂದಲ
ಸೃಷ್ಟಿಯಾಯಿತು. ಕಾಂತರಾಜ ವರದಿ ಸಿದ್ದವಾದಾಗ ಸಿದ್ದರಾಮಯ್ಯ ಸಿಎಂ ಆಗಿದ್ದರು ಆಗ ಚುನಾವಣೆ ಇದ್ದ ಕಾರಣ ವರದಿ ಸ್ವೀಕಾರ ಮಾಡಲಿಲ್ಲ. ಆಗ ವರದಿಯ ಬಗ್ಗೆ ಸಾಕಷ್ಡು ಗೊಂದಲ ಇತ್ತು. ಈಗ ಕೊಟ್ಟಿರುವ ವರದಿಯಲ್ಲಿಯೂ ಗೊಂದಲ ಇದೆ. ಇವರು 5.82 ಕೋಟಿ ಜನರನ್ನು ಸಂಪರ್ಕ ಮಾಡಿದ್ದೇವೆ ಅಂತ ಹೇಳುತ್ತಾರೆ. ಆದರೆ, ಬಹುತೇಕ ಜನರು ತಮ್ಮನ್ನು ಸಂಪರ್ಕ ಮಾಡಿಲ್ಲ ಎನ್ನುತ್ತಾರೆ. ಈಗ ಕೊಟ್ಟಿರುವ ವರದಿ ಚೌ ಚೌ ವರದಿ. ಡಾಟಾ ಕಾಂತರಾಜ ಅವರದು, ಜಯಪ್ರಕಾಶ್ ಹೆಗ್ಡೆ ಅವರು ವರದಿ ನನ್ನದು ಅಂತ ಹೇಳಿದ್ದಾರೆ. ಸಿಎಂ ಜಯಪ್ರಕಾಶ್ ಹೆಗ್ಡೆ ಅವರ ಅವಧಿ ವಿಸ್ತರಿಸಿ ರಾಜಕೀಯ ಕಾರಣಕ್ಕೆ ವರದಿ ಪಡೆದಿದ್ದಾರೆ‌ ಎಂದು ಆರೋಪಿಸಿದರು.

ಜಾತಿ ಸಮೀಕ್ಷೆಗೆ ವಿರೋಧವಿಲ್ಲ. ಜಾತಿ ಸಮೀಕ್ಷೆಗೂ ನಮ್ಮ ವಿರೋಧವಿಲ್ಲ. ಜಾತಿ ಸಂಖ್ಯೆಯ ಜೊತೆಗೆ ಅವರ ಆರ್ಥಿಕ, ಸಾಮಾಜಿಕ ಸ್ಥಿತಿಗತಿ ಮೇಲೆತ್ತಬೇಕು ಎನ್ನುವ ಬದ್ದತೆ ನಮಗಿದೆ. ಅದಕ್ಕಾಗಿಯೇ ನಾವು ಎಸ್ಸಿ ಎಸ್ಟಿ
ಮೀಸಲಾತಿ ಹೆಚ್ಚಳ ಮಾಡಿದ್ದೇವೆ. ಈಗ ಇವರು ತೆಗೆದುಕೊಂಡ ವರದಿಯ ಬಗ್ಗೆ ಸರ್ಕಾರ ಯಾಕೆ ಮುಚ್ಚು ಮರೆ ಮಾಡುತ್ತಿದ್ದಾರೆ. ಈ ಬಗ್ಗೆ ಮುಕ್ತ ಚರ್ಚೆಯಾಗಬೇಕು. ಹಿಂದುಳಿದ ವರ್ಗದಲ್ಲಿ150 ಜಾತಿಗಳನ್ನು ಸೇರಿಸಿದ್ದಾರೆ. ಅವರಿಗೆ ಮೀಸಲಾತಿಯ ಬಗ್ಗೆ ಚರ್ಚೆಯಾಗಬೆಕು. ಹಿಂದುಳಿದವರಲ್ಲಿ ಅತಿ ಹಿಂದುಳಿದ ಕಟ್ಟ ಕಡೆಯ ಸಮುದಾಯಗಳಿಗೆ ಮೀಸಲಾತಿ ಪ್ರಯೋಜನ ಸಿಗುತ್ತಿಲ್ಲ. ಅವರಿಗೆ ಸೌಲಭ್ಯ ಸಿಗಬೇಕು. ಮುಖ್ಯಮಂತ್ರಿ ಇದನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು. ಅದು ಅಕ್ಷಮ್ಯ ಅಪರಾಧ ಎಂದು ಹೇಳಿದರು.

ಸರ್ಕಾರದ ನಡವಳಿಕೆಯಿಂದ ಸಮಾಜದಲ್ಲಿ ಅಶಾಂತಿ ಮೂಡುತ್ತಿದೆ. ಅವರ ಸಂಪುಟದ ಸಚಿವರೆ ಅಪಸ್ವರ ಎತ್ತಿದ್ದಾರೆ. ನಿಮ್ಮ ಸಂಪುಟದಲ್ಲಿ ಒಗ್ಗಟ್ಟಿಲ್ಲವಾ ? ಬದ್ದತೆ ಇಲ್ಲವೆ . ಜಾತಿ ಸಮೀಕ್ಷೆ ವಿಚಾರದಲ್ಲಿ ಸರ್ಕಾರ
ಡಬಲ್ ಗೇಮ್ ಆಡುತ್ತಿದ್ದು, ಚೂಟುವವರೂ ಇವರೇ, ರಮಿಸುವವರೂ ಇವರೇ, ಬಡವರು, ತುಳಿತಕ್ಕೊಳಗಾದವರ ಜೊತೆ ಆಟ ಆಡುವುದು ಸರಿಯಲ್ಲ. ಸಮಾಜದಲ್ಲಿ ಗೊಂದಲ ಉಂಟು ಮಾಡುವ ಕೆಲಸ ಮಾಡಬೇಡಿ. ವರದಿ ಮಾಡಿದವರೊಬ್ಬರು ನೀಡುವವರೊಬ್ಬರು. ಸಿಎಂ ವರದಿ ಸ್ವೀಕಾರ ಮಾಡುತ್ತಾರೆ. ಸಚಿವರೇ ಅದನ್ನು ವಿರೋಧ ಮಾಡುತ್ತಾರೆ ಏನಿದು ಎಂದು ಪ್ರಶ್ನಿಸಿದರು.

ಕೇಂದ್ರ ಸರ್ಕಾರ ಜಾತಿ ಸಮೀಕ್ಷೆ ಮಾಡುವ ಕುರಿತು ಕೇಳಿದ ಪ್ರಶ್ನೆಗೆ ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿ ಇದೆ. ಕೋರ್ಟ್ ಆದೇಶ ಬಂದ ತಕ್ಷಣ ಕೇಂದ್ರ ಸರ್ಕಾರ ತನ್ನ ನಿಲುವು ಪ್ರಕಟಿಸಲಿದೆ ಎಂದು ಹೇಳಿದರು.

ಮುಸ್ಲಿಮರು ಅಲ್ಪಸಂಖ್ಯಾತರಲ್ಲ:

ರಾಜ್ಯ ಸರ್ಕಾರ ಸ್ವೀಕಾರ ಮಾಡಿರುವ ವರದಿಯಲ್ಲಿ 70 ಲಕ್ಷ ಜನ ಮುಸ್ಲಿಂರಿದ್ದಾರೆ ಎಂದು ಸೋರಿಕೆಯಾದ ವರದಿಯಲ್ಲಿ ಮಾಹಿತಿ ಇದೆ. ಹಾಗಿದ್ದರೆ ಅವರು ಅಲ್ಪ ಸಂಖ್ಯಾತರು ಹೇಗೆ ಆಗುತ್ತಾರೆ ? ರಾಜ್ಯದ ಬಹು ಸಂಖ್ಯಾತ ಜಾತಿಗಳಿಗಿಂತ ಅವರೇ ಹೆಚ್ಚಿನ ಜನಸಂಖ್ಯೆ ಇದ್ದಾರೆ ಎಂದರೆ ಅವರು ಹೇಗೆ ಅಲ್ಪ ಸಂಖ್ಯಾತರಾಗುತ್ತಾರೆ. ಸರ್ಕಾರ ಇದಕ್ಕೆ ಉತ್ತರ ಕೊಡಬೇಕು ಎಂದು ಆಗ್ರಹಿಸಿದರು.

ಎಫ್ ಎಸ್ ಎಲ್ ವರದಿ ಬಹಿರಂಗ ಪಡಿಸಲಿ

ಪಾಕ್ ಪರ ಘೋಷಣೆ ಕೂಗಿರುವುದು ಎಫ್ ಎಸ್ ಎಲ್ ವರದಿಯಲ್ಲಿ ಸ್ಪಷ್ಟವಾಗಿದೆ ಎಂಬ ಮಾಹಿತಿ ಇದೆ. ಘೊಷಣೆ ಕೂಗಿದವರು ಭಯೋತ್ಪಾದಕರಿಗೆ ಸಹಕಾರ ನೀಡುವ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಗಳಿವೆ. ಸರ್ಕಾರ ಯಾವ ಕಾರಣಕ್ಕೆ ವರದಿ ಮುಚ್ಚಿಡಲು ಪ್ರಯತ್ನ ಮಾಡುತ್ತಿದೆ ಎಂದು ಪ್ರಶ್ನಿಸಿದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment